KEA Recruitment: ವಿವಿಧ ಸಂಸ್ಥೆಗಳಲ್ಲಿ 708 ಹುದ್ದೆಗಳ ಭರ್ಜರಿ ನೇಮಕಾತಿ, ಅರ್ಜಿ ಆಹ್ವಾನ
ಬೆಂಗಳೂರು, ಅಕ್ಟೋಬರ್ 8: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ಕಾರ್ಖಾನೆ, ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯ ಹೀಗೆ 8 ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ 708 ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿಗಳನ್ನು ಸಲ್ಲಿಸಬೇಕು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆ ಪ್ರಕಾರ, ಅಕ್ಟೋಬರ್ 9 ರಿಂದ ನವೆಂಬರ್ 11ರವರೆಗೆ ಅರ್ಜಿ ಸಲ್ಲಿಸಬಹುದು. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕ ಮಾಡಲಾಗುತ್ತದೆ. OMR ಆಧಾರಿತ ಪರೀಕ್ಷೆ. ಋಣಾತ್ಮಕ ಮೌಲ್ಯಮಾಪನ ಇದ್ದು ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದರಷ್ಟು (1/4) ಅಂಕ ಕಡಿತ ಮಾಡಲಾಗುತ್ತದೆ.

ಒಂದೇ ಪಠ್ಯಕ್ರಮ ಇರುವ ವಿವಿಧ ಇಲಾಖೆಗಳ ಹುದ್ದೆಗಳಿಗೆ ಒಂದೇ ಪರೀಕ್ಷೆ ನಡೆಸಿ ಸಂಬಂಧಪಟ್ಟ ಇಲಾಖೆಗಳಿಗೆ ಮೆರಿಟ್ ಪಟ್ಟಿ ನೀಡಲಾಗುವುದು. ಪರೀಕ್ಷಾ ದಿನಾಂಕವನ್ನು ನಂತರದ ದಿನಗಳಲ್ಲಿ ತಿಳಿಸಲಾಗುವುದು. ಆಸಕ್ತರು ಈಗಿನಿಂದಲೇ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುವುದು ಉತ್ತಮ. ಹೆಚ್ಚಿನ ವಿವರಗಳಿಗೆ http://cetonline.Karnataka.gov.in/kea/ ಭೇಟಿ ನೀಡಬೇಕು ಎಂದು ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ತಿಳಿಸಿದ್ದಾರೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಬಗ್ಗೆ ಸೂಚನೆಗಳು, ಅಗತ್ಯ ಅರ್ಹತೆ ವಿವರ, ವಯೋಮಿತಿ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಶುಲ್ಕ, ಸ್ಪರ್ಧಾತ್ಮಕ ಪರೀಕ್ಷೆಯ ವಿಷಯಗಳು, ಪ್ರವರ್ಗವಾರು ಮತ್ತು ಹುದ್ದೆವಾರು ಹುದ್ದೆಯಾ ವಿವರಗಳು ಮತ್ತು ನೇಮಕಾತಿ ಪ್ರಕ್ರಿಯೆಯ ವಿವರವಾದ ಸೂಚನೆಗಳಿಗಾಗಿ ಪ್ರಾಧಿಕಾರದ ವೆಬ್‌ಸೈಟ್ ನಲ್ಲಿ ನೋಡಿಕೊಳ್ಳಬೇಕು.
ಸ್ಪರ್ಧಾತ್ಮಕ ಪರೀಕ್ಷೆ, ಇತರ ವಿವರ
* OMR ಆಧಾರಿತ ಪರೀಕ್ಷೆ ನಡೆಸಲಾಗುವುದು. ಒಂದು ಪ್ರಶ್ನೆಗೆ OMR ನಲ್ಲಿ 05 ವೃತ್ತಗಳಿದ್ದು, ಮೊದಲ 04 ವೃತ್ತಗಳು ಒಂದು ಸರಿಯಾದ ಉತ್ತರವನ್ನು ಶೇಡ್ ಮಾಡಲು ಸಂಬಂಧಿಸಿವೆ. ಅಭ್ಯರ್ಥಿಗೆ ಯಾವುದಾದರೂ ಪ್ರಶ್ನೆಗೆ / ಪ್ರಶ್ನೆಗಳಿಗೆ ಉತ್ತರ ತಿಳಿದಿಲ್ಲದಿದ್ದರೆ ಕಡ್ಡಾಯವಾಗಿ 05 ನೇ ವೃತ್ತವನ್ನು ಶೇಡ್ ಮಾಡಬೇಕು. ಇಲ್ಲದಿದ್ದಲ್ಲಿ 4 ಅಂಕ ಕಡಿಮ ಮಾಡಲಾಗುವುದು.
* ಋಣಾತ್ಮಕ ಮೌಲ್ಯಮಾಪನವಿದ್ದು, ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶದಷ್ಟು (4) ಅಂಕಗಳನ್ನು ಕಡಿಮೆ ಮಾಡಲಾಗುವುದು.
* ಪರೀಕ್ಷಾ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗುವುದು.
* ಒಂದೇ ಪಠ್ಯಕ್ರಮವಿರುವ ವಿವಿಧ ಇಲಾಖೆಗಳ ಹುದ್ದೆಗಳಿಗೆ ಒಂದೇ ಪರೀಕ್ಷೆ ನಡೆಸಿ ಸಂಬಂಧಪಟ್ಟ ಇಲಾಖೆಗಳಿಗೆ ಮೆರಿಟ್ ಪಟ್ಟಿ ನೀಡಲಾಗುವುದು.
* ಅರ್ಜಿ ಆಹ್ವಾನಿಸಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಸಂಬಂಧ ಪಟ್ಟ ನೇಮಕಾತಿ ಮಾಡಿಕೊಳ್ಳುವ ಜವಾಬ್ದಾರಿಯನ್ನು ಪ್ರಾಧಿಕಾರಗಳಿಗೆ ನೀಡುವುದು ಮಾತ್ರ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸಂಬಂಧಿಸಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ನೀಡಿರುವ ಮಾಹಿತಿಯನುಸಾರ ದಾಖಲೆ ಪರಿಶೀಲಿಸಿ ನಿಯಮಾನುಸಾರ ನೇಮಕಾತಿ ಆದೇಶ ನೀಡುವುದು ಸಂಬಂಧ ಪತ್ರ ನೇಮಕಾತಿ ಪ್ರಾಧಿಕಾರದ ಜವಾಬ್ದಾರಿಯಾಗಿರುತ್ತದೆ ಎಂದು ಅಧಿಸೂಚನೆ ತಿಳಿಸಿದೆ.












Click it and Unblock the Notifications