KEA recruitment; 64 ಹುದ್ದೆ, ವೇತನ 43 ರಿಂದ 83 ಸಾವಿರ ರೂ.ಗಳು

ಬೆಂಗಳೂರು, ಫೆಬ್ರವರಿ 07: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಫೆಬ್ರವರಿ 10ರಿಂದ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು 10/3/2024 ಕೊನೆಯ ದಿನವಾಗಿದೆ.

ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದಲ್ಲಿರುವ 50 ಸಹಾಯಕ ಅಭಿಯಂತರರು (ಸಿವಿಲ್) ಹಾಗೂ 14 'ಸಿ' ಗ್ರೂಪ್ ವೃಂದದ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು.

KEA Recruitment 64 Post At KUWSDB Job Salary Details

ಹುದ್ದೆ, ವೇತನ ವಿವರ; ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ಸಹಾಯಕ ಇಂಜಿನಿಯರ್ (ಸಿವಿಲ್) ಮೂಲ ವೃಂದ 43, ಕಲ್ಯಾಣ ಕರ್ನಾಟಕ 7 ಒಟ್ಟು 50. ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್-ಸಿ) ಮೂಲವೃಂದ 11, ಕಲ್ಯಾಣ ಕರ್ನಾಟಕ ವೃಂದ 3 ಒಟ್ಟು 10.

ನೇಮಕಾತಿ ಅಧಿಸೂಚನೆಯ ಅನ್ವಯ ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಗೆ 43,100 ರಿಂದ 83,900 ರೂ. ವೇತನ ನಿಗದಿ ಮಾಡಲಾಗಿದೆ. ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರೂಪ್-ಸಿ) 27,650 ರಿಂದ 52,650 ರೂ.ಗಳು.

ಶೈಕ್ಷಣಿಕ ವಿದ್ಯಾರ್ಹತೆ; ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವವರು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ BE/B.Tech ಇಂಜಿನಿಯರಿಂಗ್ ಪದವಿಯನ್ನು ಸಿವಿಲ್ ವಿಭಾಗದಲ್ಲಿ ಪಡೆದಿರಬೇಕು. (ಸೂಚನೆ: ಅಂಚೆ ಮತ್ತು ದೂರ ಶಿಕ್ಷಣ ಮುಖಾಂತರ ಪಡೆದ ತಾಂತ್ರಿಕ ಪದವಿಗಳನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ.) ಪ್ರಥಮ ದರ್ಜೆ ಲೆಕ್ಕ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವವರು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಬಿ.ಕಾಂ ಪದವಿ ಪಡೆದಿರಬೇಕು ಎಂದು ನೇಮಕಾತಿ ಅಧಿಸೂಚನೆ ಹೇಳಿದೆ.

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗೆ ಕನಿಷ್ಟ 18 ವರ್ಷಗಳು ತುಂಬಿರತಕ್ಕದ್ದು ಹಾಗೂ ಗರಿಷ್ಟ ವಯೋಮಿತಿ ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35 ವರ್ಷ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು. ನೇಮಕಾತಿಯ ಗರಿಷ್ಟ ವಯೋಮಿತಿಯನ್ನು ಕರ್ನಾಟಕ ನಾಗರೀಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು, 1977ರ ನಿಯಮ 3 (6) ರಲ್ಲಿ ನಿಗದಿಪಡಿಸಿರುವಂತೆ ನಿಗದಿತ ಗರಿಷ್ಟ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

ಅಭ್ಯರ್ಥಿಗಳು ಆನ್‌ಲೈನ್ ಮುಖಾಂತರ ಅರ್ಜಿ ಭರ್ತಿ ಮಾಡುವ ಮೊದಲು ಅರ್ಹತೆಗೆ ಸಂಬಂಧಿಸಿದ ಎಲ್ಲಾ ಸೂಚನೆಗಳನ್ನು ಓದಿಕೊಳ್ಳತಕ್ಕದ್ದು ಹಾಗೂ ನೀಡಿರುವ ಸೂಚನೆಗಳನ್ವಯ ಅರ್ಜಿಯನ್ನು ಭರ್ತಿ ಮಾಡತಕ್ಕದ್ದು. ತಪ್ಪು ಅಥವಾ ಸುಳ್ಳು ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಿದಲ್ಲಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ. ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸಿದ್ದಲ್ಲಿ, ಪ್ರತ್ಯೇಕ ಅರ್ಜಿಯಲ್ಲಿ ಸಲ್ಲಿಸಬೇಕು. ಅಂತಹ ಅಭ್ಯರ್ಥಿಗಳು ಪ್ರತಿ ಹುದ್ದೆಗೆ ಪ್ರತ್ಯೇಕವಾಗಿ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಕೆ ಮಾಡುವ ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗಗಳು (ಪ್ರವರ್ಗ2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳು) 750 ರೂ. ಶುಲ್ಕ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಕಲ ಚೇತನ ಅಭ್ಯರ್ಥಿಗಳು 500 ರೂ. ಶುಲ್ಕವನ್ನು ಪಾವತಿಸಬೇಕು. ಪಾವತಿಸಿದ ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ. ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ. (ಶೇ.40ಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರುವವರು ಮತ್ತು ಅದಕ್ಕೆ ಸಂಬಂಧಿಸಿದಂತೆ ಜಿಲ್ಲಾ ವೈದ್ಯಾಧಿಕಾರಿಗಳಿಂದ ಪ್ರಮಾಣ ಪತ್ರ ಹೊಂದಿರುವವರು).

ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಫ್ ಲೈನ್- ಒಎಂಆರ್ ಮಾದರಿ (Offline-OMR type) ಮೂಲಕ ಪರೀಕ್ಷೆ ನಡೆಸಲಾಗುವುದು. ಪರೀಕ್ಷೆಗಳನ್ನು ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಶಿವಮೊಗ್ಗ ಮತ್ತು ತುಮಕೂರು ಕೇಂದ್ರಗಳಲ್ಲಿ ನಡೆಸಲಾಗುವುದು. ಅಭ್ಯರ್ಥಿಗಳಿಗೆ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಪತ್ರಿಕೆಗಳಲ್ಲಿ ಪ್ರಕಟಣೆಯ ಮೂಲಕ ತಿಳಿಸಲಾಗುವುದು ಹಾಗೂ ಈ ಬಗ್ಗೆ ಮಾಹಿತಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿಯೂ ಪ್ರಕಟಿಸಲಾಗುವುದು.

ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ಕಡ್ಡಾಯ. ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯು ವಿವರಣಾತ್ಮಕ ಪತ್ರಿಕೆಯಾಗಿದ್ದು, ಗರಿಷ್ಠ 150 ಅಂಕಗಳನ್ನು ಒಳಗೊಂಡಿರುತ್ತದೆ ಮತ್ತು ಅಭ್ಯರ್ಥಿಗಳು ಇದರಲ್ಲಿ ಅರ್ಹತೆಗಳಿಸಲು ಕನಿಷ್ಠ 50 ಅಂಕಗಳನ್ನು ಗಳಿಸತಕ್ಕದ್ದು. ಕನಿಷ್ಠ 50 ಅಂಕಗಳನ್ನು ಗಳಿಸದ ಅಭ್ಯರ್ಥಿಗಳು ಆಯ್ಕೆಗೆ ಅರ್ಹರಾಗುವುದಿಲ್ಲ.

ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು, ಎಸ್.ಎಸ್.ಎಲ್.ಸಿ/ 10ನೇ ತರಗತಿ, ಪಿಯುಸಿ ಅಥವಾ ಮೇಲ್ಪಟ್ಟ ಯಾವುದೇ ಪರೀಕ್ಷೆಯಲ್ಲಿ ಕನ್ನಡವನ್ನು ಮುಖ್ಯ ಭಾಷೆಯಾಗಿ (ಪ್ರಥಮ ಭಾಷೆ) ಅಥವಾ ದ್ವಿತೀಯ ಭಾಷೆಯಾಗಿ ಅಥವಾ ಮೇಲಿನ ಪರೀಕ್ಷೆಗಳಲ್ಲಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿ ತೇರ್ಗಡೆಯಾಗಿದ್ದಲ್ಲಿ. ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಹೊಂದುವುದರಿಂದ ವಿನಾಯಿತಿ ಹೊಂದಿರುತ್ತಾರೆ. (ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಹುದ್ದೆಗಳ ಆಯ್ಕೆಗೆ ಪರಿಗಣಿಸುವುದಿಲ್ಲ)

ಅರ್ಹತಾ ಷರತ್ತುಗಳು

* ಭಾರತೀಯ ನಾಗರೀಕನಾಗಿರತಕ್ಕದ್ದು.

* ಒಬ್ಬ ಜೀವಂತ ಪತ್ನಿಗಿಂತ ಹೆಚ್ಚು ಮಂದಿ ಪತ್ನಿಯರನ್ನು ಹೊಂದಿರುವ ಪುರುಷ ಅಭ್ಯರ್ಥಿ ಮತ್ತು ಈಗಾಗಲೇ ಇನ್ನೊಬ್ಬ ಹೆಂಡತಿ ಇರುವ ವ್ಯಕ್ತಿಯನ್ನು ಮದುವೆಯಾಗಿರುವ ಮಹಿಳಾ ಅಭ್ಯರ್ಥಿಯು ಸರ್ಕಾರದಿಂದ ಪೂರ್ವಾನುಮತಿಯನ್ನು ಪಡೆಯದೇ ನೇಮಕಾತಿಗೆ ಅರ್ಹರಾಗುವುದಿಲ್ಲ.

* ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ಅವರ ನೇಮಕಾತಿಯು ಕರ್ತವ್ಯಗಳ ದಕ್ಷ ನಿರ್ವಹಣೆಗೆ ಆತಂಕವನ್ನುಂಟು ಮಾಡುವ ಸಂಭವ ಇರುವ ಯಾವುದೇ ದೈಹಿಕ ನ್ಯೂನತೆಯಿಂದ ಮುಕ್ತರಾಗಿರಬೇಕು.

* ದೈಹಿಕವಾಗಿ ಅನರ್ಹರಾಗಿದ್ದಾರೆಂಬುದಾಗಿ ವೈದ್ಯಕೀಯ ಮಂಡಳಿಯ ವರದಿಯ ಮೇಲೆ ಅನರ್ಹರೆಂಬುದಾಗಿ ತಿರಸ್ಕರಿಸುವ ಪೂರ್ಣ ವಿವೇಚನೆಯನ್ನು ರಾಜ್ಯ ಸರ್ಕಾರವು ಕಾಯ್ದಿರಿಸಿಕೊಂಡಿದೆ ಮತ್ತು ಸರ್ಕಾರದ ವಿವೇಚನೆಯು ಯಾವುದೇ ವಿಧದಲ್ಲೂ ಈ ನಿಯಮಗಳ ಮೂಲಕ ಸೀಮಿತವಾಗಿರುವುದಿಲ್ಲ.

* ಕೇಂದ್ರ ಅಥವಾ ಕರ್ನಾಟಕ ಅಥವಾ ಇತರೆ ರಾಜ್ಯದ ಲೋಕ ಸೇವಾ ಆಯೋಗ ಅಥವಾ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಥವಾ ಯಾವುದೇ ವಿಶ್ವವಿದ್ಯಾನಿಲಯಗಳಿಂದ ನಡೆಸಲಾಗುವ ಪರೀಕ್ಷೆಗಳಿಂದ ಅಥವಾ ನೇಮಕಾತಿಗಳಿಂದ ಖಾಯಂ ಆಗಿ ಡಿಬಾರ್ ಆದ ವ್ಯಕ್ತಿಗಳು ನೇಮಕಾತಿಗೆ ಅರ್ಹರಾಗುವುದಿಲ್ಲ.

* ಯಾವುದೇ ನೈತಿಕ ಪರಿಭಾಷೆಗೆ ಶಿಕ್ಷೆಗೆ ಒಳಪಟ್ಟ ವ್ಯಕ್ತಿ ಅಥವಾ ಕೇಂದ್ರ ಅಥವಾ ಕರ್ನಾಟಕ ಅಥವಾ ಇತರೆ ರಾಜ್ಯದ ಲೋಕಸೇವಾ ಆಯೋಗ ಅಥವಾ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಥವಾ ಯಾವುದೇ ವಿಶ್ವವಿದ್ಯಾನಿಲಯಗಳಿಂದ ನಡೆಸಲಾಗುವ ಪರೀಕ್ಷೆಗಳಿಂದ, ಅಥವಾ ನೇಮಕಾತಿಗಳಿಂದ ತಾತ್ಕಾಲಿಕವಾಗಿ ಡಿಬಾರ್ ಆದ ಅಥವಾ ಅನರ್ಹಗೊಂಡ ವ್ಯಕ್ತಿಯು ಸರ್ಕಾರವು ಎಲ್ಲಾ ಸಂದರ್ಭಗಳನ್ನು ಮರು ಪರಿಶೀಲಿಸಿ ಅವರು ನೇಮಕಾತಿಗೆ ಅರ್ಹರೆಂದು ಪರಿಗಣಿಸುವವರೆಗೂ ನೇಮಕಾತಿಗೆ ಅರ್ಹರಾಗುವುದಿಲ್ಲ.

* ನಿಗದಿತ ಶೈಕ್ಷಣಿಕ ಅರ್ಹತೆಯ ಜೊತೆಗೆ ಈ ಮೇಲ್ಕಂಡ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸಲು http://kea.kar.nic.in ನಲ್ಲಿ ತೋರಿಸುವ ಲಿಂಕ್ ಅನ್ನು ಆಯ್ಕೆ ಮಾಡಿ ಆನ್ ಲೈನ್ ಮುಖಾಂತರ ಮಾತ್ರ ಅರ್ಜಿಯನ್ನು ಭರ್ತಿ ಮಾಡಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-23460460

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+