ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ; 1 ಸಾವಿರ ಹುದ್ದೆಗೆ 9 ಲಕ್ಷ ಅರ್ಜಿ!

ಬೆಂಗಳೂರು, ಮೇ 06: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳ ಬೇಡಿಕೆಯಂತೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಮೇ 15ರ ತನಕ ವಿಸ್ತರಣೆ ಮಾಡಲಾಗಿದೆ.

ಕಂದಾಯ ಇಲಾಖೆ ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳನ್ನು ಕೆಇಎ ಮೂಲಕ ನೇಮಕ ಮಾಡುವ ಪ್ರಕ್ರಿಯೆ ಆರಂಭಿಸಲಾಗಿದೆ. ಈ ಹುದ್ದೆಗಳಿಗೆ ಲಕ್ಷಾಂತರ ಅರ್ಜಿಗಳು ಇದುವರೆಗೂ ಸಲ್ಲಿಕೆಯಾಗಿವೆ.

KEA Recruitment 9 Lakh Applications For One Thousand Post

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆ ಪ್ರಕಾರ ಒಟ್ಟು ಹುದ್ದೆಗಳ ಸಂಖ್ಯೆ 1000. ಆಯ್ಕೆಯಾದ ಅಭ್ಯರ್ಥಿಗಳಿಗೆ 21,400-42,000 ರೂ. ವೇತನ ನಿಗದಿ ಮಾಡಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಮೇ 15ರ ತನಕ ಅವಕಾಶವಿದೆ.

9 ಲಕ್ಷ ಅರ್ಜಿಗಳು: ಈ ಮೊದಲು ಅರ್ಜಿ ಸಲ್ಲಿಕೆ ಮಾಡಲು ಮೇ 4 ಕೊನೆಯ ದಿನವಾಗಿತ್ತು. ಆದರೆ ಅಭ್ಯರ್ಥಿಗಳ ಬೇಡಿಕೆ, ಕೆಲವು ತಾಂತ್ರಿಕ ತೊಂದರೆಗಳ ಕಾರಣ ಅರ್ಜಿ ಸಲ್ಲಿಸಲು ಮೇ 15 ಮತ್ತು ಶುಲ್ಕ ಪಾವತಿ ಮಾಡಲು ಮೇ 18ರ ತನಕ ಅವಕಾಶ ನೀಡಲಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಕೆ ಮಾಡಬೇಕಿದೆ.

ಸದ್ಯದ ಮಾಹಿತಿ ಪ್ರಕಾರ 1 ಸಾವಿರ ಖಾಲಿ ಹುದ್ದೆಗಳಿಗೆ 9 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಇನ್ನೂ ಸಹ ಅರ್ಜಿ ಸಲ್ಲಿಕೆಗೆ ಅವಕಾಶವಿದ್ದು, ಈ ಸಂಖ್ಯೆ ಇನ್ನಷ್ಟು ಹೆಚ್ಚಾಗಲಿದೆ. 9 ಲಕ್ಷ ಅರ್ಜಿಗಳಲ್ಲಿ 4 ಲಕ್ಷ ಜನರು ಮಾತ್ರ ಶುಲ್ಕ ಪಾವತಿ ಮಾಡಿದ್ದಾರೆ. ಅರ್ಜಿ ಸಲ್ಲಿಸಿದವರು ಶುಲ್ಕ ಪಾವತಿ ಮಾಡುವುದು ಕಡ್ಡಾಯ. ಇಲ್ಲವಾದಲ್ಲಿ ಅರ್ಜಿ ತಿರಸ್ಕಾರವಾಗಲಿದೆ ಎಂದು ನೇಮಕಾತಿ ಅಧಿಸೂಚನೆ ಹೇಳಿದೆ.

ಗ್ರಾಮ ಆಡಳಿತ ಅಧಿಕಾರಿ ಹುದ್ದೆ ಕಂದಾಯ ಇಲಾಖೆ ವ್ಯಾಪ್ತಿಗೆ ಬರುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಆದ್ದರಿಂದ ಹೆಚ್ಚಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಿರುವ ನಿರೀಕ್ಷೆ ಇದೆ.

ಕರ್ನಾಟಕ ಸರ್ಕಾರದ ಸುತ್ತೋಲೆ ಸಂಖ್ಯೆ: ಸಿಆಸುಇ 81 ಸೇವನೆ 2017, ದಿನಾಂಕ 27/02/2018ರನ್ವಯ ಈ ವಿದ್ಯಾರ್ಹತೆಗಳನ್ನು ತತ್ಸಮಾನವೆಂದು ಪರಿಗಣಿಸಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಸಿಬಿಎಸ್‌ಸಿ ಮತ್ತು ಐಸಿಎಸ್‌ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ, ಇತರ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 12 ಪರೀಕ್ಷೆ, ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್‌ಐಓಎಸ್) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್/ ಹೆಚ್.ಎಸ್.ಸಿ., ಮೂರು ವರ್ಷಗಳ ಡಿಪ್ಲೋಮಾ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮಾ (ಜೆ.ಓ.ಸಿ/ ಜೆ.ಓ.ಡಿ.ಸಿ/ ಜೆ.ಎಲ್.ಡಿ.ಸಿ).

ಅಲ್ಲದೇ ಅಭ್ಯರ್ಥಿಗಳು ಎನ್‌ಐಓಎಸ್‌ ವತಿಯಿಂದ ನಡೆಸುವ ಒಂದು ಭಾಷಾ ಕೋರ್ಸ್ ಮತ್ತು ಒಂದು ಶೈಕ್ಷಣಿಕ ವಿಷಯದಲ್ಲಿ (ದೂರಕಲಿಕೆ ಮಾದರಿಯಲ್ಲಿ) ಅಥವಾ ಪದವಿ ಪೂರ್ವ ಮಂಡಳಿಯು ನಡೆಸುವ ಪರೀಕ್ಷೆಯಲ್ಲಿ ಒಂದು ಭಾಷೆ ಮತ್ತು ಒಂದು ವಿಷಯದಲ್ಲಿ ಉತ್ತೀರ್ಣರಾದಲ್ಲಿ ಮಾತ್ರ ಪಿಯುಸಿ ಗೆ ತತ್ಸಮಾನವೆಂದು ಪರಿಗಣಿಸಬಹುದು.) ಎಂದು ನೇಮಕಾತಿ ಅಧಿಸೂಚನೆ ಹೇಳಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಕೆ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ತುಂಬಿರತಕ್ಕದ್ದು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗಕ್ಕೆ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷ ಎಂದು ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಕೆ ಮಾಡಲು ಇನ್ನೂ ಸಹ ಅವಕಾಶವಿದೆ. ಆಸಕ್ತರು ಆಸಕ್ತರು http://kea.kar.nic.in ನಲ್ಲಿ ತೋರಿಸುವ ಲಿಂಕ್ ಅನ್ನು ಆಯ್ಕೆ ಮಾಡಿ ಅರ್ಜಿಯನ್ನು ಭರ್ತಿ ಮಾಡಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+