ಕರ್ನಾಟಕದ ವಿವಿಧ ಇಲಾಖೆಗಳ ನೇಮಕಾತಿ; ಏ.17ರಿಂದ ಅರ್ಜಿ ಹಾಕಿ
ಬೆಂಗಳೂರು, ಏಪ್ರಿಲ್ 07; ಹೊಸ ಅಪ್‌ಡೇಟ್; ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 17/4/2023ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡುವ ಪ್ರಕ್ರಿಯೆ ಮುಂದೂಡಿಕೆ ಮಾಡಲಾಗಿದೆ ಎಂದು ಹೇಳಿದೆ. ಮುಂದಿನ ದಿನಾಂಕ ಶೀಘ್ರದಲ್ಲೇ ಪ್ರಕಟವಾಗಲಿದೆ.
ನೇಮಕಾತಿ ಆದೇಶ; ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿಗಳನ್ನು ಆಹ್ವಾನಿಸಿದೆ. ವಿವರವಾದ ಅಧಿಸೂಚನೆ 15/4/2023ರಂದು ಪ್ರಕಟವಾಗಲಿದೆ. ಆನ್‌ಲೈನ್ ಮೂಲಕ 17/4/2023 ರಿಂದ 17/5/2023ರ ತನಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ.
ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬೆಂಗಳೂರು, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು ಮತ್ತು ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಸರ್ಕಾರಿ ಇಲಾಖೆ/ ಸಂಸ್ಥೆಗಳಲ್ಲಿನ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಕೆ ಮಾಡುವವರಿಗಾಗಿ ನೇಮಕಾತಿ ವಿಧಾನ, ಶೈಕ್ಷಣಿಕ ವಿದ್ಯಾರ್ಹತೆ, ಹುದ್ದೆಗಳ ವರ್ಗೀಕರಣ, ಸ್ಮರ್ಧಾತ್ಮಕ ಪರೀಕ್ಷೆ ವಿಧಾನ ಮತ್ತು ನೇಮಕಾತಿಗೆ ಸಂಬಂಧಿಸಿದ ಇತರ ಮಾಹಿತಿಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.
ಈ ಹುದ್ದೆಗಳಿಗೆ ಕೇವಲ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವುದು ಮತ್ತು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವುದು ಅಭ್ಯರ್ಥಿಗಳಿಗೆ ಈ ಮೇಲಿನ ವಿವಿಧ ಹುದ್ದೆಗಳ ನೇಮಕಾತಿಗೆ ಯಾವುದೇ ಹಕ್ಕನ್ನು ನೀಡುವುದಿಲ್ಲ, ನೇಮಕಾತಿಯು ಸರ್ಕಾರವು ನಿಗದಿಪಡಿಸಬಹುದಾದ ಅರ್ಹತಾ ಮಾನದಂಡಗಳಿಗೆ ಒಳಪಟ್ಟಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೇಲಿನ ಯಾವುದೇ ನಿಯಮಗಳು/ ಕಾರ್ಯವಿಧಾನಗಳಿಗೆ ಸಂಬಂಧಿಸಿದಂತೆ ವ್ಯತ್ಯಾಸ ಅಥವಾ ಅಸ್ಪಷ್ಟತೆ ಕಂಡು ಬಂದಲ್ಲಿ, ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು, 1977 / ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 (ತಿದ್ದುಪಡಿಗಳು) ರಲ್ಲಿರುವಂತೆ ಅನ್ವಯಿಸುತ್ತದೆ ಎಂದು ಪ್ರಕಟಣೆ ಹೇಳಿದೆ.
ಹುದ್ದೆಗಳ ವಿವರಗಳು ಹೀಗಿವೆ; ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಕಲ್ಯಾಣ ಅಧಿಕಾರಿ 12, ಕ್ಷೇತ್ರ ನಿರೀಕ್ಷಕರು 60, ಪ್ರಥಮ ದರ್ಜೆ ಸಹಾಯಕರು 12, ಆಪ್ತ ಸಹಾಯಕರು 2, ದ್ವಿತೀಯ ದರ್ಜೆ ಸಹಾಯಕರು 100 ಸೇರಿದಂತೆ ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ ಸಹಾಯಕ ವ್ಯವಸ್ಥಾಪಕರು 10, ಗುಣಮಟ್ಟ ನಿರೀಕ್ಷಕರು 23, ಹಿರಿಯ ಸಹಾಯಕರು (ಲೆಕ್ಕ) 33, ಹಿರಿಯ ಸಹಾಯಕರು 57, ಕಿರಿಯ ಸಹಾಯಕರು 263 ಹುದ್ದೆ ತುಂಬಲಾಗುತ್ತಿದೆ.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬೆಂಗಳೂರು ಇಲ್ಲಿ ಜ್ಯೂನಿಯರ್ ಪ್ರೊಗ್ರಾಮರ್ (ಗ್ರೂಪ್-ಬಿ) 10, ಸಹಾಯಕ ಇಂಜಿನಿಯರ್ (ಸಿವಿಲ್) (ಗ್ರೂಪ್-ಬಿ) 1, ಸಹಾಯಕ ಗ್ರಂಥಪಾಲಕ (ಗ್ರೂಪ್-ಸಿ), ಸಹಾಯಕ (ಗ್ರೂಪ್-ಸಿ) 27, ಕಿರಿಯ ಸಹಾಯಕ (ಗ್ರೂಪ್-ಸಿ) 49 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು ಇಲ್ಲಿ ಸಹಾಯಕ ವ್ಯವಸ್ಥಾಪಕರು (ತಾಂತ್ರಿ) ಗ್ರೂಪ್ -ಬಿ 2, ಸಹಾಯಕ ವ್ಯವಸ್ಥಾಪಕರು (ತಾಂತ್ರಿಕೇತರ) ಗ್ರೂಪ್-ಬಿ 1, ಆಪ್ತ ಕಾರ್ಯದರ್ಶಿ ಗ್ರೂಪ್-ಸಿ, ಹಿರಿಯ ಸಹಾಯಕರು (ತಾಂತ್ರಿಕ) ಗ್ರೂಪ್-ಸಿ 2, ಹಿರಿಯ ಸಹಾಯಕರಯ (ತಾಂತ್ರಿಕೇತರ) ಗ್ರೂಪ್-ಸಿ 2, ಸಹಾಯಕರು (ತಾಂತ್ರಿಕ) ಗ್ರೂಪ್-ಸಿ, ಸಹಾಯಕರು (ತಾಂತ್ರಿಕೇತರ) ಗ್ರೂಪ್-ಸಿ 1 ಹುದ್ದೆಗಳಿಗೆ ಅರ್ಜಿ ಕರೆಯಲಾಗುತ್ತದೆ.
ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ಬೆಂಗಳೂರು ಇಲ್ಲಿ ಸಹಾಯಕ ವ್ಯವಸ್ಥಾಪಕರು 23, ಮೇಲ್ವಿಚಾರಕರು 23, ಪದವೀಧರ ಗುಮಾಸ್ತರು 6, ಗುಮಾಸ್ತರು 13, ಮಾರಾಟ ಪ್ರತಿನಿಧಿ/ ಪ್ರೊಗ್ರಾಮರ್ 6 ಹುದ್ದೆಗಳನ್ನು ತುಂಬಲಾಗುತ್ತಿದೆ.












Click it and Unblock the Notifications