KEA Recruitment: ಕೆಎಸ್‌ಡಿಎಲ್, ಕೃಷಿ ಇಲಾಖೆ ನೇಮಕಾತಿ- ಪರೀಕ್ಷೆ ದಿನಾಂಕ ಬದಲಾವಣೆ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನೇಮಕಾತಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಶನಿವಾರ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ನೀಡಿದ್ದಾರೆ. ಪ್ರಾಧಿಕಾರದ ಅಡಿಯಲ್ಲಿ ನಡೆಯಬೇಕಿದ್ದ ಕೆಲವು ಇಲಾಖೆಗಳ ನೇಮಕಾತಿ ಪರೀಕ್ಷೆಗಳ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆ. ತಾಂತ್ರಿಕ ಕಾರಣವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಭ್ಯರ್ಥಿಗಳು ಗೊಂದಲ ಮಾಡಿಕೊಳ್ಳದಂತೆ ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ಹೇಳಿದರು.
ಕರ್ನಾಟಕ ಸೋಪು ಮತ್ತು ಮಾರ್ಜಕ ಕಂಪನಿ (KSDL) ಮತ್ತು ಕೃಷಿ ಮಾರಾಟ ಇಲಾಖೆಯಲ್ಲಿನ ಖಾಲಿ ಹುದ್ದೆಗಳಿಗೆ ನೇಮಕಾತಿ ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಸದರಿ ಹುದ್ದೆಗಳ ನಿಗದಿತ ಪರೀಕ್ಷೆಗಳು ಮುಂದಿನ ತಿಂಗಳು 2026 ಜನವರಿ 10 ಮತ್ತು 12ರಂದು ನಡೆಯಬೇಕಿತ್ತು. ಆದರೆ ಈಗ ಈ ಎರಡೂ ಪರೀಕ್ಷೆಗಳನ್ನು ಒಂದೇ ದಿನ 2026 ಜನವರಿ 18 ರಂದು ಭಾನುವಾರ ನಡೆಸಲು ಪ್ರಾಧಿಕಾರ ನಿರ್ಧರಿಸಿದೆ. ಈ ಪರೀಕ್ಷಾ ದಿನಾಂಕ ಬದಲಾವಣೆಗೆ ಸಂಪೂರ್ಣವಾಗಿ ಆಡಳಿತಾತ್ಮಕ ಮತ್ತು ತಾಂತ್ರಿಕ ಕಾರಣಗಳಿವೆ ಎಂದು ತಿಳಿಸಿದರು.

ಜನವರಿ 18 ರಂದು ನಡೆಯುವ ಪರೀಕ್ಷೆಗಳು ಪೂರ್ವ ನಿಗದಿತವಾಗಿ ನಡೆಯಲಿವೆ. ಪರೀಕ್ಷೆಯ ಸಮಯ, ಕೇಂದ್ರ ಮತ್ತು ಇತರ ನಿಯಮಗಳಲ್ಲಿ ಯಾವ ಬದಲಾವಣೆಗಳು ಅಗಿರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಹೊಸ ದಿನಾಂಕ ನೋಡಿಕೊಂಡು ಪರೀಕ್ಷಾರ್ಥಿಗಳು ಅಭ್ಯಾಸ ತಯಾರಿ ಮುಂದುವರಿಯಬೇಕಿದೆ.
ಇತರ ಪರೀಕ್ಷೆಗಳ ದಿನಾಂಕದಲ್ಲಿ ಬದಲಾವಣೆ ಇಲ್ಲ
ವಿವಿಧ ಇಲಾಖೆಗಳ ನೇಮಕಾತಿಗಳ ಪರೀಕ್ಷೆಗಳು 2026 ಜನವರಿ 19 ರಂದು ನಡೆಯಲಿವೆ. ಈ ದಿನಾಂಕದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಅವತ್ತಿನ ಪರೀಕ್ಷೆಗಳು ಅದೇ ದಿನ ನಡೆಯಲಿವೆ. ಈ ಬಗ್ಗೆ ಅಭ್ಯರ್ಥಿಗಳಿಗೆ ಗೊಂದಲ ಬೇಡ. ಈ ಬಗ್ಗೆ ಕೆಇಎ ವೆಬ್‌ಸೈಟ್ ನಲ್ಲಿ ಅಧಿಕೃತ ಮಾಹಿತಿ ಪ್ರಕಟಿಸಿದ್ದು, ಅಭ್ಯರ್ಥಿಗಳ ಜಾಲತಾಣಕ್ಕೆ ಭೇಟಿ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ವದಂತಿಗಳಿಗೆ ಕಿವಿಗೊಡದಂತೆ ಅವರು ಎಚ್ಚರಿಕೆ ಸಹ ನೀಡಿದ್ದಾರೆ.
ಈ ಮೇಲೆ ತಿಳಿಸಿದ ನೇಮಕಾತಿಗಳಿಗೆ ಸಂಬಂಧಿಸಿದ ಪರೀಕ್ಷಾ ದಿನಾಂಕ ಬದಲಾವಣೆಯ ಸಂಪೂರ್ಣ ವಿವರಗಳು, ಅಧಿಕೃತ ಅಧಿಸೂಚನೆ, ಪರೀಕ್ಷಾ ಆಯ್ಕೆ ಮತ್ತು ಇತರ ಸೂಚನೆಗಳು KEA ಅಧಿಕೃತ ವೆಬ್‌ಸೈಟ್ (kea.kar.nic.in) ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ವೆಬ್‌ಸೈಟ್‌ಗಳನ್ನು ಪರಿಶೀಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯುಜಿನೀಟ್ 2025: ಬಾಕಿ ಸೀಟು ಹಂಚಿಕೆ ಅಪ್ಡೇಟ್ಸ್
ಯುಜಿನೀಟ್ (UGNEET) 2025 ವೈದ್ಯಕೀಯ ಪದವಿ ಕೋರ್ಸ್ ಪ್ರವೇಶಕ್ಕೆ ಎರಡನೇ ಸ್ಟ್ರೇ ವೇಕೆನ್ಸಿ ಸುತ್ತಿನ ನಂತರ ಬಾಕಿ ಉಳಿದಿರುವ ಒಟ್ಟು 7 ಸೀಟುಗಳಿಗೆ ಡಿಸೆಂಬರ್ 29ರಂದು ವಿಶೇಷ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತೀರ್ಮಾನಿಸಿದೆ. ಹೊಸಕೋಟೆಯ ಎಂವಿಜೆ ವೈದ್ಯಕೀಯ ಕಾಲೇಜಿನಲ್ಲಿ 5 ಹಾಗೂ ಕಲಬುರಗಿ ಎಂಆರ್ ಎಂಸಿ ವೈದ್ಯಕೀಯ ಕಾಲೇಜಿನಲ್ಲಿ 2 ಸೀಟು ಹಂಚಿಕೆಗೆ ಬಾಕಿ ಇವೆ. ಆಸಕ್ತ ಅರ್ಹರು ನಿಗದಿತ ಕೋರ್ಸ್ ಶುಲ್ಕದಷ್ಟು ಡಿ.ಡಿ ಕೊಟ್ಟು ಈ ಸುತ್ತಿನಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ ಎಂದು ಎಚ್.ಪ್ರಸನ್ನ ಹೇಳಿದರು.
ಎರಡೂ ಕಾಲೇಜುಗಳಲ್ಲಿ ಅದರ್ಸ್ ಕೋಟಾ ದಲ್ಲಿ ಸೀಟುಗಳು ಲಭ್ಯ ಇವೆ. ಆಸಕ್ತರು ನಿಗದಿತ ಶುಲ್ಕದ ಡಿ.ಡಿ (ಎಂವಿಜೆ ಕಾಲೇಜಿಗೆ 40,11,950 ರೂ. ಎಂಆರ್ ಎಂಸಿ ಕಾಲೇಜಿಗೆ 39,11,950 ರೂ. ಹಾಗೂ ಮೂಲ ದಾಖಲೆಗಳ ಸಮೇತ ಡಿಸೆಂಬರ್ 29ರಂದು ಮಧ್ಯಾಹ್ನ 12 ಗಂಟೆಯೊಳಗೆ ಕೆಇಎ ಕಚೇರಿಗೆ ಬರಬೇಕು. ನಂತರ ಮಧ್ಯಾಹ್ನ 1ಗಂಟೆವರೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಅವಕಾಶ ನೀಡಲಾಗುವುದು. ಮಧ್ಯಾಹ್ನ 2 ಗಂಟೆಗೆ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ. ಡಿಸೆಂಬರ್ 30ರೊಳಗೆ ಕಾಲೇಜಿಗೆ ಪ್ರವೇಶ ನೀಡಲಾಗುವುದೆಂದು ತಿಳಿಸಿದರು.
-
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ












Click it and Unblock the Notifications