ಕೆಇಆರ್‌ಸಿ ನೇಮಕಾತಿ; ಬೆಂಗಳೂರಲ್ಲಿ ಕೆಲಸ
ಬೆಂಗಳೂರು, ಡಿಸೆಂಬರ್ 07: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಲು ಡಿಸೆಂಬರ್ 19 ಕೊನೆಯ ದಿನವಾಗಿದೆ.
ನಿರ್ದೇಶಕ ಮತ್ತು ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ. ಕೆಇಆರ್‌ಸಿ ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ನಿಗದಿ ಮಾಡಲಾಗಿದೆ.
ನಿರ್ದೇಶಕ (ತಾಂತ್ರಿಕ) ಹುದ್ದೆಗೆ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರಬೇಕು. ಹೆಚ್ಚುವರಿ ನಿರ್ದೇಶಕ (ದರ) ಹುದ್ದೆಗೆ ಅರ್ಥಶಾಸ್ತ್ರದಲ್ಲಿ ಪದವಿ ಅಥವ ಸಿಎ ಪೂರ್ಣಗೊಳಿಸಿರಬೇಕು. ಸಹಾಯಕ ಹುದ್ದೆಗೆ ಪದವಿ ಅಥವ ಕಾನೂನು ಪದವಿ ಪಡೆದಿರಬೇಕು.

ಅರ್ಜಿಗಳನ್ನು ಸಲ್ಲಿಸುವಾಗ ಸರಿಯಾದ ಇ-ಮೇಲ್ ವಿಳಾಸ, ಮೊಬೈಲ್ ನಂಬರ್ ಕೊಡಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಮುಂದಿನ ಹಂತದ ಪ್ರಕ್ರಿಯೆಗೆ ಇವುಗಳನ್ನು ಬಳಕೆ ಮಾಡಲಾಗುತ್ತದೆ.
ವೆಬ್ ಸೈಟ್‌ನಲ್ಲಿ ಲಭ್ಯವಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಿಕೊಂಡು, ಭರ್ತಿ ಮಾಡಿ ಸಲ್ಲಿಸಬೇಕು ಎಂದು ತಿಳಿಸಲಾಗಿದೆ. ಡಿಸೆಂಬರ್ 19 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸಲು ವಿಳಾಸ : Secretary, KERC, No. 16, C-1, Miller Tank Bed Area, Vasanthanagara, Bengaluru - 560052
ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ












Click it and Unblock the Notifications