ಅರಣ್ಯ ಇಲಾಖೆ ನೇಮಕಾತಿ, 10ನೇ ಕ್ಲಾಸ್ ಪಾಸಾದವರು ಅರ್ಜಿ ಹಾಕಿ
ಬೆಂಗಳೂರು, ಫೆಬ್ರವರಿ 06 : ಕರ್ನಾಟಕ ಅರಣ್ಯ ಇಲಾಖೆ ಅರಣ್ಯ ವೀಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 6/3/2019 ಕೊನೆಯ ದಿನವಾಗಿದೆ.
ಅರಣ್ಯ ಇಲಾಖೆ ಅರಣ್ಯ ವೀಕ್ಷಕ (Forest Watcher ) ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ಮಾಡಬೇಕಿದೆ. ಹಲವು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ವರ್ಷದ ಕನಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿ 30 ವರ್ಷಗಳು.
ವೇತನ ಶ್ರೇಣಿ : ಆಯ್ಕೆಯಾದ ಅಭ್ಯರ್ಥಿಗಳಿಗೆ 18,600 ರಿಂದ 32, 600 ರೂ. ವೇತನ ಶ್ರೇಣಿ ನಿಗದಿ ಮಾಡಲಾಗಿದೆ.
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲಾತಿಗಳ ಪರಿಶೀಲನೆ, ಮೆರಿಟ್ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications