KFD Jobs 2023: ಕರ್ನಾಟಕ ಅರಣ್ಯ ಇಲಾಖೆಯಲ್ಲಿ 540 ಹುದ್ದೆ: PUC ಆದವರು ಅರ್ಜಿ ಹಾಕಿ, ಮಾಹಿತಿ
ಬೆಂಗಳೂರು, ನವೆಂಬರ್ 30: ಕರ್ನಾಟಕ ಅರಣ್ಯ ಇಲಾಖೆ (KFD) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭಿಸಿದೆ. ಈ ನಿಮಿತ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಕೆಲಸ ಹುಡುಕುತ್ತಿರುವವರು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವಂತೆ ಕೋರಲಾಗಿದೆ.
ಕರ್ನಾಟಕ ಅರಣ್ಯ ಇಲಾಖೆ (KFD)ಯಲ್ಲಿ ಒಟ್ಟು 540 ಫಾರೆಸ್ಟ್ ಗಾರ್ಡ್ ಹುದ್ದೆಗಳು ಖಾಲಿ ಇವೆ, ಆಸಕ್ತರು ಅರ್ಜಿ ಸಲ್ಲಿಸಬಹುದು. ಮುಂದಿನ ತಿಂಗಳ ಡಿಸೆಂಬರ್ 30ರಂದು ಅರ್ಜಿ ಸಲ್ಲಿಕೆಗೆ ಕೊನೆ ದಿನವಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಡಿಸೆಂಬರ್ 1ರಿಂದ ಆರಂಭವಾಗಿದೆ. ಕೊನೆ ದಿನದವರೆಗೆ ಕಾಯದೇ ಈ ಕೂಡಲೇ ಆನ್ಲೈನ್ ಅರ್ಜಿ ಸಲ್ಲಿಸಬೇಕು ಎಂದು ಇಲಾಖೆ ಮಾಹಿತಿ ನೀಡಿದೆ.

ಅರ್ಜಿ ಸಲ್ಲಿಸುವ ಮೊದಲು ಹುದ್ದೆಗೆ ಸಂಬಂಧಿಸಿದ ಮಾಹಿತಿ, ವೇತನ, ಶುಲ್ಕ ಸೇರಿದಂತೆ ನೇಮಕಾತಿ ಮಾಹಿತಿ ಇಲ್ಲಿ ತಿಳಿಯಬಹುದು.
ಪೂರ್ಣ ನೇಮಕಾತಿ ಹೀಗಿರಲಿದೆ
ಸಂಸ್ಥೆ ಹೆಸರು: ಕರ್ನಾಟಕ ಅರಣ್ಯ ಇಲಾಖೆ
ಹುದ್ದೆ ಹೆಸರು: ಫಾರೆಸ್ಟ್ ಗಾರ್ಡ್
ಖಾಲಿ ಹುದ್ದೆ ಎಷ್ಟು: 540
ಮಾಸಿಕ ಸಂಬಳ: ₹18,600-32,600
ಪೋಸ್ಟಿಂಗ್: ಕರ್ನಾಟಕ
ವಯೋಮಿತಿ 18- 35 ವರ್ಷ
ವಿದ್ಯಾರ್ಹತೆ ಮಾಹಿತಿ
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಭ್ಯರ್ಥಿಗಳು ಕರ್ನಾಟಕದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಇಲ್ಲವೇ ಮಂಡಳಿಯಿಂದ ಕಡ್ಡಾಯವಾಗಿ 12ನೇ ತರಗತಿ/ PUC ಪೂರ್ಣಗೊಳಿಸಿರಬೇಕು ಎಂದು ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆ ಹೇಳಿದೆ.

ವಯಸ್ಸಿನ ಮಿತಿ
ಅರಣ್ಯ ಇಲಾಖೆಯಲ್ಲಿನ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವ ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 30ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು ಎಂದು ನಿಗದಿ ಮಾಡಿದೆ. 2ಎ, 2ಬಿ, 3ಎ, 3ಬಿ, ಒಬಿಸಿ ಅಭ್ಯರ್ಥಿಗಳು- 2 ವರ್ಷ
ಪರಿಶಿಷ್ಟ ಜಾತಿ-ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ ಮೂರು ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕದ ವಿವರ-ವೇತನ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ/ಪ್ರವರ್ಗ-1 ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕ ಇದೆ. ಸಾಮಾನ್ಯ ಅಭ್ಯರ್ಥಿಗಳಿಗೆ 200 ರೂಪಾಯಿ ಇದೆ. ಇನ್ನೂ ಆಯ್ಕೆ ಆಗುವವರಿಗೆ ಕರ್ನಾಟಕದಲ್ಲಿಯೇ ಪೋಸ್ಟಿಂಗ್ ಕೊಟ್ಟು 18,600-32,600ವರೆಗೆ ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ ನಡೆಯಲಿದೆ. ನಂತರ ಸಂದರ್ಶನ ನಡೆಸಿ ಬಳಿಕ ವೈದ್ಯಕೀಯ ಫಿಟ್ನೆಸ್ ಪರೀಕ್ಷೆ ಇರಲಿದೆ.
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಹಾಕಲು ಇಲ್ಲಿನ (https://kfdrecruitment.in/) ವೆಬ್‌ಸೈಟ್‌ಗೆ ಬೇಡಿ ನೀಡಿ ಅರ್ಜಿ ಸಲ್ಲಿಸಬೇಕು.
ನೆನಪಿಡಬೇಕಾದ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನ: ಡಿಸೆಂಬರ್ 01
ಅರ್ಜಿ ಸಲ್ಲಿಕೆ ಕೊನೆ ದಿನ: ಡಿಸೆಂಬರ್ 30
ಅರ್ಜಿ ಶುಲ್ಕ ಪಾವತಿಗೆ ಕಡೆ ದಿನ: ಜನವರಿ 5












Click it and Unblock the Notifications