KFD Recruitment 2023: ಸರ್ಕಾರಿ ಉದ್ಯೋಗಕ್ಕಾಗಿ ಕೂಡಲೇ ಅರ್ಜಿ ಹಾಕಿ

ಬೆಂಗಳೂರು, ಏಪ್ರಿಲ್ 09: ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯು (KFD) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹರನ್ನು ನೇಮಕ ಮಾಡಿಕೊಳ್ಳಲಿದೆ. ಈ ಸಂಬಂಧ ಅರ್ಜಿ ಆಹ್ವಾನಿಸಿದೆ. ಸರ್ಕಾರಿ ಉದ್ಯೋಗ ಸೇರಯಸುವ ಅಭ್ಯರ್ಥಿಗಳು ಕೂಡಲೇ ಅರ್ಜಿ ಹಾಕಬೇಕಿದೆ.

ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ (KFD) ಒಟ್ಟು 19 ಹುದ್ದೆಗಳು ಖಾಲಿ ಇವೆ. ಈ ಎಲ್ಲ ಹುದ್ದೆಗಳು ಮೈಸೂರು, ಕೊಡಗು, ಚಾಮರಾಜನಗರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಖಾಲಿ ಇವೆ. ಆಸಕ್ತಿರು ಇದೇ ತಿಂಗಳ ಏಪ್ರಿಲ್ 29ರೊಳಗಾಗಿ ಆಪ್‌ಲೈನ್‌ ಅಂದರೆ ಅಂಚೆ ಮೂಲಕ ಅರ್ಜಿ ಹಾಕಬೇಕು.

KFD Recruitment 2023: Karnataka Forest Department Invited Fulfill For 19 Posts By Eligible

ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೂ ಮುನ್ನ ಒಟ್ಟು ಹುದ್ದೆಗಳ ಮಾಹಿತಿ, ಅರ್ಜಿ ಸಲ್ಲಿಕೆ ಹೇಗೆ? ಶೈಕ್ಷನಿಕ ಅರ್ಹತೆ, ಅರ್ಜಿ ಸಲ್ಲಿಕೆ ವಿಧಾನ, ವಯೋಮಿತಿ ಇನ್ನಿತರ ಮಾಹಿತಿಯನ್ನು ಇಲ್ಲಿ ತಿಳಿಯಬಹುದು.

ಹುದ್ದೆಯ ಸಂಪೂರ್ಣ ಮಾಹಿತಿ ತಿಳಿಯಿರಿ
ಖಾಲಿ ಹುದ್ದೆ- 19
ಹುದ್ದೆ ಹೆಸರು- ಆನೆ ಕಾವಾಡಿಗ
ಉದ್ಯೋಗದ ಸ್ಥಳ- ಕರ್ನಾಟಕ
ಶೈಕ್ಷಣಿಕ ಅರ್ಹತೆ - ಕನ್ನಡ ಭಾಷೆ ಬರಬೇಕು
ತಿಂಗಳ ಸಂಬಳ - 18,600-32,600 ರೂಪಾಯಿ
ಅರ್ಜಿ ಸಲ್ಲಿಕೆಗೆ ಅಂತಿಮ ದಿನ- ಏಪ್ರಿಲ್ 29

ಹುದ್ದೆಯ ಇತರ ಮಾಹಿತಿಯನ್ನು ನೋಡುವುದಾದರೆ ಒಟ್ಟು 19 ಹುದ್ದೆಗಳ ಪೈಕಿ ಕೊಡಗು ಜಿಲ್ಲೆಯಲ್ಲಿ4, ಚಾಮರಾಜನಗರ ವ್ಯಾಪ್ತಿಯಲ್ಲಿ 6 ಮತ್ತು ಮೈಸೂರು ಭಾಗದಲ್ಲಿ 5 ಹಾಗೂ ಮಲೆನಾಡಿನ ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯಲ್ಲಿ 4 ಹುದ್ದೆಗಳು ಖಾಲಿ ಇವೆ. ಆಯ್ಕೆ ಯಾಗುವ ಅಭ್ಯರ್ಥಿಗಳು ಇಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆ ಏನು?
ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನ್ನಡ ಭಾಷೆಯನ್ನು ಸ್ಪಷ್ಟವಾಗಿ ಮಾತನಾಡಲು ಮತ್ತು ಅರ್ಥ ಮಾಡಿಕೊಳ್ಳಲು ಬರಬೇಕು. ಅಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು.

KFD Recruitment 2023: Karnataka Forest Department Invited Fulfill For 19 Posts By Eligible

ವಯಸ್ಸಿನ ಮಿತಿ ನೋಡುವುದಾರೆ ಅಧಿಸೂಚನೆ ಪ್ರಕಾರ, ಉದ್ಯೋಗಾಸಕ್ತ ಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. ಜಾತಿಯಾಧಾರಿತ ಅಂದರೆ 2ಎ, 2ಬಿ, 3ಎ, 3ಬಿ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ, ಇರಲಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷ ವಯಸ್ಸಿನ ಸಡಿಲಿಕೆ ಇರಲಿದೆ ಎಂದು ಹೇಳಲಾಗಿದೆ.

ಅರ್ಜಿ ಸಲ್ಲಿಕೆ- ವೇತನದ ವಿವರ
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಮೊದಲು ಅಧಿಸೂಚನೆಯನ್ನು ಪೂರ್ತಿಯಾಗಿ ಓದಿಕೊಳ್ಳಬೇಕು. ಅದರಲ್ಲಿ ತಿಳಿಸಿರುವಂತೆ ತಾವು ಭರ್ತಿ ಮಾಡಿದ ಅರ್ಜಿಯನ್ನು ದಾಖಲೆಗಳ ಸಹಿತವಾಗಿ ಆಯಾ ಅರಣ್ಯ ವಲಯ ಅಧಿಕಾರಿಗಳಿಗೆ ಏಪ್ರಿಲ್
29ಕ್ಕೆ ಅಂಚೆ ಮೂಲಕ (ಆಫ್‌ಲೈನ್) ರವಾನಿಸಬೇಕು.

ಇನ್ನೂ ಆಯ್ಕೆ ಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ತಿಂಗಳಿಗೆ 18,600-32,600 ರೂಪಾಯಿವರೆಗೆ ಸಂಬಳ ಸಿಗಲಿದೆ.ಹೆಚ್ಚಿನ ಮಾಹಿತಿಗೆ ಈ ವೆಬ್‌ಸೈಟ್‌ಗೆ ಭೇಟಿ ಕೊಡಿ https://aranya.gov.in/aranyacms/(S(u3gz5otnko4nliirnpzdiyw2))/English/Home.aspx

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+