KHPT Recruitment: ಬೆಂಗಳೂರಲ್ಲಿ ಸರ್ಕಾರಿ ಉದ್ಯೋಗ ಖಾಲಿ ಇದೆ, ಡಿಗ್ರಿ ಪಾಸಾದವರು ಅರ್ಜಿ ಹಾಕಿ

ಬೆಂಗಳೂರು, ಆಗಸ್ಟ್ 25: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ತನ್ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅನೇಕ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಆಸಕ್ತ ಅಭ್ಯರ್ಥಿಗಳು ಸೆಪ್ಟಂಬರ್ 2ರೊಳಗೆ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬೇಕು. ವೇತನ, ವಿವರ, ನೇಮಕಾತಿ ಮಾಹಿತಿ ಇಲ್ಲಿದೆ.

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ನಲ್ಲಿ ಒಟ್ಟು ಒಂದು ಮ್ಯಾನೇಜರ್ ಫೈನಾನ್ಸ್ ಹುದ್ದೆ ಖಾಲಿ ಇದೆ. ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗ ಬಯಸುವವರು ಕೊನೆ ದಿನಾಂಕವರೆಗೆ ಕಾಯದೇ ಕೂಡಲೇ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು (https://www.khpt.org/work-with-us/vacancies-form/?post_applied_for=31342) ಇಲ್ಲಿಗೆ ಭೇಟಿ ನೀಡಬೇಕು.

KHPT Recruitment Application for Manager Finance Post

ನೇಮಕಾತಿ ಪೂರ್ಣ ಮಾಹಿತಿ

ನೇಮಕಾತಿ ಸಂಸ್ಥೆ: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್

ಹುದ್ದೆ: ಮ್ಯಾನೇಜರ್ ಫೈನಾನ್ಸ್ ಹುದ್ದೆ

ಒಟ್ಟು ಹುದ್ದೆ: ಒಂದು

ಪೋಸ್ಟಿಂಗ್: ಬೆಂಗಳೂರು

ಅರ್ಜಿ ಸಲ್ಲಿಕೆ: ಆನ್‌ಲೈನ್

ಅರ್ಜಿ ಸಲ್ಲಿಕೆ ಕೊನೆ ದಿನ: ಸೆಪ್ಟಂಬರ್ 02

ಶೈಕ್ಷಣಿಕ ಅರ್ಹತೆ

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ಹೇಳುವಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಬಿಕಾಂ ಪದವಿ, ಬ್ಯುಸಿನೆಸ್‌ ಅಡ್ಮಿನಿಸ್ಟ್ರೇಶನ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಿದೆ.

KHPT Recruitment Application for Manager Finance Post

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇಡುವಂತೆ ಹೇಳಲಾಗಿದೆ. ಜಾತಿ ಮೀಸಲಾತಿಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅಭ್ಯರ್ಥಿಗಳ ಆಯ್ಕೆ ಹೇಗೆ?

ಅಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ನಂತರ ನೇರವಾಗಿ ಸಂಸರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ನಿಗದಿ ಮಾಡಲಾಗಿಲ್ಲ.

ಆಯ್ಕೆ ಆಗುವವರಿಗೆ ರಾಜಧಾನಿ ಬೆಂಗಳೂರಿನಲ್ಲಿಯೇ ಪೋಸ್ಟಿಂಗ್ ನೀಡಲಾಗುತ್ತದೆ. ಸದ್ಯ ವೇತನ ನಿಯಮಾನುಸಾರ ಇರಲಿದ್ದು, ಸದ್ಯಕ್ಕೆ ಇಂತಿಷ್ಟು ವೇತನ ಎಂದು ಅಧಿಸೂಚನೆಯಲ್ಲಿ ತಿಳಿಸಿಲ್ಲ.

ಅಭ್ಯರ್ಥಿಗಳು ಆನ್​ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಕೊನೆಯ ದಿನಾಂಕ ಸೆಪ್ಟೆಂಬರ್‌ 2ರವರೆಗೆ ಕಾಯದೇ ಈ ಕೂಡಲೇ ಸೂಕ್ತ ದಾಖಲೆಗಳ ಸಮೇತ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಒಮ್ಮೆ ಅಧಿಸೂಚನೆ ಓದಿಕೊಳ್ಳುವುದು ಒಳಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+