KIOCL Job Recruitment: ಬೆಂಗಳೂರಿನಲ್ಲಿದೆ ಮಾಸಿಕ ರೂ.2.60 ಲಕ್ಷ ವೇತನದ ಉದ್ಯೋಗ
ಬೆಂಗಳೂರು, ಅಕ್ಟೋಬರ್ 27: ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲೊಂದು ಸುವರ್ಣ ಅವಕಾಶ ಇದೆ. ಇಲ್ಲಿನ ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ (KIOCL) ಖಾಲಿ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಆಸಕ್ತ ಅಭ್ಯರ್ಥಿಗಳಿಗೆ ಆಕರ್ಷಕ ವೇತನ ಇರಲಿದ್ದು, ನವೆಂಬರ್ 10 ರೊಳಗೆ ಅರ್ಜಿ ಸಲ್ಲಿಸಬಹುದು.
ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ (KIOCL) ಒಂದು ಕಾರ್ಯದರ್ಶಿ ಹುದ್ದೆ ಖಾಲಿ ಇದೆ. ಈ ಹುದ್ದೆಗೆ ಅರ್ಹ ಆಸಕ್ತರು ಕೂಡಲ ಅರ್ಜಿಯನ್ನು ಹಾಕಬೇಕು. ಅಭ್ಯರ್ಥಿಗಳಿಗೆ ಆನ್‌ಲೈನ್ ಹಾಗೂ ಆಫ್‌ಲೈನ್ ಎರಡರಲ್ಳೂ ಅರ್ಜಿ ಸಲ್ಲಿಕೆ ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಲು ಇಲ್ಲಿನ ನೀಡಲಾಗಿರುವ ನೇಮಕಾತಿ ಪೂರ್ಣ ಮಾಹಿತಿ ತಿಳಿದುಕೊಂಡು ಸಲ್ಲಿಸಬೇಕು.

ನೇಮಕಾತಿ ಪೂರ್ಣ ಮಾಹಿತಿ
ನೇಮಕಾತಿ ಸಂಸ್ಥೆ- ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ (KIOCL)
ಹುದ್ದೆ ಹೆಸರು: ಕಾರ್ಯದರ್ಶಿ
ಒಟ್ಟು ಹುದ್ದೆ: ಒಂದು
ಪೋಸ್ಟಿಂಗ್: ಬೆಂಗಳೂರು
ಮಾಸಿಕ ವೇತನ: ರೂ.1 ಲಕ್ಷದಿಂದ 2.60 ಲಕ್ಷ ರೂ.ವೇತನ
ಅರ್ಜಿ ಸಲ್ಲಿಕೆ ಕೊನೆ ದಿನ: ನವೆಂಬರ್ 10
ವಿದ್ಯಾರ್ಹತೆ ಏನಿರಬೇಕು?
ಅರ್ಜಿ ಸಲ್ಲಿಸಲಿರುವ ಅರ್ಹ ಅಭ್ಯರ್ಥಿಗಳು ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಇಲ್ಲವೇ ಮಂಡಳಿಯಲ್ಲಿ ಪದವಿ ಕೋರ್ಸ್‌ನಲ್ಲಿ ಉತ್ತೀರ್ಣಗೊಂಡಿರುವುದನ್ನು ಕಡ್ಡಾಯಗೊಳಿಸಲಾಗಿದೆ. ಇಂತವರು ಮಾತ್ರವೇ ಅರ್ಜಿ ಸಲ್ಲಿಸಬೇಕು.
ವಯಸ್ಸಿನ ಮಿತಿ ವಿವರ
ಈ ಮೇಲ್ಕಾಣಿಸಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕಳೆದ 2024ರ ಸೆಪ್ಟೆಂಬರ್ 30ಕ್ಕೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 48 ವರ್ಷ ದಾಟಿರಬಾರದು ಎಂದು ಕುದುರೆಮುಖ ಕಬ್ಬಿಣದ ಅದಿರು ಕಂಪನಿಯ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆಯ್ಕೆ ಪ್ರಕ್ರಿಯೆ, ವೇತನ ವಿವರ
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಅಲ್ಲಿ ಶಾರ್ಟ್ ಲಿಸ್ಟ್ ಆದವರಿಗೆ ನಂತರ ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ. ಇಲ್ಲಿ ಆಯ್ಕೆ ಆಗುವವರಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಿ ಮಾಸಿಕ ತಿಂಗಳಿಗೆ 1 ಲಕ್ಷ ರೂಪಾಯಿಯಿಂದ 2.60 ಲಕ್ಷ ರೂಪಾಯಿವರೆಗೆ ವೇತನ ನೀಡಲಾಗುವುದು ಎಂದು ಅಧಿಸೂಚನೆ ತಿಳಿಸಿದೆ.
ಅರ್ಜಿ ಶುಲ್ಕ ಎಷ್ಟಿದೆ?
ಎಸ್‌ಸಿ, ಎಸ್‌ಟಿ/PwBD ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ಇರುವುದಿಲ್ಲ. ಅವರನ್ನು ಬಿಟ್ಟು ಉಳಿದ ಎಲ್ಲ ಜಾತಿ ವರ್ಗದ ಅಭ್ಯರ್ಥಿಗಳಿಗೆ 500/- ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ. ಈ ಹಣವನ್ನು ಅಭ್ಯರ್ಥಿಗಳು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸುವಂತೆ ಸೂಚನೆ ನೀಡಲಾಗಿದೆ.
ಅರ್ಜಿ ಸಲ್ಲಿಕೆ ಹೇಗೆ ಆಫ್‌ಲೈನ್ ವಿಳಾಸ
ಆಸಕ್ತ ಅಭ್ಯರ್ಥಿಗಳು ಸೂಕ್ತ ದಾಖಲೆಗಳ ಸಮೇತ ಭರ್ತಿ ಮಾಡಿದ ಅರ್ಜಿಯನ್ನು ಇಲ್ಲಿರುವ ವಿಳಾಸ '' ಮುಖ್ಯ ಪ್ರಧಾನ ವ್ಯವಸ್ಥಾಪಕ (HR), ಮಾನವ ಸಂಪನ್ಮೂಲ ಇಲಾಖೆ, KIOCL ಲಿಮಿಟೆಡೆ, ಕೋರಮಂಗಲ 2ನೇ ಬ್ಲಾಕ್, ಸರ್ಜಾಪುರ ರಸ್ತೆ ಬೆಂಗಳೂರು-560034'' ಇಲ್ಲಿಗೆ ಕಳುಹಿಸಬೇಕು.
ಇಲ್ಲವಾದರೆ ನೀವು ಇಲ್ಲಿ ನೀಡಲಾಗಿರುವ ಲಿಂಕ್ https://kioclltd.in/job-screening.php?form=209 ಮೂಲಕ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.












Click it and Unblock the Notifications