ಕೊಡಗು; ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅರ್ಜಿ ಹಾಕಿ

ಕೊಡಗು ಜಿಲ್ಲೆಯಲ್ಲಿ ಮಡಿಕೇರಿ, ಪೊನ್ನಂಪೇಟೆ ಮತ್ತು ವಿರಾಜಪೇಟೆ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಅಂಗನವಾಡಿ ಸಹಾಯಕಿ ಮತ್ತು ಕಾರ್ಯಕರ್ತೆ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಮಡಿಕೇರಿ, ಫೆಬ್ರವರಿ 28; ಕೊಡಗು ಜಿಲ್ಲೆಯ ಮಡಿಕೇರಿ, ಪೊನ್ನಂಪೇಟೆ ಮತ್ತು ವಿರಾಜಪೇಟೆ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು ಮತ್ತು ಅರ್ಹರು ಅರ್ಜಿಗಳನ್ನು ಸಲ್ಲಿಕೆ ಮಾಡಲು ಮಾರ್ಚ್ 24 ಕೊನೆಯ ದಿನವಾಗಿದೆ.

ಮಡಿಕೇರಿ ತಾಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತೆ 1 ಹಾಗೂ ಅಂಗನವಾಡಿ ಸಹಾಯಕಿಯರ 4 ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. ಮುಕ್ಕೋಡ್ಲು-1ರಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಹಾಗೂ ಬಲ್ಲಮಾವಟಿ ಪಟ್ಟಣ, ವಣಚಲು, ಪೆನ್‍ಷನ್ ಲೈನ್, ಮಂಡೆಸ್ಥಾನ ಇಲ್ಲಿ ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

Kodagu Distract Anganwadi Recruitment 2023 February

ಆಸಕ್ತರು ಅರ್ಜಿ ಸಲ್ಲಿಸಲು ಮಾರ್ಚ್ 24ಕೊನೆಯ ದಿನವಾಗಿದೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ದ್ವಿತೀಯ ಪಿಯುಸಿ ತೇರ್ಗಡೆ ಹಾಗೂ ಸಹಾಯಕಿ ಹುದ್ದೆಗೆ 10ನೇ ತರಗತಿ ತೇರ್ಗಡೆ ಹೊಂದಿರುವವರು ಅರ್ಜಿ ಸಲ್ಲಿಸಬೇಕು. 18 ರಿಂದ 35 ವರ್ಷ ವಯೋಮಿತಿಯನ್ನು ಅಭ್ಯರ್ಥಿಗಳಿಗೆ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸುವವರು ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮದ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು. ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಹಾಕಲು ಅರ್ಹರು.

ಅಂಗವಿಕಲ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 10 ವರ್ಷಗಳ ಸಡಿಲಿಕೆ ಇರುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಮಡಿಕೇರಿ ಇಲ್ಲಿ ಕಚೇರಿ ವೇಳೆಯಲ್ಲಿ ಅರ್ಜಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ 08272-295087 ಸಂಖ್ಯೆಗೆ ಕಚೇರಿ ವೇಳೆಯಲ್ಲಿ ಕರೆ ಮಾಡಬಹುದಾಗಿದೆ.

Kodagu Distract Anganwadi Recruitment 2023 February

11 ಕಾರ್ಯಕರ್ತೆ, 22 ಸಹಾಯಕಿ ಹುದ್ದೆ; ಪೊನ್ನಂಪೇಟೆ ಮತ್ತು ವಿರಾಜಪೇಟೆ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ 11 ಅಂಗನವಾಡಿ ಕಾರ್ಯಕರ್ತೆ, 22 ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಅಂಗನವಾಡಿ ಕಾರ್ಯಕರ್ತೆ ಹುದ್ದೆ ಬೀರುಗ 1, ಮಾಯಾಮುಡಿ 1, ಬೀರುಗ 2, ಮೀನುಪೇಟೆ, ಎಡೂರು, ಹೊಸೂರು, ಕರಡಿಕೊಪ್ಪ, ಕರಡಿಗೋಡು 2, ಬಾಳಾಜಿ 1, ಕಲ್ಲುಕೋರೆ, ಬೆಳ್ಳುಮಾಡು 1 ಹುದ್ದೆ ಖಾಲಿ ಇದೆ.

ಅಂಗನವಾಡಿ ಸಹಾಯಕಿಯರ ಹುದ್ದೆ ಕಾಟಿಗುಂಡಿ ಪೈಸಾರಿ, ಬಿ.ಶೆಟ್ಟಿಗೇರಿ, ದೇವನೂರು 2, ತೆರಾಲು 2, ಕುಂದ, ಹೊಸನಲ್ಲಿಕೋಟೆ, ಆಂಗೋಡು, ಹೈಸೋಡ್ಲೂರು, ಬೀರುಗ 1, ಕುಂದೂರು, ಬೆಸಗೂರು 2, ಕಲ್ತೋಡು, ಕಣ್ಣಂಗಾಲ, ಟಿ. ಎಸ್ಟೇಟ್ 2, ತೋತೇರಿ ರುದ್ರಗುಪ್ಪೆ, ಗೋಣಿಕೊಪ್ಪಲು ಮೈನ್,ನೆಹರುನಗರ 1, ಜಾಗಲೆ, ಕಮಟೆ, ಬಿರುನಾಣಿ 1, ಬಿಟ್ಟಂಗಾಲ, ಕೇತುಮೊಟ್ಟೆಯಲ್ಲಿ ಖಾಲಿ ಇದೆ.

ಅರ್ಜಿ ಸಲ್ಲಿಸಲು ಮಾರ್ಚ್ 24 ಕೊನೆಯ ದಿನ. ಕಾರ್ಯಕರ್ತೆ ಹುದ್ದೆಗೆ ಪಿಯುಸಿ ತೇರ್ಗಡೆ ಹಾಗೂ ಸಹಾಯಕಿ ಹುದ್ದೆಗೆ ಎಸ್‍ಎಸ್‍ಎಲ್‍ಸಿ ತೇರ್ಗಡೆ ಹೊಂದಿರುವವರು ಅರ್ಜಿ ಹಾಕಬಹುದು. ವಯೋಮಿತಿ 19 ರಿಂದ 35 ವರ್ಷಗಳು. ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಹರು. ಅಂಗವಿಕಲ ಅಭ್ಯರ್ಥಿಗಳಿಗೆ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು ವಯೋಮಿತಿಯಲ್ಲಿ 10 ವರ್ಷಗಳ ಸಡಿಲಿಕೆ ಇದೆ. ದೈಹಿಕ ಅಂಗವಿಕಲತೆಯ ಪ್ರಮಾಣವು ಶೇ.40ಕ್ಕಿಂತ ಅಧಿಕವಿರಬಾರದು.

ಅಭ್ಯರ್ಥಿಗಳು ಅರ್ಜಿಯನ್ನು ಶಿಶು ಅಭಿವೃದ್ಧಿ ಯೋಜನಾ ಕಚೇರಿಯಾದ ಪೊನ್ನಂಪೇಟೆಯಲ್ಲಿ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಯನ್ನು ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಪೊನ್ನಂಪೇಟೆ ಇಲ್ಲಿಗೆ ಕಚೇರಿ ವೇಳೆಯಲ್ಲಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ 08274-201878, 7795732286 ಸಂಖ್ಯೆಗೆ ಕರೆ ಮಾಡಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+