ಮಡಿಕೇರಿ; ಕೆಲಸ ಖಾಲಿ ಇದೆ, 30 ಹುದ್ದೆ, ವೇತನ ವಿವರ
ಮಡಿಕೇರಿ, ನವೆಂಬರ್ 13; ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕೊಡಗು-ಮಡಿಕೇರಿ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಒಟ್ಟು 30 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 10/12/2023 ಕೊನೆಯ ದಿನವಾಗಿದೆ.
ಕೊಡಗು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಜವಾನ/ ಸೇವಕ ವೃಂದದ 30 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆನ್‌ಲೈನ್ ಮುಖಾಂತರ ಮಾತ್ರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು 11/12/2023 ಕೊನೆಯ ದಿನವಾಗಿದೆ. ಆನ್‌ಲೈನ್ ಮೂಲಕ ಅಲ್ಲದೇ ಬೇರೆ ಮಾದರಿಯಲ್ಲಿ ಸಲ್ಲಿಕೆ ಮಾಡಿದ ಅರ್ಜಿಗಳನ್ನು ಪರಿಗಣಿಸುವುದಿಲ್ಲ.

ಆಸಕ್ತ ಮತ್ತು ಅರ್ಹರು ಅರ್ಜಿಗಳನ್ನು ಮಡಿಕೇರಿ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್
https://kodagu.dcourts.gov.in/notice-category/recruitments/ ಮೂಲಕ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ; ಆಯ್ಕೆಯಾದ ಅಭ್ಯರ್ಥಿಗಳಿಗೆ 17,000 ದಿಂದ 28,950ರ ತನಕ ವೇತನ ನಿಗದಿ ಮಾಡಲಾಗಿದೆ. ಅಲ್ಲದೇ ಲಭ್ಯವಿರುವ ಭತ್ಯೆಗಳು ದೊರೆಯಲಿವೆ. ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಕೆ ಮಾಡಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗಾಗಿ ಹೊಂದಿರಬೇಕು. ಕನ್ನಡ ಓದುವ ಮತ್ತು ಬರೆಯಲು ಬರಬೇಕು.
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು 18 ವರ್ಷಗಳ ಕನಿಷ್ಠ ವಯೋಮಿತಿ ಹೊಂದಿರಬೇಕು. ಗರಿಷ್ಠ ವಯೋಮಿತಿ 35 ವರ್ಷಗಳು. ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.
ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಿದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ. ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 150 ರೂ. ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 300 ರೂ. ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ.
ಅಭ್ಯರ್ಥಿಗಳು ಅರ್ಜಿಯನ್ನು ON-LINE ಮೂಲಕ ಸಲ್ಲಿಸುವ ಮೊದಲು ಕೊಟ್ಟಿರುವ ಎಲ್ಲಾ ಸೂಚನೆಗಳನ್ನು ಗಮನವಿಟ್ಟು ಓದಿಕೊಳ್ಳಬೇಕು ಮತ್ತು ತಪ್ಪಾಗದಂತೆ ನೋಡಿಕೊಳ್ಳಬೇಕು. ಸರಿಯಾದ ಮಾಹಿತಿ ನೀಡದೇ ಇರುವ ಮತ್ತು ಅಪೂರ್ಣ ಮಾಹಿತಿಯುಳ್ಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಸ್ಪಷ್ಟಪಡಿಸಲಾಗಿದೆ.
ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆಯನ್ನು ಹಾಗೂ ಇ-ಮೇಲ್ ಐಡಿಯನ್ನು ಕಡ್ಡಾಯವಾಗಿ ನಮೂದಿಸುವುದು. ಒಂದು ವೇಳೆ SMS ಅಥವಾ ಇ-ಮೇಲ್ ಮುಖಾಂತರ ಒಬ್ಬ ಅಭ್ಯರ್ಥಿಗಳಿಗೆ ಸಂದೇಶ ತಲುಪದಿದ್ದಲ್ಲಿ ಪ್ರಾಧಿಕಾರವು ಹೊಣೆಯಾಗುವುದಿಲ್ಲ. ಅರ್ಹ ಅಭ್ಯರ್ಥಿಗಳಿಗೆ SMS/E-Mail ಮುಖಾಂತರ ಮಾಹಿತಿ ನೀಡಲಾಗುವುದು. ಸಂದರ್ಶನಕ್ಕೆ/ ಅರ್ಹತಾ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ನ್ಯಾಯಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.
ಅಭ್ಯರ್ಥಿಯು ON-LINE ಅರ್ಜಿಯಲ್ಲಿ ಕೋರಲಾದ ಎಲ್ಲಾ ಮಾಹಿತಿಗಳನ್ನೂ ಭರ್ತಿ ಮಾಡಿ ನಿಗದಿತ ಶುಲ್ಕ ಪಾವತಿಸಬೇಕು. ತದನಂತರ ಅರ್ಜಿಯನ್ನು ಹಾಗೂ ಶುಲ್ಕವನ್ನು ತುಂಬಿದ ಪ್ರತಿಯನ್ನು ಡೌನ್ ಲೋಡ್ ಮಾಡಿಕೊಂಡು ನೇಮಕಾತಿ ಪ್ರಕ್ರಿಯೆ ಮುಗಿಯುವವರೆಗೂ ತಮ್ಮ ಹತ್ತಿರ ಇರಿಸಿಕೊಳ್ಳತಕ್ಕದ್ದು ಹಾಗೂ ಅರ್ಹತಾ ಪರೀಕ್ಷೆಯ/ ಸಂದರ್ಶನದ ಸಮಯದಲ್ಲಿ ಹಾಜರುಪಡಿಸತಕ್ಕದ್ದು.
ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಲು ನಿಗದಿ ಮಾಡಿದ ಕೊನೆಯ ದಿನಾಂಕದ ತನಕ ಕಾಯದೇ ಮುಂಚಿತವಾಗಿ ಅರ್ಜಿಗಳನ್ನು ಸಲ್ಲಿಸಿ, ಒಮ್ಮೆ ಪಾವತಿ ಮಾಡಿದ ಅರ್ಜಿ ಶುಲ್ಕವನ್ನು ಯಾವುದೇ ಕಾರಣಕ್ಕೂ ವಾಪಸ್ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.












Click it and Unblock the Notifications