ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಡಿಕೇರಿಯಲ್ಲಿ ಉದ್ಯೋಗ ಮೇಳ, ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ

|
Google Oneindia Kannada News

ಮಡಿಕೇರಿ ಮಾರ್ಚ್14: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾರ್ಚ್, 18 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ.

ಈ ಉದ್ಯೋಗ ಮೇಳದಲ್ಲಿ ರಾಣಿ ಮದ್ರಾಸ್, ಮೈಸೂರು, ಕ್ಲಬ್ ಮಹೀಂದ್ರ, ಮಡಿಕೇರಿ, ಹಿಮತ್ಸಿಂಕಾ ಲೈನ್ಸ್, ಹಾಸನ, ಹ್ಯುಂಡೈ, ಮಡಿಕೇರಿ, ಮಾಂಡೋವಿ ಮೋಟಾರ್ಸ್, ಜಸ್ಟ್ ಡಯಲ್, ಬೆಂಗಳೂರು, ಗ್ರಾಸ್ ರೂಟ್ಸ್, ಮೈಸೂರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಿಗೆ 'ಗ್ರಾಮ ಒನ್' ಸೌಲಭ್ಯ ವಿಸ್ತರಣೆರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಿಗೆ 'ಗ್ರಾಮ ಒನ್' ಸೌಲಭ್ಯ ವಿಸ್ತರಣೆ

ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣ ಪತ್ರ(ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳದಲ್ಲಿ ಹಾಜರಾಗುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಉಮಾ ಅವರು ತಿಳಿಸಿದ್ದಾರೆ.

Kodagu: Job Fair, Application invited for Horticulture department training

***

ತೋಟಗಾರಿಕೆ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಮಡಿಕೇರಿ: ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯು 2022 ರ ಮೇ, 02 ರಿಂದ 2023 ರ ಫೆಬ್ರವರಿ, 28 ರವರೆಗೆ ಹಾಸನ ಜಿಲ್ಲೆಯ ಸೋಮನಹಳ್ಳಿ ಕಾವಲ್‍ನ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಏಪ್ರಿಲ್, 16 ರ ಸಂಜೆ 5 ಗಂಟೆ ಕೊನೆಯ ದಿನವಾಗಿದೆ. ಅರ್ಜಿಯನ್ನು ಕಚೇರಿಯಿಂದ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳನ್ನು ಈ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಅಥವಾ ದೂರವಾಣಿ ಸಂ:8310687707 ಅಥವಾ ಅಂತರ್ಜಾಲ www.horticulture.kar.nic.in ಇಲ್ಲಿ ಪಡೆಯಬಹುದು. ಮೂಲ ಅಗತ್ಯ ದಾಖಲಾತಿಗಳೊಡನೆ (ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಛಾಪಾಕಾಗದ, ತಂದೆ/ತಾಯಿ/ಪೋಷಕರ ಹೆಸರಿನಲ್ಲಿರುವ ಜಮೀನಿನ ಆರ್‌ಟಿಸಿ, ಜಾತಿ ಪ್ರಮಾಣ ಪತ್ರ, ಫೋಟೋ ಇತ್ಯಾದಿ) ಅರ್ಹ ಅಭ್ಯರ್ಥಿಗಳು ನಿಗದಿತ ಸಮಯದೊಳಗೆ ಅರ್ಜಿ ಸಲ್ಲಿಸುವಂತೆ ರಾಜ್ಯ ವಲಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಪ್ರಮೋದ್ ತಿಳಿಸಿದ್ದಾರೆ.

ಬ್ಯಾಂಕ್ ಆಫ್ ಬರೋಡಾದಲ್ಲಿ 105 ಹುದ್ದೆಗಳಿವೆ, ಅರ್ಜಿ ಹಾಕಿಬ್ಯಾಂಕ್ ಆಫ್ ಬರೋಡಾದಲ್ಲಿ 105 ಹುದ್ದೆಗಳಿವೆ, ಅರ್ಜಿ ಹಾಕಿ

***

ಅರ್ಜಿ ಆಹ್ವಾನ
ಮಡಿಕೇರಿ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರು ನರ್ಸರಿ, ಎಲ್‍ಕೆಜಿ ಮತ್ತು ಯುಕೆಜಿ ಯಲ್ಲಿ ಓದುತ್ತಿರುವ ಎರಡು ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಪಡೆಯಲು ಸೇವಾ ಸಿಂಧು ತಂತ್ರಾಂಶದಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಮಾರ್ಚ್, 31 ರವರೆಗೆ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅವಶ್ಯವಿರುವ ದಾಖಲೆಗಳು ತಂದೆ ಮತ್ತು ತಾಯಿಯವರ ಆಧಾರ್ ಸಂಖ್ಯೆ ಕಡ್ಡಾಯ, ಮಗುವಿನ ಆಧಾರ್ ಸಂಖ್ಯೆ, ಮಗು ಶಾಲೆಗೆ ದಾಖಲಾಗಿರುವ ವಿವರ (ಶಾಲೆಗೆ ದಾಖಲಾದ ಪ್ರವೇಶ ಶುಲ್ಕ ರಶೀದಿ ಅಪ್ಲೋಡ್ ಮಾಡುವುದು). ಈ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿದ್ದಲ್ಲಿ 2021-2022ನೇ ಸಾಲಿಗೆ ಓದುತ್ತಿರುವ ಮಕ್ಕಳಿಗೆ ಶೈಕ್ಷಣಿಕ ಸಹಾಯಧನವನ್ನು ನೀಡಲಾಗುವುದು ಎಂದು ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ ಅವರು ತಿಳಿಸಿದ್ದಾರೆ.

English summary
Kodagu: Job Fair organised on March 18 and applications invited for Horticulture department training and Seva Sindhu education schlorship.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X