ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ನೇಮಕಾತಿ; 98 ಹುದ್ದೆ, ವಿವರ

ಕೋಲಾರ, ಸೆಪ್ಟೆಂಬರ್ 08; ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತ ವಿವಿಧ ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು 6/10/2023 ಕೊನೆಯ ದಿನವಾಗಿದೆ.

ಒಟ್ಟು 98 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು www.komul.coop ವೆಬ್‌ಸೈಟ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಅರ್ಜಿಗಳನ್ನು ಅಂಚೆ/ ಕೊರಿಯರ್/ ಖುದ್ದಾಗಿ ಸಲ್ಲಿಕೆ ಮಾಡಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಎಲ್ಲಾ ಹುದ್ದೆಗಳಿಗೆ ವೇತನ ಶ್ರೇಣಿ 27,650-52,650 ರೂ.ಗಳು ಎಂದು ನಿಗದಿ ಮಾಡಲಾಗಿದೆ.

Kolar Chikkaballapura Milk Union Recruitment Apply For 98 Posts

ಆಡಳಿತ ಸಹಾಯಕ ದರ್ಜೆ-2 ಒಟ್ಟು ಹುದ್ದೆಗಳು 24. ಕೆಮಿಸ್ಟ ದರ್ಜೆ-2 ಒಟ್ಟು 21 ಹುದ್ದೆಗಳು. ಲೆಕ್ಕ ಸಹಾಯಕ ದರ್ಜೆ-2 ಒಟ್ಟು 21 ಹುದ್ದೆಗಳು. ಮಾರುಕಟ್ಟೆ ಸಹಾಯಕರು ದರ್ಜೆ-2 ಒಟ್ಟು 11 ಹುದ್ದೆಗಳು. ಜೂನಿಯರ್ ಸಿಸ್ಟಮ್ ಆಪರೇಟರ್ ಒಟ್ಟು ಹುದ್ದೆಗಳು 15, ಕೋ-ಆರ್ಡಿನೇಟರ್ (ಪ್ರೊಟಕ್ಷನ್) 6 ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ.

ವಯೋಮಿತಿಯ ವಿವರಗಳು; ನೇಮಕಾತಿಗೆ ಅರ್ಜಿ ಸಲ್ಲಿಕೆ ಮಾಡಲು ಕೊನೆಯ ದಿನಾಂಕ 6/10/2023ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಟ ವಯೋಮಿತಿ 40 ವರ್ಷ. ಪ್ರವರ್ಗ 2ಎ/ 2 ಬಿ/ 3ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 38 ವರ್ಷ, ಸಾಮಾನ್ಯ ವರ್ಗಕ್ಕೆ 35 ವರ್ಷದ ವಯೋಮಿತಿ ನಿಗದಿಗೊಳಿಸಲಾಗಿದೆ.

ಮಾಜಿ ಸೈನಿಕರಿಗೆ ಮಿಲಿಟರಿ ಸೇವೆಯಲ್ಲಿ ಸೇವೆ ಸಲ್ಲಿಸಿದ ಅವಧಿಗೆ, ಎನ್‌ಸಿಸಿ ಇನ್‌ಸ್ಟ್ರಕ್ಟರ್‌ಗಳಿಗೆ ಕೆಡೆಟ್ ಇನ್‌ಸ್ಟ್ರಕ್ಟರ್‌ ಆಗಿ ಎನ್‌ಸಿಸಿಯಲ್ಲಿ ಸೇವೆ ಸಲ್ಲಿಸಿದ ಅವಧಿಗೆ, ವಿಧವೆಯರಿಗೆ 10 ವರ್ಷ, ಅಂಗವಿಕಲರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿಗಳನ್ನು ಸಲ್ಲಿಕೆ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಪ್ರಕಟಣೆಯಲ್ಲಿ ಆಯಾ ಹುದ್ದೆಗಳ ಕೆಳಗೆ ಸೂಚಿಸಿರುವ ಕನಿಷ್ಠ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಹೊಂದಿರಲೇಬೇಕು. ಒಕ್ಕೂಟದ ಅನುಮೋದಿತ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಹೊರತುಪಡಿಸಿ ಇತರೆ ಯಾವುದೇ ಸಮಾನಾಂತರ ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದಿಲ್ಲ.

ಅರ್ಜಿಗಳನ್ನು ಸಲ್ಲಿಕೆ ಮಾಡುವ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳು ಅರ್ಜಿ ಶುಲ್ಕ 500 ರೂ. ಮತ್ತು ಪ್ರತ್ಯೇಕವಾಗಿ ಬ್ಯಾಂಕ್ ಶುಲ್ಕವನ್ನು ಪಾವತಿಸಬೇಕು. ಇತರೆ ವರ್ಗದ ಅಭ್ಯರ್ಥಿಗಳು 1000 ರೂ. ಶುಲ್ಕ ಮತ್ತು ಬ್ಯಾಂಕ್ ಶುಲ್ಕ ಪ್ರತ್ಯೇಕವಾಗಿ ಪಾವತಿಸಬೇಕು ಎಂದು ಸೂಚಿಸಲಾಗಿದೆ.

ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡಲು Online ನಲ್ಲಿ ನೀಡಿರುವ ಸೂಚನೆಗಳನ್ನು ತಪ್ಪದೇ ಪಾಲಿಸುವುದು. ತಪ್ಪು ಮಾಹಿತಿಗಳನ್ನು ಮತ್ತು ಅಸ್ಪಷ್ಟ ಮಾಹಿತಿ ನೀಡಿ ಅರ್ಜಿ ಸಲ್ಲಿಸಿದಲ್ಲಿ ಅಂತಹವರ ಅರ್ಜಿಯನ್ನು ಯಾವುದೇ ನೋಟೀಸ್ ನೀಡದೆ ತಿರಸ್ಕರಿಸಲಾಗುವುದು. ನಿಗದಿತ ಶುಲ್ಕವನ್ನು ಸಂದಾಯ ಮಾಡದಿದ್ದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸಿದಲ್ಲಿ ಅಂತಹ ಅಭ್ಯರ್ಥಿಗಳು ಪ್ರತಿ ಹುದ್ದೆಗೆ ಪ್ರತ್ಯೇಕವಾಗಿ ಅರ್ಜಿ ಶುಲ್ಕವನ್ನು ಪಾವತಿಸತಕ್ಕದ್ದು.

ಅರ್ಜಿ ಶುಲ್ಕವನ್ನು ಪಾವತಿಸುವುದಕ್ಕೆ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಆನ್‌ಲೈನ್ ಮೂಲಕ ನಿಗದಿತ ಶುಲ್ಕ + ಅನ್ವಯಿಸುವ ಬ್ಯಾಂಕ್ ಶುಲ್ಕ ಪ್ರತ್ಯೇಕ ಪಾವತಿ ಮಾಡತಕ್ಕದ್ದು. ಶುಲ್ಕವನ್ನು ಪಾವತಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 6/10/2023ರ ನಂತರ ಶುಲ್ಕವನ್ನು ಸಂದಾಯ ಮಾಡಿದ್ದಲ್ಲಿ ಅಂತಹವರ ಅರ್ಜಿಯನ್ನು ತಿರಸ್ಕರಿಸಲಾಗುವುದು. ಡಿಡಿ/ ಚೆಕ್/ ಪೋಸ್ಟಲ್ ಆರ್ಡರ್/ ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದವರೆಗೂ ಕಾಯದೆ ಮುಂಚಿತವಾಗಿ ಅರ್ಜಿಗಳನ್ನು ಸಲ್ಲಿಸುವುದು ಸೂಕ್ತವಾಗಿರುತ್ತದೆ. ತಪ್ಪು ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಿದಲ್ಲಿ ಅಂತಹವರ ವಿರುದ್ದ ಒಕ್ಕೂಟವು ಕಾನೂನಿನನ್ವಯ ಸೂಕ್ತ ಕ್ರಮ ಕೈಗೊಳ್ಳುವ ಹಕ್ಕನ್ನು ಕಾಯ್ದಿರಿಸಿಕೊಂಡಿರುತ್ತದೆ. ಒಮ್ಮೆ ಶುಲ್ಕವನ್ನು ಪಾವತಿಸಿದ ನಂತರ ಯಾವುದೇ ಸಂದರ್ಭದಲ್ಲಿಯೂ ಹಿಂದಿರುಗಿಸಲಾಗುವುದಿಲ್ಲ ಅಥವಾ ಇತರೆ ಯಾವುದೇ ನೇಮಕಾತಿಗಳಿಗೆ ಹೊಂದಾಣಿಕೆ ಮಾಡಿಕೊಳ್ಳಲಾಗುವುದಿಲ್ಲ.

ನೇಮಕಾತಿಯ ಕುರಿತು ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತ ಅಭ್ಯರ್ಥಿಯೊಂದಿಗೆ ಯಾವುದೇ ಪತ್ರ ವ್ಯವಹಾರ ನಡೆಸುವುದಿಲ್ಲ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ ನೋಡಿ ಅಥವ ಸಹಾಯವಾಣಿ ಸಂಖ್ಯೆ 8971454114 ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯ ತನಕ ಕರೆ ಮಾಡಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+