ಕೋಲಾರ ಕಂದಾಯ ಇಲಾಖೆಯ ಹುದ್ದೆಗಳಿಗೆ ಅರ್ಜಿ ಆಹ್ವಾನ

Written By: Ramesh
Subscribe to Oneindia Kannada

ಕೋಲಾರ, ಅಕ್ಟೋಬರ್. 18 : ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಕೋಲಾರ ಜಿಲ್ಲಾ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 21-2016 ಕೊನೆಯ ದಿನವಾಗಿದೆ.

ಭೂಮಿ ಕೇಂದ್ರದ ಗ್ರಾಮ ಲೆಕ್ಕಿಗರ 7 ಹುದ್ದೆಗಳು ಹಾಗೂ ಕಂದಾಯ ವೃತ್ತಗಳಲ್ಲಿ ಖಾಲಿ ಇರುವ 49 ಒಟ್ಟು 56 ಹುದ್ದೆಗಳು ಖಾಲಿ ಇದ್ದು, ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಅರ್ಜಿಗಳನ್ನು ಅಂಚೆ ಅಥವ ಖುದ್ದಾಗಿ ಸಲ್ಲಿಸಿದರೆ ಸ್ವೀಕರಿಸಲಾಗುವುದಿಲ್ಲ ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

Jobs

ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವ CBSE ಅಥವ ISCE ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರುವ ಬಗ್ಗೆ ಅಧಿಕೃತ ಸಂಸ್ಥೆಯಿಂದ ಪ್ರಮಾಣಪತ್ರ ಪಡೆದಿರಬೇಕು.

ವಯೋಮಿತಿ : ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಪ.ಜಾ/ಪ.ಪಂ/ಪ್ರವರ್ಗ -1 ಗರಿಷ್ಠ ವಯೋಮಿತಿ 40, 2ಎ/2ಬಿ/3ಎ/3ಬಿ 38, ಸಾಮಾನ್ಯ ವರ್ಗದವರಿಗೆ 40 ವರ್ಷಗಳು.

ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ -100 ರು.ಗಳು. ಸಾಮಾನ್ಯ ವರ್ಗ/2ಎ/2ಬಿ/3ಎ/3ಬಿ ವರ್ಗಕ್ಕೆ 200 ರುಗಳನ್ನು ಆನ್‌ಲೈನ್‌ನಲ್ಲಿ ಅರ್ಜಿ ತುಂಬಿದ ಬಳಿಕ ಸಿಗುವ ಸ್ವೀಕೃತಿ ಪತ್ರ ಮತ್ತು ದ್ವಿಪ್ರತಿ ಚಲನ್ ತೆಗೆದುಕೊಂಡು ಅರ್ಜಿ ಶುಲ್ಕದೊಂದಿಗೆ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಯಾವುದೇ ಶಾಖೆಯಲ್ಲಿ ಶುಲ್ಕ ಪಾವತಿ ಮಾಡಬಹುದು.

ಹೆಚ್ಚಿನ ಮಾಹಿತಿಗಾಗಿ : 08152-222098, http://www.kolar.nic.in ವೆಬ್ ಸೈಟ್ ನ್ನು ಸಂಪರ್ಕಿಸಿ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka revenue department invites applications for recruitment of 56 village accountants posts in Kolar district October 21, 2016 last date for submit application.
Please Wait while comments are loading...