Railway Recruitment: ಕರ್ನಾಟಕದಲ್ಲಿ ರೈಲ್ವೆ ಹುದ್ದೆ ಖಾಲಿ ಇದೆ, ಈಗಲೇ ಅರ್ಜಿ ಸಲ್ಲಿಸಿ
ಬೆಂಗಳೂರು, ಜೂನ್ 04: ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಈ ನಿಮಿತ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೇಂದ್ರ ಸರ್ಕಾರಿ ವ್ಯಾಪ್ತಿಯಲ್ಲಿ ಸೇವೆ ನೀಡಬಯಸುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ.
ಖಾಲಿಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಒಂದು ಸೀನಿಯರ್ ಸೆಕ್ಷನ್ ಆಫೀಸರ್ ಹುದ್ದೆ ಖಾಲಿ ಇದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬೇಕು. ರೈಲ್ವೆ ಇಲಾಖೆಯಲ್ಲಿ (Railway Department) ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳು ಜೂನ್ 18 ರೊಳಗೆ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ಸಿಗಲಿದೆ.

ನೇಮಕಾತಿ ಪೂರ್ಣ ಮಾಹಿತಿ
ಸಂಸ್ಥೆ ಹೆಸರು: ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL)
ಹುದ್ದೆ ಹೆಸರು: ಸೀನಿಯರ್ ಸೆಕ್ಷನ್ ಆಫೀಸರ್
ಎಷ್ಟು ಹುದ್ದೆ: ಒಂದು
ಪೋಸ್ಟಿಂಗ್: ಕಾರವಾರ (ಕರ್ನಾಟಕ)
ವೇತನ: ನಿಯಮಾನುಸಾರ
ಅರ್ಜಿ ಸಲ್ಲಿಕೆ ಕೊನೆ ದಿನ: ಜೂನ್ 18
ವಿದ್ಯಾರ್ಹತೆ
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿ.ಕಾಂ ಪೂರ್ಣಗೊಳಿಸಿರಬೇಕು. ಇಂತಹವರು ಅರ್ಜಿ ಸಲ್ಲಿಸಬಹುದು ಎಂದು ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಅಧಿಸೂಚನೆ ತಿಳಿಸಿದೆ.
ವಯಸ್ಸಿನ ಮಿತಿ
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸು 2024 ಮೇ 31ಕ್ಕೆ ಗರಿಷ್ಠ 62 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುವುದು ಎಂದು ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆ ತಿಳಿಸಿದೆ.

ಮಾಸಿಕ ವೇತನ
ಅರ್ಜಿ ಸಲ್ಲಿಸಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಇಂತಿಷ್ಟು ಮಾಸಿಕ ವೇತನ ಎಂದು ಸದ್ಯಕ್ಕೆ ನಿಗದಿಯಾಗಿಲ್ಲ. ಅವರ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ನೀಡಲಾಗುವುದು ಎಂದು ಭಾರತೀಯ ರೈಲ್ವೆ ತಿಳಿಸಿದೆ. ಆಯ್ಕೆ ಆಗುವವರಿಗೆ ಕಾರವಾರದಲ್ಲಿ ಪೋಸ್ಟಿಂಗ್ ನೀಡಲಾಗುವುದು ಎಂದು ತಿಳಿಸಿದೆ.
ಆಯ್ಕೆ ಪ್ರಕ್ರಿಯೆ
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) ಮೊದಲು ಲಿಖಿತ ಪರೀಕ್ಷೆ ನಡೆಸುತ್ತದೆ. ನಂತರ ಸಂದರ್ಶನ ನಡೆಸಲಿದೆ.
ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕವರೆಗೂ ಕಾಯದೇ ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲಾತಿಗಳ ಜೊತೆಗೆ ಇ-ಮೇಲ್ ಐಡಿ [email protected] ಗೆ ಕಳುಹಿಸಬೇಕು. ಮೇ 31ರಂದು ಅಧಿಸೂಚನೆ ಬಿಡುಗಡೆ ಆಗಿದ್ದು, ಜೂನ್ 18 ಅರ್ಜಿ ಸಲ್ಲಿಕೆಗೆ ಕೊನೆ ದಿನವಾಗಿದೆ ಎಂದು ಅಧಿಸೂಚನೆ ಮಾಹಿತಿ ನೀಡಿದೆ.
ಅಭ್ಯರ್ಥಿಗಳು ಕೊನೆಯ ದಿನದವರೆಗೂ ಕಾಯದೇ ಇಂದಿನಿಂದಲೇ ಅರ್ಜಿ ಸಲ್ಲಿಸಬೇಕು. ಮುಖ್ಯವಾಗಿ ಕರ್ನಾಟಕದಲ್ಲಿ ರೈಲ್ವೆ ಹುದ್ದೆ ಪಡೆಯಲು ಇಚ್ಛಿಸುವವರು ಕೂಡಲೇ ಮೇಲಿನ ಎಲ್ಲ ಮಾಹಿತಿ ತಿಳಿದು ಅರ್ಜಿ ಹಾಕಿ ಸಂದರ್ಶನ, ಪರೀಕ್ಷೆಗೆ ಸಿದ್ಧರಾಗಬೇಕು.












Click it and Unblock the Notifications