ಕೊಂಕಣ ರೈಲ್ವೆಯಲ್ಲಿ ಉದ್ಯೋಗ, ಆನ್‌ಲೈನ್‌ನಲ್ಲಿ ಅರ್ಜಿ ಹಾಕಿ
ಬೆಂಗಳೂರು, ಅಕ್ಟೋಬರ್ 09 : ಕೊಂಕಣ ರೈಲ್ವೆ ನಿಗಮ (ಕೆಆರ್‌ಸಿ) ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 18, 2018 ಕೊನೆಯ ದಿನವಾಗಿದೆ.
ಸೀನಿಯರ್ ಸೆಕ್ಷನ್ ಇಂಜಿನಿಯರ್ ಹುದ್ದೆಗಳನ್ನು ವಿವಿಧ ವಿಭಾಗದಲ್ಲಿ ಭರ್ತಿ ಮಾಡಲಾಗುತ್ತಿದೆ. 7ನೇ ವೇತನ ಆಯೋಗದ ಮಾರ್ಗಸೂಚಿ ಅನ್ವಯ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಎಸ್‌ಎಸ್‌ಇ/ಎಲೆಕ್ಟ್ರಿಕಲ್ 10, ಎಸ್‌ಇ/ಸಿವಿಎಲ್ 4, ಎಸ್‌ಎಸ್‌ಇ/ಎಸ್&ಟಿ 11, ಎಸ್‌ಎಸ್‌ಇ/ಮೆಕಾನಿಕಲ್ 3 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು 7ನೇ ವೇತನ ಆಯೋಗದ ಶಿಫಾರಸಿನ ಅನ್ವಯ ವೇತನ ಪಡೆಯಲಿದ್ದಾರೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 20 ರಿಂದ 35 ವರ್ಷಗಳ ವಯೋಮಿತಿ ನಿಗದಿ ಮಾಡಲಾಗಿದೆ. ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಇಂಗ್ಲಿಶ್‌ನಲ್ಲಿ 100 ಅಂಕಗಳಿಗೆ ಪರೀಕ್ಷೆ ನಡೆಸಲಾಗುತ್ತದೆ.
ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ವಿದ್ಯಾರ್ಹತೆ ಮತ್ತು ಇತರ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.












Click it and Unblock the Notifications