ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಲಬುರಗಿಯಲ್ಲಿ ಉದ್ಯೋಗ ಮೇಳ, ಕೊಪ್ಪಳದಲ್ಲಿ ತರಬೇತಿಗೆ ಅರ್ಜಿ

|
Google Oneindia Kannada News

ಕೊಪ್ಪಳ, ಫೆ.08: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಫೆ.12 ರಂದು ಕಲಬುರಗಿಯ ದೊಡ್ಡಪ್ಪ ಅಪ್ಪ ತಾಂತ್ರಿಕ ಮಹಾವಿದ್ಯಾಲಯ ಐವನ್-ಎ-ಶಾಹಿ ಶಂಭೋಜಿಯಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಫೆ. 12 ರಂದು ಬೆಳಗ್ಗೆ 9 ಗಂಟೆಯಿಂದ ಸಾಯಂಕಾಲ 6 ಗಂಟೆಯವರೆಗೆ ಉದ್ಯೋಗ ಮೇಳವು ನಡೆಯಲಿದೆ. ಈ ಮೇಳದಲ್ಲಿ ಪ್ರತಿಷ್ಠಿತ ಕಂಪನಿಗಳು ಸುಮಾರು 5000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದ್ದು, ಬಿ.ಇ, ಬಿಕಾಂ, ಬಿ.ಎಸ್‌ಸಿ, ಬಿಎ, ಬಿಸಿಎ, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಡಿಪ್ಲೊಮಾ ಹಾಗೂ ಐಟಿಐ ವಿದ್ಯಾರ್ಹತೆಯನ್ನು ಹೊಂದಿದ ಅಭ್ಯರ್ಥಿಗಳು ವಿದ್ಯಾರ್ಹತೆಯ ಅಂಕಪಟ್ಟಿಯ ನಕಲು ಪ್ರತಿ, ಇತ್ತೀಚಿನ 02 ಭಾವಚಿತ್ರ, ಆಧಾರ್ ಕಾರ್ಡ್ ಹಾಗೂ ರೆಸ್ಯುಮ್‌ನ 5 ಪ್ರತಿಗಳೊಂದಿಗೆ ಮೇಳದಲ್ಲಿ ಭಾಗವಹಿಸಬಹುದು.

ಆಸಕ್ತ ಉದ್ಯೋಗಾಕಾಂಕ್ಷಿಗಳು ವೆಬ್‌ಸೈಟ್ https://skillconnect.kaushalkar.com/app/gulbarga-jobfair ಲಿಂಕ್‌ನ ಮೂಲ ತಮ್ಮ ಸ್ವ-ವಿವರಗಳ ಮಾಹಿತಿಯನ್ನು ಭರ್ತಿ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದು. ಅಭ್ಯರ್ಥಿಗಳು ತಮ್ಮ ರೆಸ್ಯುಮ್‌ಗಳನ್ನು ಇ-ಮೇಲ್: [email protected] ವಿಳಾಸಕ್ಕೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 8277895931 ಗೆ ಸಂಪರ್ಕಿಸಬಹುದೆAದು ಕೊಪ್ಪಳ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Koppal and Kalaburagi Job Fair other job openings information

ಉಚಿತ ಕೌಶಲ್ಯಾಧಾರಿತ ತರಬೇತಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ: ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆ ವತಿಯಿಂದ ಗ್ರಾಮಿಣ ಭಾಗದ ನಿರುದ್ಯೊಗಿ ಯುವಕ, ಯುವತಿಯರಿಗೆ ಉಚಿತ ಕೌಶಲ್ಯಾಧಾರಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಉಚಿತ ಕೌಶಲ್ಯಾಧಾರಿತ ತರಬೇತಿಯಡಿ ಗ್ರಾಮಿಣ ಭಾಗದ ನಿರುದ್ಯೊಗಿ ಯುವಕ, ಯುವತಿಯರಿಗೆ 30 ದಿನಗಳ ಹೌಸ್ ವೈರಿಂಗ್ ಮತ್ತು ವಿದ್ಯುತ್ ಉಪಕರಣ ದುರಸ್ತಿ ತರಬೇತಿ ಹಾಗೂ ಕೌಶಲ್ಯ, ಸಾಫ್ಟ್ ಸ್ಕೀಲ್, ಯೋಗ ತರಬೇತಿ, ಬ್ಯಾಂಕಿಂಗ್, ಸರಕಾರಿ ಯೋಜನೆಗಳು ಮತ್ತು ವರದಿ ತಯಾರಿಕೆ ಬಗೆಗಿನ ಮಾಹಿತಿಯನ್ನು ಉಚಿತವಾಗಿ ನೀಡಲಾಗುವದು.

ಅರ್ಜಿದಾರರು 18 ರಿಂದ 45 ವರ್ಷದೊಳಗಿರಬೇಕು. ರಾಜ್ಯದ ಗ್ರಾಮೀಣ ಭಾಗದ ಬಡ ಯುವಜನರಾಗಿರಬೇಕು. ತರಬೇತಿಯ ಸಮಯದಲ್ಲಿ ಊಟ, ವಸತಿ ಉಚಿತವಾಗಿರುತ್ತದೆ. ಅರ್ಜಿ ಸಲ್ಲಿಸಲು ಫೆಬ್ರವರಿ 15 ಕೊನೆಯದಿನವಾಗಿದ್ದು, ಆಸಕ್ತರು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ ಹಳಿಯಾಳ, ಉತ್ತರ ಕನ್ನಡ ಜಿಲ್ಲೆ, ಈ ವಿಳಾಸಕ್ಕೆ ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

ಹೆಚ್ಚಿನ ವಿವರಗಳಿಗಾಗಿ ದೂ.ಸಂ; 9483485489, 9482188780, 08284-295307/220807 ಮತ್ತು 9743321062 ಗೆ ಕರೆಮಾಡಬಹುದು. ಆಸಕ್ತರು ಇದರ ಸದುಪಯೊಗ ಮಾಡಿಕೊಳ್ಳಬೇಕೆಂದು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ವಸತಿ ನಿರ್ಮಾಣ ಯೋಜನೆಯಡಿ ಫಲಾನುಭವಿಗಳಿಂದ ಅರ್ಜಿ ಆಹ್ವಾನ

ಕೊಪ್ಪಳ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಡಿ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯಗಳಿಗೆ, ದೌರ್ಜನ್ಯ ಸಂತ್ರಸ್ತರಿಗೆ, ಮಾಜಿ ದೇವದಾಸಿಯರಿಗೆ, ಅಂತರ್ಜಾತಿ ವಿವಾಹಿತ ದಂಪತಿಗಳಿಗೆ, ವಿಧವೆಯರು, ಒಂಟಿ ಮಹಿಳೆಯರು, ಮೀನುಗಾರರಿಗೆ, ವಸತಿ ರಹಿತ ನಿವೇಶನ (ಸೈಟ್) ಹೊಂದಿದ ಫಲಾಪೇಕ್ಷಿಗಳಿಗೆ ಮನೆ ನಿರ್ಮಿಸಿ ಕೊಡಲು ಮನೆ ನಿರ್ಮಾಣ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಆಫ್‌ಲೈನ್ ಅರ್ಜಿಯನ್ನು ಸಲ್ಲಿಸುವವರು ನಿಗಮದ ಆಯಾ ಜಿಲ್ಲಾ ಕಛೇರಿಗಳಲ್ಲಿ ಅರ್ಜಿ ನಮೂನೆಯನ್ನು ಪಡೆದು ಫೆಬ್ರವರಿ 25 ರೊಳಗೆ ಕಾರ್ಯಾಲಯಕ್ಕೆ ಅರ್ಜಿ ಸಲ್ಲಿಸಬೇಕು. ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಫೆ. 07 ರಿಂದ ಆರಂಭವಾಗಲಿದ್ದು, ಆನ್‌ಲೈನ್ ಅರ್ಜಿ ಸಲ್ಲಿಸಲು ಫೆ.28 ಕೊನೆಯ ದಿನವಾಗಿದೆ.

ಫಲಾನುಭವಿಗಳು ಅರ್ಜಿಯೊಂದಿಗೆ ಇತ್ತೀಚಿನ ಪಾಸ್‌ಪೋರ್ಟ್‌ ಅಳತೆಯ ಭಾವಚಿತ್ರ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್ ಬುಕ್ ಝರಾಕ್ಸ್, ನಿರಾಪೇಕ್ಷಣಾ ಪತ್ರ, ಖಾತೆ, ಸೈಟ್/ನಿವೇಶನಕ್ಕೆ ಸಂಬಂಧ ಪಟ್ಟ ದಾಖಲಾತಿಗಳನ್ನು ಸಲ್ಲಿಸಬೇಕು.

Recommended Video

ಇವತ್ತು ಹೈಕೋರ್ಟ್ ನಲ್ಲಿ ಗೆಲುವು ಯಾರಿಗೆ? ಹಿಜಾಬ್ ಅಥವಾ ಕೇಸರಿ ಶಾಲ್?? | Oneindia Kannada

18 ವರ್ಷ ಮೇಲ್ಪಟ್ಟ ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಕ್ಕೆ ಸೇರಿದ, ಕನಿಷ್ಟ 15 ವರ್ಷದಿಂದ ಕರ್ನಾಟಕದಲ್ಲಿಯೇ ನೆಲೆಸಿರುವ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ, ನಿಗಮದ ವೆಬ್‌ಸೈಟ್: www.karnataka.gov.in/kmvstdcl ದೂ.ಸಂ: 08539-221176 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
Job Fair: Application invited from eligible candidates in Koppal and Kalaburagi on Feb 12 and other job openings in the region.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X