ಕೊಪ್ಪಳ; ಗ್ರಾಮ ಒನ್ ಕೇಂದ್ರಗಳಲ್ಲಿ ಕೆಲಸ ಖಾಲಿ ಇದೆ

ಕೊಪ್ಪಳ, ಫೆಬ್ರವರಿ 09: ಕೊಪ್ಪಳ ಜಿಲ್ಲೆಯ ಕೆಲವು ಗ್ರಾಮ ಪಂಚಾಯತಿಗಳ ಗ್ರಾಮ-1 ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಆಸಕ್ತ ವಿದ್ಯಾವಂತ ನಿರುದ್ಯೋಗಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಆಸಕ್ತರು ಫೆಬ್ರವರಿ 15ರೊಳಗೆ ಅರ್ಜಿ ಸಲ್ಲಿಸಬಹುದು.

ಕೊಪ್ಪಳ ಜಿಲ್ಲೆಯಲ್ಲಿ ಗ್ರಾಮ-1 ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಜಿಲ್ಲೆಯ 8 ಗ್ರಾಮ ಪಂಚಾಯತಿಗಳಲ್ಲಿ ಹುದ್ದೆಗಳ ಮರು ಅಧಿಸೂಚನೆಯನ್ನು ಸರ್ಕಾರವು ಹೊರಡಿಸಿದೆ.

Koppal District Grama One Recruitment Apply Till February 15

ಗಂಗಾವತಿ ತಾಲ್ಲೂಕಿನ ವಡ್ಡರಹಟ್ಟಿ, ಕಾರಟಗಿ ತಾಲ್ಲೂಕಿನ ಬೆನ್ನೂರ, ಬೇವಿನಹಳ್ಳಿ ಹಾಗೂ ಸಿದ್ದಾಪುರ, ಕೊಪ್ಪಳ ತಾಲ್ಲೂಕಿನ ಗಿಣಿಗೇರಾ, ಕುಕನೂರು ತಾಲ್ಲೂಕಿನ ಇಟಗಿ, ಕುಷ್ಟಗಿ ತಾಲ್ಲೂಕಿನ ಕಿಲ್ಲಾರಹಟ್ಟಿ ಗ್ರಾಮ ಪಂಚಾಯತ್‌ಗಳಲ್ಲಿ ತಲಾ 1 ಮತ್ತು ಕನಕಗಿರಿಯ ತಾಲ್ಲೂಕಿನ ಹಿರೇಖೆಡ ಗ್ರಾಮ ಪಂಚಾಯಿತಿಯಲ್ಲಿ 2 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಒಟ್ಟು 9 ಗ್ರಾಮ-1 ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಸಲ್ಲಿಕೆ ಮಾಡುವವರು ಆಯಾ ಗ್ರಾಮ ಪಂಚಾಯಿತಿಯ ನಿವಾಸಿಯಾಗಿರಬೇಕು. ವಿದ್ಯಾವಂತ ನಿರುದ್ಯೋಗಿಗಳು ಫೆಬ್ರವರಿ 15ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತರಬೇತಿಗೆ ಅರ್ಜಿ ಆಹ್ವಾನ; ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯಿಂದ ಉಚಿತ ಕೌಶಲ್ಯಾಧಾರಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಕೆ ಮಾಡುವವರಿಗೆ 18 ರಿಂದ 45 ವಯೋಮಿತಿ ನಿಗದಿ ಮಾಡಲಾಗಿದೆ. ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಫೆಬ್ರವರಿ ತಿಂಗಳಲ್ಲಿ ಸೋಲಾರ್ ಟೆಕ್ನಿಷಿಯನ್, ಜೆಸಿಬಿ ಅಪರೇಟರ್ ಉಚಿತ ತರಬೇತಿಗಳು ಆರಂಭವಾಗಲಿದ್ದು, ತರಬೇತಿ ಅವಧಿಯಲ್ಲಿ ಊಟ ಹಾಗೂ ವಸತಿಯು ಉಚಿತ.

ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಲು ಫೆಬ್ರವರಿ 12 ಕೊನೆಯ ದಿನವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕ್‌ನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇತರ ಮಾಹಿತಿಯನ್ನು ಉಚಿತವಾಗಿ ನೀಡಲಾಗುತ್ತದೆ.

ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ, ದೂರವಾಣು ಸಂಖ್ಯೆ 8217236973, 9483485489, 9482555316 ಗೆ ಸಂಪರ್ಕಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+