ಕೊಪ್ಪಳ; ವಸತಿ ಶಾಲೆಯಲ್ಲಿ ಕೆಲಸ ಖಾಲಿ ಇದೆ, ಮಾಹಿತಿ

ಕೊಪ್ಪಳ, ಜನವರಿ 01; ಉದ್ಯೋಗ ಅರಸುತ್ತಿರುವ ಜನರಿಗೆ ಸಿಹಿಸುದ್ದಿ. ಕೊಪ್ಪಳದಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ, ಅರ್ಹರು ಜನವರಿ 3ರೊಳಗೆ ಅರ್ಜಿ ಸಲ್ಲಿಸಬೇಕು.

ಕೊಪ್ಪಳ ತಾಲ್ಲೂಕಿನ ಹನಕುಂಟಿಯ ಹಿಂದುಳಿದ ವರ್ಗಗಳ ಮೊರಾರ್ಜಿ ದೇಸಾಯಿ ವಸತಿ ಶಾಲೆ (377) ಇಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಖಾಲಿ ಇರುವ ಗಣಕಯಂತ್ರ ಶಿಕ್ಷಕರ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ.

Koppal Guest Teacher Recruitment For Residential School

ಈ ಹುದ್ದೆಯನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅತಿಥಿ ಶಿಕ್ಷಕರಾಗಿ ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರ ನಿಯಮಾನುಸಾರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಮಹಿಳಾ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಬಿಎಸ್ಸಿ-ಸಿ.ಎಸ್, ಬಿಎಸ್ಸಿ-ಐ.ಎಸ್, ಬಿ.ಇ-ಸಿ.ಎಸ್, ಬಿಸಿಎ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9620982291,7892259502ಗೆ ಕರೆ ಮಾಡಬಹುದು. ವಸತಿ ಶಾಲೆಯ ಪ್ರಾಂಶುಪಾಲರಾದ ಎನ್. ಎಸ್. ಜಾಧವ (7760422910) ಪ್ರಕಟಣೆಯಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ.

ಅಗ್ನಿಪಥ್ ನೇಮಕಾತಿ ಪರೀಕ್ಷೆಗೆ ತರಬೇತಿ; ಕೊಪ್ಪಳ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಮರ್ಪಕ ಸೇವಾ ಸಮಿತಿ ಮತ್ತು ವಿಜಯೋನ್ನತಿ ಸ್ಪರ್ಧಾತ್ಮಕ ತರಬೇತಿ ಸಂಸ್ಥೆ, ಕೊಪ್ಪಳ ಇವರ ಸಹಯೋಗದೊಂದಿಗೆ ಲಿಖಿತ ಪರೀಕ್ಷೆ ತರಬೇತಿ ನೀಡಲಾಗುತ್ತದೆ.

ಭಾರತೀಯ ಸೇನೆಯ ಅಗ್ನಿಪಥ್ ಹುದ್ದೆಗೆ ಲಿಖಿತ ಪರೀಕ್ಷೆಗಾಗಿ ಉನ್ನತ ಮಟ್ಟದ ತರಬೇತಿ ಶಿಬಿರವನ್ನು ಆಯೋಜನೆ ಮಾಡಲಾಗಿದೆ. ಕೊಪ್ಪಳ ಜಿಲ್ಲೆಯ ಆಸಕ್ತ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಕನಿಷ್ಠ 17.5 ವರ್ಷದಿಂದ ಗರಿಷ್ಠ 21 ವರ್ಷ ವಯೋಮಿತಿಯುಳ್ಳ ಯುವಕರಿಗೆ ಲಿಖಿತ ಪರೀಕ್ಷೆ ತರಬೇತಿಯನ್ನು ನೀಡಲಾಗುತ್ತದೆ. ಜನವರಿ 2ನೇ ವಾರದಿಂದ ತರಬೇತಿಯನ್ನು ಪ್ರಾರಂಭ ಮಾಡುತ್ತಿದ್ದು, ಒಟ್ಟು 60 ಯುವಕರಿಗೆ ಮಾತ್ರ ಅವಕಾಶವಿದೆ.

ಮೊದಲು ಬರುವ ಯುವಕರಿಗೆ ಆದ್ಯತೆ ನೀಡಲಾಗುತ್ತದೆ. ಒಂದು ವೇಳೆ ಹೆಚ್ಚಿನ ಯುವಕರು ನೋಂದಾಯಿಸಿದ್ದಲ್ಲಿ, ಪ್ರವೇಶ ಪರೀಕ್ಷೆ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

ಆಸಕ್ತರು ಅರ್ಜಿಗಳನ್ನು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಕೊಪ್ಪಳ ಇಲ್ಲಿ ಪಡೆದು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಭಿಮೇಶ ಕುರಿ, ದೂರವಾಣಿ ಸಂಖ್ಯೆ 9845858494 ಇವರನ್ನು ಸಂಪರ್ಕಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+