ಕೊಪ್ಪಳ; ಕೆಲಸ ಖಾಲಿ ಇದೆ, ಹುದ್ದೆ ಮತ್ತು ವೇತನದ ವಿವರ
ಕೊಪ್ಪಳ, ಆಗಸ್ಟ್ 25: ಕೊಪ್ಪಳದಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಮತ್ತು ಅತಿಥಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆ, ವೇತನದ ವಿವರಗಳು ಇಲ್ಲಿವೆ.
ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಪ್ಪಳ, ಗಂಗಾವತಿ ತಾಲೂಕಿನ ಹೇರೂರು ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ 1 ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಯನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಜಿ ಕರೆದಿದದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಗೌರವಧನ ರೂ. 9000. ಅಭ್ಯರ್ಥಿಗಳು ಎಸ್. ಎಸ್. ಎಲ್. ಸಿ ವಿದ್ಯಾರ್ಹತೆ ಹೊಂದಿದರಬೇಕು. ವಿಕಲಚೇತನ ಅಭ್ಯರ್ಥಿಗಳು ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ. ನಿಗದಿತ ಅರ್ಜಿ ನಮೂನೆಯನ್ನು 25/8/2023 ರಿಂದ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿಯಿಂದ ಅಥವಾ ಗಂಗಾವತಿ ತಾಲೂಕಿನ ವಿವಿಧೋದ್ದೇಶ ಒಳಗೆ ಜಿಲ್ಲಾ ಅಂಗವಿಕಲರ ಪುನರ್ವಸತಿ ಕಾರ್ಯಕರ್ತರಿಂದ ಪಡೆದು 13/9/2023ರೊಳಗೆ ಸಲ್ಲಿಸಬೇಕು.
ಸದರಿ ಹುದ್ದೆ ಸಂಪೂರ್ಣವಾಗಿ ಗೌರಧನದ ಆಧಾರದ ಮೇಲೆ ಹಾಗೂ ತಾತ್ಕಾಲಿಕ ಹುದ್ದೆಯಾಗಿರುತ್ತದೆ. ನಿಗದಿಪಡಿಸಿದ ದಿನಾಂಕದ ನಂತರ ಬಂದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸಲಾಗುವುದಿಲ್ಲ.
ಅರ್ಹತೆಗಳು
* ಅಭ್ಯರ್ಥಿಗಳು 18-45 ವರ್ಷದೊಳಗಿನ ನಿರುದ್ಯೋಗಿ ಅಂಗವಿಕಲರಾಗಿರಬೇಕು.
* ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣ/ ಅನುತ್ತೀರ್ಣ ಹೊಂದಿರಬೇಕು.
* ವಿಶೇಷ ಶಿಕ್ಷಣ, ಆರ್‌ಸಿಐ ತರಬೇತಿ, ದಿವ್ಯಾಂಗ ಮಿತ್ರ ತರಬೇತಿ, ಸನ್ನೆ ಭಾಷೆ ತರಬೇತಿ, ಧೈಹಿಕ ವ್ಯಾಯಾಮ ತರಬೇತಿ ವಿಶೇಷ ಜ್ಞಾನಗಳನ್ನು ಪಡೆದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ
* ಅಂಗವಿಕಲರ ಯು.ಡಿ.ಐ.ಡಿ ವಿಶೇಷ್ಠ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹೊಂದಿದವರಾಗಿರಬೇಕು.
* ಅದೇ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿಯಾಗಿರಬೇಕು.
* ತಹಶೀಲ್ದಾರ್‌ರಿಂದ ಪಡೆದ ಜಾತಿ, ಆದಾಯ ಮತ್ತು ವಾಸಸ್ಥಳ ಪ್ರಮಾಣ ಪತ್ರವನ್ನು ಲಗತ್ತಿಸಬೇಕು.
* ವಿಕಲಚೇತನರ ಕಲ್ಯಾಣಕ್ಕಾಗಿ ಕೆಲಸ ಮಾಡಿದ ಅನುಭವವಿದ್ದಲ್ಲಿ ಸಂಬಂಧಪಟ್ಟ ದಾಖಲೆಗಳನ್ನು ಲಗತ್ತಿಸುವುದು.
* ಮಹಿಳಾ ವಿಕಲಚೇತನರಿಗೆ ಮೊದಲ ಆದ್ಯತೆ ನೀಡಲಾಗುವುದು
ಆಸಕ್ತರು ಅರ್ಜಿಗಳನ್ನು ಕಲ್ಯಾಣಾಧಿಕಾರಿಗಳ ಕಛೇರಿ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾಲಯ ಆವರಣ ಕೊಠಡಿ ಸಂಖ್ಯೆ 31,32 ರಿಲಾಯನ್ಸ್ ಪೆಟ್ರೋಲ್ ಬಂಕ್ ಎದುರು, ಹೊಸಪೇಟೆ ರಸ್ತೆ ಕೊಪ್ಪಳ ಕಛೇರಿಗೆ ಸಲ್ಲಿಸಬೇಕು.
ಅತಿಥಿ ಶಿಕ್ಷಕರ ಹುದ್ದೆ; 2023-24ನೇ ಶೈಕ್ಷಣಿಕ ಸಾಲಿನಲ್ಲಿ ಅಲ್ಪಸಂಖ್ಯಾತರ ಸರಕಾರಿ ಮೌಲಾನಾ ಆಜಾದ್ ಮಾದರಿ ಶಾಲೆ ಮುನಿರಾಬಾದ್, ತಾಲ್ಲೂಕ & ಜಿಲ್ಲಾ ಕೊಪ್ಪಳ ಈ ಶಾಲೆಯಲ್ಲಿ ಗಣಿತ ವಿಷಯದ (1 ಹುದ್ದೆ) ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಕರೆಯಲಾಗಿದೆ.
ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ದಿನಾಂಕ 1/9/2023ರ ಒಳಗೆ ಸರಕಾರಿ ಮೌಲಾನಾ ಆಜಾದ್ ಮಾದರಿ ಶಾಲೆ ಮುನಿರಾಬಾದ್, ತಾಲ್ಲೂಕು & ಜಿಲ್ಲಾ ಕೊಪ್ಪಳ ಇಲ್ಲಿಗೆ ಖುದ್ದಾಗಿ ಬಂದು ಅರ್ಜಿ ಸಲ್ಲಿಸಬಹುದಾಗಿದೆ.
ಗಣಿತ ವಿಷಯದ ಅತಿಥಿ ಶಿಕ್ಷಕರ (PCM) ಹುದ್ದೆಗೆ ಕನಿಷ್ಠ ವಿದ್ಯಾರ್ಹತೆ ಬಿ.ಎಸ್.ಸಿ, ಬಿ.ಇಡಿ ಆಗಿರಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 900617290/ 9980229105.












Click it and Unblock the Notifications