ಜುಲೈ 27, 28ರಂದು ವಿವಿಧ ಜಿಲ್ಲೆಯಲ್ಲಿ ಉದ್ಯೋಗ ಮೇಳ, ನೇರ ಸಂದರ್ಶನ

ಬೆಂಗಳೂರು, ಜುಲೈ 26; ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕ/ ಯುವತಿಯರಿಗೆ ಸಿಹಿಸುದ್ದಿ. ಜುಲೈ 27 ಮತ್ತು 28ರಂದು ವಿವಿಧ ಜಿಲ್ಲೆಗಳಲ್ಲಿ ಉದ್ಯೋಗ ಮೇಳ, ನೇರ ಸಂದರ್ಶನ ನಡೆಯಲಿದೆ. ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬಹುದು.

ಕೊಪ್ಪಳ, ಶಿವಮೊಗ್ಗ, ಕಲಬುರಗಿಯಲ್ಲಿನ ಉದ್ಯೋಗ ಮಾಹಿತಿ ಈ ಪುಟದಲ್ಲಿ ನಿಮಗೆ ಸಿಗಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಜಿಲ್ಲೆಯಲ್ಲಿ ಲಭ್ಯವಿರುವ ಈ ಸದಾವಕಾಶವನ್ನು ಉಪಯೋಗಿಸಿಕೊಂಡು ಉದ್ಯೋಗ ಪಡೆಯಬಹುದಾಗಿದೆ.

ವಾಕ್ ಇನ್ ಇಂಟರ್‌ ವ್ಯೂ; ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜುಲೈ 27ರಂದು ಬೆಳಗ್ಗೆ 10.30 ರಿಂದ 3.30ರ ತನಕ ವಾಕ್ ಇನ್ ಇಂಟರ್‌ ವ್ಯೂ ಆಯೋಜನೆ ಮಾಡಲಾಗಿದೆ. 20 ರಿಂದ 35 ವರ್ಷ ವಯೋಮಿತಿಯ ಯುವಕ/ ಯುವತಿಯರು ಈ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.

Koppal Shivamogga Kalaburagi Job Fair And Walk In Interview On July 27 and 28

ವಾಕ್ ಇನ್ ಇಂಟರ್‌ ವ್ಯೂನಲ್ಲಿ ಬಳ್ಳಾರಿಯ ಕೆ. ಪಿ. ಎಫ್ ಪ್ರೈ. ಲಿ. ಭಾಗವಹಿಸುತ್ತಿದೆ. ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಪಿಯುಸಿ, ಐಟಿಐ, ಯಾವುದೇ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಭಾಗವಹಿಸಬಹುದು.

ಅಭ್ಯರ್ಥಿಗಳು ಸ್ವವಿವರದ ಮಾಹಿತಿ, ಪ್ರಮಾಣ ಪತ್ರಗಳು, ಆಧಾರ್ ಕಾರ್ಡ್, ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆ 9449876009, 08539-220859.

ಉದ್ಯೋಗ ಮೇಳ; ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು 28/07/2022 ರಂದು ಬೆಳಗ್ಗೆ 10.00ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಆಯೋಜಿಸಿದೆ. ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್. ಎಸ್. ಎಲ್. ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳ ನೇಮಕಾತಿ ನಡೆಯಲಿದೆ.

ಆಸಕ್ತರು ತಮ್ಮ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಹಾಜರಾಗಬಹುದು.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08182-255293/ 9380663606/ 9482023412 ಕರೆ ಮಾಡಬಹುದಾಗಿದೆ.

ವಾಕ್ ಇನ್ ಸಂದರ್ಶನ; ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿ. ಆರ್. ಡಿ. ಎಲ್ ಮತ್ತು ಎಂ. ಆರ್. ಯು ವಿಭಾಗಗದಲ್ಲಿನ ಕೆಲವು ಹುದ್ದೆಗಳ ಭರ್ತಿಗೆ ಜುಲೈ 27 ರಂದು ಬೆಳಗ್ಗೆ 8 ಗಂಟೆಗೆ ಸಂಸ್ಥೆಯ ಆಡಳಿತ ವಿಭಾಗದಲ್ಲಿ ನೇರ ಸಂದರ್ಶನ ಆಯೋಜನೆ ಮಾಡಿದೆ. ಸಂಸ್ಥೆಯ ನಿರ್ದೇಶಕಿ ಡಾ. ಕವಿತಾ ಪಾಟೀಲ ಈ ಕುರಿತು ಮಾಹಿತಿ ನೀಡಿದ್ದಾರೆ. ಸಂಸ್ಥೆ 21-06-2022 ಮತ್ತು 22-0-2022 ರಂದು ಹುದ್ದೆಗಳ ಭರ್ತಿಗೆ ಪ್ರಕಟಣೆ ಹೊರಡಿಸಿ ಅರ್ಜಿ ಅಹ್ವಾನಿಸಿತ್ತು.

ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ; ಕಲಬುರಗಿ ಜಿಲ್ಲೆಯ ಕಾಳಗನೂರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಖಾಲಿ ಇರುವ ಗಣಿತ ವಿಷಯದ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸುವವರು ಬಿ. ಎ, ಬಿ. ಎಡ್. ಪದವಿ ವಿದ್ಯಾರ್ಹತೆ ಹೊಂದಿರಬೇಕು. ಟಿ. ಇ. ಟಿ. ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 10,000 ರೂ. ಗಳ ವೇತನ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್‍ನೊಂದಿಗೆ ಕಾಳಗನೂರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9741182727 ಕರೆ ಮಾಡಲು ಸೂಚಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+