ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಪ್ಪಳ; 22 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಜನವರಿ 08 : ಕೊಪ್ಪಳ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 5/2/2020.

ಒಟ್ಟು 22 ಗ್ರಾಮ ಲೆಕ್ಕಾಧಿಕಾರಿ (Village accountant) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದು. ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸಲು ಅವಕಾಶವಿಲ್ಲ.

ಪಶ್ಚಿಮ ರೈಲ್ವೆ ನೇಮಕಾತಿ: 3553 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಪಶ್ಚಿಮ ರೈಲ್ವೆ ನೇಮಕಾತಿ: 3553 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಸಕ್ತರು http://koppal-va.kar.nic.in/ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಇತ್ತೀಚಿನ ಭಾವ ಚಿತ್ರವನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಬೇಕು. ಅರ್ಜಿ ಸಲ್ಲಿಸಿದ ಬಳಿಕ ದ್ವಿ ಪ್ರತಿ ಚಲನ್‌ಅನ್ನು ತೆಗೆದುಕೊಳ್ಳತಕ್ಕದ್ದು. ಈ ಚಲನ್‌ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿ; ಅರ್ಜಿ ಹಾಕಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನೇಮಕಾತಿ; ಅರ್ಜಿ ಹಾಕಿ

ಸ್ಟೇಟ್ ಬ್ಯಾಂಕ್‌ ಆಫ್ ಇಂಡಿಯಾದಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಅರ್ಜಿ ಶುಲ್ಕಗಳನ್ನು ಪಾವತಿ ಮಾಡಲು 12/2/2020 ಕೊನೆಯ ದಿನವಾಗಿದೆ. ನಗದು/ಡಿಡಿ/ಪೋಸ್ಟಲ್ ಆರ್ಡರ್, ಮನಿ ಆರ್ಡರ್‌ ಮೂಲಕ ಶುಲ್ಕವನ್ನು ಪಾವತಿ ಮಾಡುವಂತಿಲ್ಲ.

ಇಸ್ರೋದಲ್ಲಿ 21 ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಇಸ್ರೋದಲ್ಲಿ 21 ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ

ಖಾಲಿ ಇರುವ ಹುದ್ದೆಗಳ ಸಂಖ್ಯೆ

ಖಾಲಿ ಇರುವ ಹುದ್ದೆಗಳ ಸಂಖ್ಯೆ

ಖಾಲಿ ಇರುವ ಒಟ್ಟು ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ಸಂಖ್ಯೆ 22. ಸ್ಥಳೀಯ ವೃಂದದಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆ 20. ಮಿಕ್ಕುಳಿದ ವೃಂದದಲ್ಲಿ ಖಾಲಿ ಇರುವ ಹುದ್ದೆಗಳು 2. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆಯ ವಿವರಗಳು

ವಿದ್ಯಾರ್ಹತೆಯ ವಿವರಗಳು

ಅರ್ಜಿಗಳನ್ನು ಸಲ್ಲಿಸಲಿರುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಅಥವ ಸಿಬಿಎಸ್ಇ, ಐಸಿಎಸ್‌ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಈ ವಿದ್ಯಾರ್ಹತೆಯನ್ನು ಅಧಿಸೂಚನೆ ಹೊರಡಿಸಿರುವ ದಿನಾಂಕಕ್ಕೆ ಮುಂಚಿತವಾಗಿ ಹೊಂದಿರತಕ್ಕದ್ದು. ಈ ವಿದ್ಯಾರ್ಹತೆ ಬಿಟ್ಟು ಯಾವುದೇ ತತ್ಸಮಾನ ವಿದ್ಯಾರ್ಹತೆ ಪರಿಗಣಿಸಲಾಗುವುದಿಲ್ಲ. ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ.

ವಯೋಮಿತಿಯ ವಿವರಗಳು

ವಯೋಮಿತಿಯ ವಿವರಗಳು

ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕವಾದ 5/2/2020ರಂದು ಈ ವಯೋಮಿತಿಯನ್ನು ಹೊಂದಿರಬೇಕು. ಕನಿಷ್ಠ ವಯೋಮಿತಿ 18 ವರ್ಷಗಳು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರ. ವರ್ಗ-1ರ ಅಭ್ಯರ್ಥಿಗಳಿಗೆ 40, ಪ.ವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷ, ಸಾಮಾನ್ಯ ವರ್ಗದವರಿಗೆ 35 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕದ ವಿವರಗಳು

ಅರ್ಜಿ ಶುಲ್ಕದ ವಿವರಗಳು

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಪ್ರತ್ಯೇಕ ಬ್ಯಾಂಕ್ ಶುಲ್ಕದ ಜೊತೆ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರ. ವರ್ಗ-1ರ ಅಭ್ಯರ್ಥಿಗಳು 200 ರೂ., ಪ.ವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 300 ರೂ., ಸಾಮಾನ್ಯ ವರ್ಗದವರಿಗೆ 400 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ.

English summary
Apply for village accountant post in Koppal district. 5/2/2020 last date to submit application through online.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X