ಕೆಪಿಸಿಎಲ್‌ನಲ್ಲಿ ಕೆಲಸ ಖಾಲಿ ಇದೆ; ರಾಯಚೂರಿನಲ್ಲಿ ಕೆಲಸ
ಬೆಂಗಳೂರು, ಫೆಬ್ರವರಿ 18 : ಕರ್ನಾಟಕ ವಿದ್ಯುತ್ ನಿಗಮ ರಾಯಚೂರಿನ ಉಷ್ಣ ವಿದ್ಯುತ್ ಸ್ಥಾಪರದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಅರ್ಜಿಗಳನ್ನು ಸಲ್ಲಿಸಲು 13 ಮಾರ್ಚ್ 2020 ಕೊನೆಯ ದಿನವಾಗಿದೆ.
ಕೆಪಿಸಿಎಲ್ Railway Liaison Officer ಹುದ್ದೆ ಭರ್ತಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾದವರು ರಾಯಚೂರಿನಲ್ಲಿ ಕೆಲಸ ಮಾಡಬೇಕಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಡೌನ್ ಲೋಡ್ ಮಾಡಿಕೊಂಡು ಸಲ್ಲಿಸಬೇಕಾಗಿದೆ.
ಮಾನ್ಯತೆ ಪಡೆದ ಬೋರ್ಡ್ ಅಥವ ವಿಶ್ವವಿದ್ಯಾಲಯದಿಂದ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 60,000 ರೂ. ವೇತನವನ್ನು ನಿಗದಿಗೊಳಿಸಲಾಗಿದೆ. ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 60 ಮತ್ತು ಗರಿಷ್ಠ 65 ವರ್ಷದ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸುವ ಎಸ್‌ಸಿ/ಎಸ್‌ಟಿ/ಪ್ರವರ್ಗ-1ರ ಅಭ್ಯರ್ಥಿಗಳು 250 ರೂ., ಇತರ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿದೆ. ಡಿಡಿ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು.
ಸಂದರ್ಶನಕ್ಕೆ ಬರುವಾಗ ಅರ್ಜಿಗಳನ್ನು ಸಲ್ಲಿಸಿದ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ಪರೀಕ್ಷೆ ಪ್ರಮಾಣ ಪತ್ರ, ಪದವಿ ಪ್ರಮಾಣ ಪತ್ರಗಳು (ಎಲ್ಲಾ ಸೆಮಿಸ್ಟರ್), ಅನುಭವದ ಪ್ರಮಾಣ ಪತ್ರದ ಮೂಲ ಪ್ರತಿ, ಎರಡು ಸೆಟ್ ಝೆರಾಕ್ಸ್ ಪ್ರತಿಗಳು, 2 ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳನ್ನು ತರಬೇಕು.
ಆಸಕ್ತ ಅಭ್ಯರ್ಥಿಗಳು ವೆಬ್ ಸೈಟ್ ಮೂಲಕ ಅರ್ಜಿಗಳನ್ನು ಡೌನ್ ಲೋಡ್ ಮಾಡಿಕೊಂಡು ಎಲ್ಲಾ ಮಾಹಿತಿಗಳನ್ನು ಭರ್ತಿ ಮಾಡಿ ಮಾರ್ಚ್ 13ರೊಳಗೆ ಕೆಳಕಂಡ ವಿಳಾಸಕ್ಕೆ ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಮೂಲಕ ಸಲ್ಲಿಸಬಹುದಾಗಿದೆ.
ವಿಳಾಸ : KPCL
No.82
Shakti Bhavan
Race Course Road
Bengaluru - 560001
ಅರ್ಜಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications