KAS Recruitment: ಗೆಜೆಟೆಡ್ ಪ್ರೊಬೇಷನರ್ಸ್‌ ಪೂರ್ವಭಾವಿ ಪರೀಕ್ಷೆ ವೇಳಾಪಟ್ಟಿ

ಬೆಂಗಳೂರು, ಆಗಸ್ಟ್ 10: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಆಗಸ್ಟ್ 27ರಂದು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆಯನ್ನು ನಡೆಸಲಿದೆ. ಈ ಪರೀಕ್ಷೆ ವೇಳಾಪಟ್ಟಿಯನ್ನು ಘೋಷಣೆ ಮಾಡಲಾಗಿದೆ, ಆಗಸ್ಟ್ 15ರ ಬಳಿಕ ಅಭ್ಯರ್ಥಿಗಳು ವೆಬ್‌ಸೈಟ್ ಮೂಲಕ ಹಾಲ್ ಟಿಕೆಟ್ ಡೌನ್ ಲೋಡ್ ಮಾಡಿಕೊಳ್ಳಬಹುದು.

ಈಗಾಗಲೇ ಆಗಸ್ಟ್‌ 27ರ ಮಂಗಳವಾರ ಪರೀಕ್ಷೆಗಳನ್ನು ವಿವಿಧ ಕೇಂದ್ರಗಳಲ್ಲಿ ನಡೆಸಲು ಪೂರ್ವಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷೆಗಳಿಗೆ ಅರ್ಜಿ ಸಲ್ಲಿಕೆ ಮಾಡಿದ ಸೇವಾ ನಿರತ ನೌಕರರು ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ವಿಶೇಷ ಸಾಂಧರ್ಭಿಕ ರಜೆ ಘೋಷಣೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳು ಇರುವ ಶಾಲಾ/ ಕಾಲೇಜಿಗೂ ರಜೆಯನ್ನು ನೀಡಿ ಸರ್ಕಾರ ಆದೇಶಿಸಿದೆ.

KPSC 384 Gazetted Probationers Preliminary Exam On August 27 Schedule

ಕೆಪಿಎಸ್‌ಸಿ ಕಾರ್ಯದರ್ಶಿ ಡಾ. ರಾಕೇಶ್ ಕುಮಾರ್ ಕೆ. ಆಗಸ್ಟ್ 27ರಂದು ನಡೆಯುವ ಗೆಜೆಟೆಡ್ ಪ್ರೊಬೇಷನರ್ಸ್‌ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಅಭ್ಯರ್ಥಿಗಳ ಡ್ರೆಸ್ ಕೋಡ್ ಬಗ್ಗೆ ಪ್ರತ್ಯೇಕವಾಗಿ ಮತ್ತೊಂದು ಆದೇಶವನ್ನು ಹೊರಡಿಸಲಾಗುತ್ತದೆ.

ಪರೀಕ್ಷೆ ವೇಳಾಪಟ್ಟಿ: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆ ವೇಳಾಪಟ್ಟಿ ಹೀಗಿದೆ. ಒಟ್ಟು ಎರಡು ಪತ್ರಿಕೆಗಳ ಪರೀಕ್ಷೆಗಳು ಆಗಸ್ಟ್ 27ರ ಒಂದೇ ದಿನ ನಡೆಯಲಿದೆ.

ಬೆಳಗ್ಗೆ 10 ರಿಂದ 12 ಗಂಟೆಯ ತನಕ ಪತ್ರಿಕೆ-1 ಪರೀಕ್ಷೆ ನಡೆಯಲಿದೆ. ಮಧ್ಯಾಹ್ನ 2 ರಿಂದ 4 ಗಂಟೆಯ ತನಕ ಪತ್ರಿಕೆ-2 ಪರೀಕ್ಷೆಗಳು ನಡೆಯಲಿವೆ ಎಂದು ಕಾರ್ಯದರ್ಶಿಗಳು ಮಾಹಿತಿ ನೀಡಿದ್ದಾರೆ.

ಗೆಜೆಟೆಡ್ ಪ್ರೊಬೇಷನರ್ಸ್‌ (ಕೆಎಎಸ್) ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈಗ ನೇಮಕಾತಿ ಪ್ರಕ್ರಿಯೆ ಪೂರ್ವಭಾವಿ ಪರೀಕ್ಷೆಯ ಹಂತಕ್ಕೆ ಬಂದಿದೆ. ಒಟ್ಟು 384 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಕೆಪಿಎಸ್‌ಸಿ ಮಾಹಿತಿ ಪ್ರಕಾರ 2,10,910 ಅರ್ಜಿಗಳು ಸಲ್ಲಿಕೆಯಾಗಿವೆ.

ಮೊದಲು ಕೆಪಿಎಸ್‌ಸಿ ಆಗಸ್ಟ್ 25ರ ಭಾನುವಾರ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ ಗ್ರೂಪ್ 'ಎ' ಮತ್ತು 'ಬಿ' ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆ ನಡೆಸುವುದಾಗಿ ಘೋಷಣೆ ಮಾಡಿತ್ತು. ಆದರೆ ಅಂದು ಐ.ಬಿ.ಪಿ.ಎಸ್. ಪರೀಕ್ಷೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು, ಹಲವು ಸಂಘಟನೆಗಲು ಪರೀಕ್ಷೆ ಮುಂದೂಡಿಕೆ ಮಾಡಬೇಕು ಎಂದು ಒತ್ತಾಯಿಸಿದ್ದವು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಅಲ್ಪಕಾಲ ಪರೀಕ್ಷೆ ಮುಂದೂಡಬೇಕು ಎಂದು ಸಲಹೆ ನೀಡಿದ್ದರು. ಈಗಾಗಲೇ ಆಯೋಗ ಪರೀಕ್ಷೆಗೆ ಎಲ್ಲಾ ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಕಾಲಾವಕಾಶ ನೀಡದೆ, ದಿನಾಂಕ 27-08-2024ರಂದು ಪೂರ್ವಭಾವಿ ಪರೀಕ್ಷೆಯನ್ನು ಮರುನಿಗದಿ ಮಾಡಿತ್ತು.

ನೇಮಕಾತಿಗೆ ಅರ್ಜಿಗಳನ್ನು ಸಲ್ಲಿಕೆ ಮಾಡಿರುವ ಅಭ್ಯರ್ಥಿಗಳು ದಿನಾಂಕ 15-08-2024ರ ನಂತರ ಪ್ರವೇಶ ಪತ್ರವನ್ನು ಆಯೋಗದ ಅಂತರ್ಜಾಲದಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಈಗಾಗಲೇ ತಿಳಿಸಲಾಗಿದೆ. ಪರೀಕ್ಷೆ ದಿನದ ವಸ್ತ್ರ ಸಂಹಿತೆ ಕುರಿತು ಶೀಘ್ರವೇ ಸುತ್ತೋಲೆಯನ್ನು ಹೊರಡಿಸಲಾಗುತ್ತದೆ.

ಪರೀಕ್ಷೆ ನಡೆಯುವ ದಿನಾಂಕ 27-08-2024 ಕಾರ್ಯ ನಿರ್ವಹಣಾ (Working day) ದಿನವಾಗಿದೆ. ಆದ್ದರಿಂದ ರಾಜ್ಯದ ಎಲ್ಲಾ ಜಿಲ್ಲೆಗಳ ಪರೀಕ್ಷಾ ಉಪಕೇಂದ್ರಗಳಿಗೆ ವಿಶೇಷ/ ಸಾರ್ವತ್ರಿಕ ರಜೆಯನ್ನು ಘೋಷಿಸಲು ಹಾಗೂ ಸದರಿ ಹುದ್ದೆಗೆ ಅರ್ಜಿ ಸಲ್ಲಿಸಿರುವ ರಾಜ್ಯ ಸರ್ಕಾರದ ಸೇವಾನಿರತ ಅಭ್ಯರ್ಥಿಗಳು ಪರೀಕ್ಷೆಯನ್ನು ಬರೆಯಲು ಅನುಕೂಲವಾಗುವಂತೆ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಣೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+