384 ಗೆಜೆಟೆಡ್ ಪ್ರೊಬೇಷನರ್ ಪೂರ್ವಭಾವಿ ಪರೀಕ್ಷೆ; ವೇಳಾಪಟ್ಟಿ
ಬೆಂಗಳೂರು, ಏಪ್ರಿಲ್ 30: ಕರ್ನಾಟಕ ಲೋಕಸೇವಾ ಆಯೋಗ 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. 21/7/2024ರಂದು ಪರೀಕ್ಷೆಗಳು ನಡೆಯಲಿವೆ.
ಈ ಕುರಿತು ಕೆಪಿಎಸ್‌ಸಿ ಕಾರ್ಯದರ್ಶಿಯಾದ ಡಾ. ರಾಕೇಶ್ ಕುಮಾರ್ ಕೆ. ಆದೇಶ ಹೊರಡಿಸಿದ್ದಾರೆ. ಈಗಾಗಲೇ ಆನ್‌ಲೈನ್ ಮೂಲಕ ಆಯೋಗ 2023-24ನೇ ಸಾಲಿನಲ್ಲಿ 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿತ್ತು.

ಪರೀಕ್ಷೇ ವೇಳಾಪಟ್ಟಿ: ಆದೇಶದ ಪ್ರಕಾರ 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯು 21/7/2024ರ ಭಾನುವಾರ ನಡೆಯಲಿದೆ. ಅಂದು ಬೆಳಗ್ಗೆ 10 ರಿಂದ 12 ಗಂಟೆಯ ತನಕ ಪತ್ರಿಕೆ-1 ಮತ್ತು ಮಧ್ಯಾಹ್ನ 2 ರಿಂದ 4 ಗಂಟೆಯ ತನಕ ಪತ್ರಿಕೆ-2 ಪರೀಕ್ಷೆಗಳು ನಡೆಯಲಿವೆ.
ಕೆಪಿಎಸ್‌ಸಿ ಗ್ರೂಪ್ 'ಎ'ನಲ್ಲಿ ಒಟ್ಟು 156, ಗ್ರೂಪ್ 'ಬಿ'ನಲ್ಲಿ 225 ಸೇರಿ ಒಟ್ಟು 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಿರುವ ಅಭ್ಯರ್ಥಿಗಳು ಪರೀಕ್ಷೆ ಬರೆಯಬೇಕಿದೆ.
ಸ್ಪರ್ಧಾತ್ಮಕ ಪರೀಕ್ಷಾ ವಿಧಾನ: ಈ ಸ್ಪರ್ಧಾತ್ಮಕ ಪರೀಕ್ಷೆಯು ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ಸ್‌ಗಳ ನೇಮಕಾತಿ (ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ) ನಿಯಮ 1997ರ ಷೆಡ್ಯೂಲ್ 2ರಲ್ಲಿ ತಿಳಿಸಿರುವಂತೆ ಎರಡು ಹಂತಗಳನ್ನು ಒಳಗೊಂಡಿರುತ್ತದೆ:
ಪೂರ್ವಭಾವಿ ಪರೀಕ್ಷೆಯನ್ನು ಮುಖ್ಯ ಪರೀಕ್ಷೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ನಡೆಸಲಾಗುವುದು ಮತ್ತು ಮುಖ್ಯ ಪರೀಕ್ಷೆಯನ್ನು ಮತ್ತು ವ್ಯಕ್ತಿತ್ವ ಪರೀಕ್ಷೆಯನ್ನು ವಿವಿಧ ಸೇವೆಗಳು ಮತ್ತು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ನಡೆಸಲಾಗುತ್ತದೆ. ಹೆಚ್ಚಿನ ವಿವರಗಳಿಗೆ ನಿಯಮಗಳನ್ನು ನೋಡಲು http://kpsc.kar.nic.in ವೆಬ್‌ಸೈಟ್ ನೋಡಬಹುದು.
ಪೂರ್ವಭಾವಿ ಪರೀಕ್ಷೆ. ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ಸ್ (ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ) (9ನೇ ತಿದ್ದುಪಡಿ) ನಿಯಮಗಳು, 2011 ರಂತೆ ಪೂರ್ವಭಾವಿ ಪರೀಕ್ಷೆಯು ವಸ್ತುನಿಷ್ಕ (ಬಹು ಆಯ್ಕೆ) ಮಾದರಿಯ ಎರಡು ಪತ್ರಿಕೆಗಳನ್ನು ಒಳಗೊಂಡಿರುತ್ತದೆ. ಪ್ರತಿ ಪ್ರಶ್ನೆಗೆ ಎರಡು ಅಂಕಗಳಂತೆ ಪ್ರತಿ ಪತ್ರಿಕೆಯು 100 ಪ್ರಶ್ನೆಗಳನ್ನೊಳಗೊಂಡಿರುತ್ತದೆ.
#KAS pic.twitter.com/n37imDVslP
— KPSC ಅಡ್ಡ (@kpscadda) April 29, 2024
ಪ್ರತಿ ಪತ್ರಿಕೆಯು ಗರಿಷ್ಠ 200 ಅಂಕಗಳು ಮತ್ತು ಎರಡು ಗಂಟೆಗಳ ಕಾಲಾವಧಿಯದ್ದಾಗಿದ್ದು (ಎರಡು ಪತ್ರಿಕೆಗಳಿಗೆ ಒಟ್ಟು 400 ಅಂಕಗಳು). ಪ್ರಶ್ನೆ ಪತ್ರಿಕೆ ಕನ್ನಡ, ಆಂಗ್ಲ ಭಾಷೆಗಳೆರಡರಲ್ಲೂ ಇರುತ್ತದೆ. ಪೂರ್ವಭಾವಿ ಪರೀಕ್ಷೆಯಲ್ಲಿನ ಸಾಮಾನ್ಯ ಮನೋ (ಬೌದ್ಧಿಕ) ಸಾಮರ್ಥ್ಯದ ಪ್ರಶ್ನೆಗಳ ಮಟ್ಟವು ಎಸ್‌ಎಸ್‌ಎಲ್‌ಸಿ/ 10ನೇ ತರಗತಿಯ ಮಟ್ಟದ್ದಾಗಿರುತ್ತದೆ ಮತ್ತು ಉಳಿದ ಪತ್ರಿಕೆಗಳು ಪದವಿ ಮಟ್ಟದ್ದಾಗಿರುತ್ತದೆ.
ಪ್ರಕಟಿತ ರಿಕ್ತ ಸ್ಥಾನಗಳಿಗೆ ಅನುಗುಣವಾಗಿ 1:15 ಅನುಪಾತದಲ್ಲಿ ಜಾರಿಯಲ್ಲಿರುವ ಮೀಸಲಾತಿ ನೀತಿಯನ್ವಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳು ಮತ್ತು ಸಾಮಾನ್ಯ ವರ್ಗಕ್ಕೆ ಸೇರಿದ ಸಾಕಷ್ಟು ಅಭ್ಯರ್ಥಿಗಳನ್ನು ಅದೇ ಅನುಪಾತದಲ್ಲಿ ಪೂರ್ವಭಾವಿ ಪರೀಕ್ಷೆಯಲ್ಲಿ ಅವರುಗಳಿಸಿದ ಅಂಕಗಳ ಆಧಾರದ ಮೇಲೆ ಮುಖ್ಯ ಪರೀಕ್ಷೆಗೆ ಪ್ರವೇಶ ನೀಡಲಾಗುತ್ತದೆ.












Click it and Unblock the Notifications