ಕೆಪಿಎಸ್‌ಸಿ ನೇಮಕಾತಿ, ಅರ್ಜಿ ಸಲ್ಲಿಕೆಗೆ ಮೇ 5 ಕೊನೆ ದಿನ

Posted By:
Subscribe to Oneindia Kannada

ಬೆಂಗಳೂರು, ಏಪ್ರಿಲ್ 11 : ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 'ಗ್ರೂಪ್ ಸಿ' ವೃಂದದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. 806 ಹುದ್ದೆಗಳಿದ್ದು, ಅರ್ಜಿ ಸಲ್ಲಿಸಲು ಮೇ 5, 2016 ಕೊನೆಯ ದಿನವಾಗಿದೆ.

ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ ಸಹಾಯಕ ಸಾಂಖ್ಯಿಕ ಅಧಿಕಾರಿ, ಕೃಷಿ ಮಾರಾಟ ಇಲಾಖೆಯಲ್ಲಿ ಕಿರಿಯ ಅಭಿಯಂತರ, ಕೈಗಾರಿಕಾ ಇಲಾಖೆಯಲ್ಲಿ ವಿಸ್ತರಣಾಧಿಕಾರಿ, ನಗರಸಭೆ ಹಾಗೂ ಮಹಾನಗರಪಾಲಿಕೆಯಲ್ಲಿ ಕಿರಿಯ ಅಭಿಯಂತರ ಹಾಗೂ ಕಿರಿಯ ಆರೋಗ್ಯ ನಿರೀಕ್ಷಕ ಹುದ್ದೆ ಸೇರಿ ಒಟ್ಟು 12 ಇಲಾಖೆಗಳಲ್ಲಿ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. [ಕರವೇಯಿಂದ ಉದ್ಯೋಗ ಮಾರ್ಗದರ್ಶನ ಶಿಬಿರ]

kpsc

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ ಕೈಗಾರಿಕಾ ವಿಸ್ತರಣಾಧಿಕಾರಿ ಮತ್ತು ಆರ್ಥಿಕ ಮತ್ತು ಸಾಂಖ್ಯಿಕ ಇಲಾಖೆಯ ಸಹಾಯಕ ಸಾಂಖ್ಯಿಕ ಅಧಿಕಾರಿಗಳ ಹುದ್ದೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಸಿದವರು ಮತ್ತೆ ಅರ್ಜಿ ಸಲ್ಲಿಸಬೇಕು. ಆದರೆ, ಪರೀಕ್ಷಾ ಶುಲ್ಕ ಪಾವತಿಸುವಂತಿಲ್ಲ. ಅರ್ಜಿಯಲ್ಲಿ ಹಿಂದೆ ಸಲ್ಲಿಸಿದ ಅರ್ಜಿಯ ಐಡಿಯನ್ನು ಕಡ್ಡಾಯವಾಗಿ ನಮೂದಿಸಬೇಕು. [72 ವಲಯ ಅರಣ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ]

ಹುದ್ದೆಗಳ ವಿವರ : ಸಹಾಯಕ ಸಾಂಖ್ಯಿಕ ಅಧಿಕಾರಿ 58, ಕೃಷಿ ಮಾರಾಟ ಇಲಾಖೆಯಲ್ಲಿ ಕಿರಿಯ ಅಭಿಯಂತರ (ಸಿವಿಲ್) 2, ಕೈಗಾರಿಕಾ ಇಲಾಖೆ ವಿಸ್ತರಣಾಧಿಕಾರಿ 33, ಕೈಮಗ್ಗ ಇಲಾಖೆಯಲ್ಲಿ ತನಿಖಾಧಿಕಾರಿ 8, ಗೃಹ ಮಂಡಳಿ ಕಿರಿಯ ಅಭಿಯಂತರ 8, ಪೌರಾಡಳಿತ ನಿರ್ದೇಶನಾಲಯದಲ್ಲಿ ಕಿರಿಯ ಅಭಿಯಂತರ, ಸಿವಿಲ್ 125, ಎಲೆಕ್ಟ್ರಿಕಲ್ 30, ಕಾಮಗಾರಿ ನಿರೀಕ್ಷಕ 211, ಎಲೆಕ್ರಿಯೇಷನ್ 29, ಮಹಾನಗರಪಾಲಿಕೆ ಕಿರಿಯ ಆರೋಗ್ಯ ನಿರೀಕ್ಷಕ 139, ನಗರಸಭೆ-ಪುರಸಭೆ-ಕಿರಿಯ ಆರೋಗ್ಯ ನಿರೀಕ್ಷಕ 129 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. [ಜೆಸ್ಕಾಂ ನೇಮಕಾತಿ ಅಧಿಸೂಚನೆ ವಿವರಗಳು]

ವಯೋಮಿತಿ : ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು. ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ -1ರ ಅಭ್ಯರ್ಥಿಗಳಿಗೆ 40 ವರ್ಷಗಳು. [ನೇಮಕಾತಿ ಆದೇಶ ಓದಿ]

ಒಟ್ಟು 806 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೇ 5 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಪರೀಕ್ಷಾ ಶುಲ್ಕವನ್ನು ಮೇ 6ರೊಳಗೆ ಅಂಚೆ ಕಚೇರಿಯಲ್ಲಿ ಪಾವತಿ ಮಾಡಬೇಕು. ಹುದ್ದೆಗಳ ವಿವರ, ವಯೋಮಿತಿ, ಮೀಸಲಾತಿ ಹೆಚ್ಚಿನ ವಿವರಗಳಿಗೆ www.kpsc.com ವೆಬ್ ಸೈಟ್‌ಗೆ ಭೇಟಿ ನೀಡಬಹುದಾಗಿದೆ.

ಇಂಗ್ಲಿಶ್ ನಲ್ಲಿ ಓದಿ

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
The Karnataka Public Service Commission (KPSC) has invited online applications for 806 group C Technical posts. May 5, 2016 last date for submit application.
Please Wait while comments are loading...