KPSC: ಕೃಷಿ ಇಲಾಖೆ ನೇಮಕಾತಿ, ಅರ್ಜಿ ಸಲ್ಲಿಕೆ ಬಗ್ಗೆ ಮಹತ್ವದ ಅಪ್‌ಡೇಟ್‌

ಬೆಂಗಳೂರು, ಫೆಬ್ರವರಿ 06: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ನೇಮಕಾತಿ ಕುರಿತು ಅಪ್‌ಡೇಡ್ ನೀಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡುವಾಗ ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನಲೆಯಲ್ಲಿ ಅರ್ಜಿ ಸಲ್ಲಿಕೆ ಮಾಡುವ ಅವಧಿ ವಿಸ್ತರಣೆ ಮಾಡುವಂತೆ ಅಭ್ಯರ್ಥಿಗಳು ಕೋರಿದ್ದರು.

ಈಗ ಈ ಕುರಿತು ರಮಣದೀಪ್ ಚೌಧರಿ, ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಅರ್ಜಿ ಸಲ್ಲಿಕೆ ಮಾಡುವ ಕಾಲಾವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಉಳಿದಂತೆ ಅಧಿಸೂಚನೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

KPSC Agriculture Department Recruitment Application Submission Date Extended

ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ: ಪ್ರಕಟಣೆಯಲ್ಲಿ ಕೆಪಿಎಸ್‌ಸಿ ಆಯೋಗವು ದಿನಾಂಕ 20-0-2024ರ ಅಧಿಸೂಚನೆಯಲ್ಲಿ ಕೃಷಿ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಕೃಷಿ ಅಧಿಕಾರಿ 86 ಮತ್ತು ಸಹಾಯಕ ಕೃಷಿ ಅಧಿಕಾರಿ 586 ಹುದ್ದೆಗಳಿಗೆ ಅಧಿಸೂಚನೆ ಜಾರಿ ಮಾಡಿ ಅರ್ಜಿ ಸಲ್ಲಿಕೆಯ ದಿನಾಂಕವನ್ನು 03-01-2025 ರಿಂದ 01-02-2025 ರವರೆಗೆ ನಿಗದಿಪಡಿಸಲಾಗಿತ್ತು.

ಆದರೆ ಕೆಲವು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಯಾಗುತ್ತಿದ್ದು ಅರ್ಜಿ ಸಲ್ಲಿಸಲುವ ಕಾಲಾವಧಿಯನ್ನು ವಿಸ್ತರಿಸುವಂತೆ ಕೋರಿರುತ್ತಾರೆ, ಆದ್ದರಿಂದ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಕೆಯ ಪ್ರಾರಂಭಿಕ ದಿನಾಂಕ ಮತ್ತು ಕೊನೆಯ ದಿನಾಂಕಗಳನ್ನು 05-02-2025 ರಿಂದ 15-02-2025ರವರೆಗೆ ವಿಸ್ತರಿಸಿದೆ ಎಂದು ಹೇಳಿದ್ದಾರೆ.

ಮುಂದುವರೆದು, ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ, ಅರ್ಜಿ ಶುಲ್ಕ ಇತ್ಯಾದಿ ವಿವರಗಳಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ, ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ದಿನಾಂಕ 20-09-2024ರ ಅಧಿಸೂಚನೆಯನ್ನು ನೋಡಬಹುದಾಗಿದೆ ಎಂದು ತಿಳಿಸಲಾಗಿದೆ.

* ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ಆ ನಂತರವೇ ತಮಗೆ ಅನ್ವಯವಾಗುವ ವಿವರಗಳನ್ನು ಭರ್ತಿ ಮಾಡತಕ್ಕದು. ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಅರ್ಜಿಯಲ್ಲಿ ವಿವರಗಳನ್ನು ತಿದ್ದುಪಡಿ/ ಸೇರ್ಪಡೆ ಮಾಡುವಂತೆ ನೀಡುವ ಮನವಿಗಳನ್ನು ತಿರಸ್ಕರಿಸಲಾಗುತ್ತದೆ.

* ಅಭ್ಯರ್ಥಿಗಳು ವಯೋಮಿತಿ, ವಿದ್ಯಾರ್ಹತೆಗೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಹಾಗೂ ಅರ್ಜಿಯಲ್ಲಿ ಕೋರಿರುವ ಎಲ್ಲಾ ಮೀಸಲಾತಿ ಪ್ರಮಾಣ ಪತ್ರ/ ಇತರೆ ಪ್ರಮಾಣ ಪತ್ರಗಳನ್ನು ತಮ್ಮ ಹೆಸರಿನಲ್ಲಿಯೇ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವಂತೆ ಸೂಚಿಸಿರುವ ನಮೂನೆಗಳಲ್ಲಿಯೇ ಕಡ್ಡಾಯವಾಗಿ ಪಡೆದಿಟ್ಟುಕೊಂಡು ಸದರಿ ದಾಖಲೆಗಳನ್ನು ಅರ್ಜಿ ಸಲ್ಲಿಸುವಾಗ ಅಪ್‌ಲೋಡ್ ಮಾಡತಕ್ಕದ್ದು.

* ಅರ್ಜಿ ಸಲ್ಲಿಸುವ ಸಮಯದಲ್ಲಿ ಮೀಸಲಾತಿಯನ್ನು ಕೋರದೆ ತದನಂತರದಲ್ಲಿ, ಮೀಸಲಾತಿಯನ್ನು ಪರಿಗಣಿಸುವಂತೆ ಕೋರಿ ಸಲ್ಲಿಸುವ ಮನವಿ/ ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿಗಳನ್ನು Online ಮೂಲಕವೇ ಭರ್ತಿ ಮಾಡಿ, ಭಾವಚಿತ್ರ/ ಸಹಿ/ ವಯೋಮಿತಿ/ ವಿದ್ಯಾರ್ಹತೆ ಹಾಗೂ ಕೋರಿದ ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಅಪ್‌ಲೋಡ್‌ ಮಾಡಬೇಕು. ನಂತರ ಶುಲ್ಕವನ್ನು ಪಾವತಿಸಬೇಕು.

* ಅರ್ಜಿ ಸಲ್ಲಿಕೆ ಮಾಡಲು ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ ಸಾಮಾನ್ಯ ಅರ್ಹತೆ 38 ವರ್ಷಗಳು, ಪ್ರವರ್ಗ 2ಎ/ 2ಬಿ/ 3ಎ/ 3ಬಿ 41 ವರ್ಷಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ 43 ವರ್ಷಗಳು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+