ಕೆಪಿಎಸ್‌ಸಿ; ಎಸ್‌ಡಿಎ ಪರೀಕ್ಷೆಯ ದಿನಾಂಕ ಪ್ರಕಟ

ಬೆಂಗಳೂರು, ಜೂನ್ 30; ಕರ್ನಾಟಕ ಲೋಕಸೇವಾ ಆಯೋಗ ಕೋವಿಡ್ ಕಾರಣಕ್ಕಾಗಿ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಮುಂದೂಡಿತ್ತು.

ಬುಧವಾರ ಕೆಪಿಎಸ್‌ಸಿ ಸ್ಮರ್ಧಾತ್ಮಕ ಪರೀಕ್ಷೆಗಳ ದಿನಾಂಕವನ್ನು ಪ್ರಕಟಿಸಿದೆ. ಸೆಪ್ಟೆಂಬರ್ 18 ಮತ್ತು 19ರಂದು ಎಸ್‌ಡಿಎ ನೇಮಕಾತಿ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಹೇಳಿದೆ.

ಪರಿಷ್ಕೃತ ವೇಳಾಪಟ್ಟಿಯಂತೆ ಸೆಪ್ಟೆಂಬರ್ 18ರಂದು ಬೆಳಗ್ಗೆ 10 ರಿಂದ 11ರ ತನಕ ಪ್ರತಿಕೆ-1 ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ.

KPSC Announced Date For SDA Exam

ಸೆಪ್ಟೆಂಬರ್ 19ರಂದು ಬೆಳಗ್ಗೆ 10 ರಿಂದ 11.30ರ ತನಕ ಪತ್ರಿಕೆ-3 ಸಾಮಾನ್ಯ ಜ್ಞಾನ, ಮಧ್ಯಾಹ್ನ 2 ರಿಂದ 3.30ರ ವರೆಗೆ ಪತ್ರಿಕೆ-2 ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಶ್ ಪರೀಕ್ಷೆ ನಡೆಯಲಿದೆ.

ರಾಜ್ಯದ ವಿವಿಧ ಇಲಾಖೆಯಗಳಲ್ಲಿನ ಉಳಿಕೆ ಮೂಲ ವೃಂದದ ಹಾಗೂ ಹೈದರಾಬಾದ್-ಕರ್ನಾಟಕ ವೃಂದದ ಕಿರಿಯ ಸಹಾಯಕರ, ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗಾಗಿ ಫೆಬ್ರವರಿ 29ರಂದು ಕೆಪಿಎಸ್‌ಸಿ ಅಧಿಸೂಚನೆ ಹೊರಡಿಸಿತ್ತು.

ಕೋವಿಡ್ ಕಾರಣಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿರಲಿಲ್ಲ. ಈಗ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾದ ಹಿನ್ನಲೆಯಲ್ಲಿ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+