ಕೆಪಿಎಸ್ ಸಿ ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ
ಬೆಂಗಳೂರು. ಸೆಪ್ಟೆಂಬರ್ 21: 428 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಫಲಿತಾಂಶವನ್ನು ಇಂದು (ಗುರುವಾರ) ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ ಸಿ) ಪ್ರಕಟಿಸಿದೆ.
ಗೆಜೆಟೆಡ್ ಪ್ರೊಬೇಷನರಿಯ 428 ಹುದ್ದೆಗಳಿಗೆ 2015ರಲ್ಲಿ ಕೆಪಿಎಸ್ ಸಿ ಅರ್ಜಿ ಆಹ್ವಾನಿಸಿತ್ತು. ಇದೇ ಹುದ್ದೆಗಳಿಗೆ 20-08-2017ರಂದು ಕೆಪಿಎಸ್ ಸಿ ಪೂರ್ವಭಾವಿ ಪರೀಕ್ಷೆ ನಡೆಸಿತ್ತು. ಇದೀಗ ಇದರ ಫಲಿತಾಂಶವನ್ನು ಕೆಪಿಎಸ್ ಸಿ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಈ ಪಟ್ಟಿಯಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಯನ್ನು ಬರೆಯಲು ಅರ್ಹತೆ ಪಡೆದುಕೊಂಡಿರುತ್ತಾರೆ. ಬುಧವಾರ ಫಲಿತಾಂಶ ಪ್ರಕಟಿಸಬೇಕಿತ್ತು.
ಆದರೆ ಕೊನೆಯ ಕ್ಷಣದಲ್ಲಿ ಮಾದರಿ ಉತ್ತರದ ಬಗ್ಗೆ ಗಂಭೀರ ಆಕ್ಷೇಪ ಬಂದ ಹಿನ್ನೆಲೆಯಲ್ಲಿ ಇಂದು ಪ್ರಕಟಿಸಲಾಗಿದೆ ಎಂದು ಕೆಪಿಎಸ್ ಸಿ ತಿಳಿಸಿದೆ.
ಗೆಜೆಟೆಡ್ ಪ್ರೊಬೇಷನರಿಯ 428 ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಫಲಿತಾಂಶವನ್ನು ನೋಡಲು ಇಲ್ಲಿ ಕ್ಲಿಕ್ಕಿಸಿ.
ಕೆಪಿಎಸ್ ಸಿ ವೆಬ್ ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ಕಿಸಿ.












Click it and Unblock the Notifications