ಕೆಪಿಎಸ್‌ಸಿ : ಅರಣ್ಯ ಸಂರಕ್ಷಣಾಧಿಕಾರಿ ನೇಮಕಾತಿ ವಿವರ

ಬೆಂಗಳೂರು, ಜೂನ್ 13 : ಕರ್ನಾಟಕ ಅರಣ್ಯ ಇಲಾಖೆ ಸೇವೆಗಳು (ನೇಮಕಾತಿ) (ತಿದ್ದುಪಡಿ) ನಿಯಮಗಳು 2012ರ ಅನ್ವಯ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿನ ಖಾಲಿ ಇರುವ ಗ್ರೂಪ್ - 'ಎ' ವೃಂದದ 25 ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ಭರ್ತಿಯ ಪರೀಕ್ಷೆಗೆ ಕೆಪಿಎಸ್‌ಸಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜುಲೈ 8, 2016 ಕೊನೆಯ ದಿನ.

http://kpsc.kar.nic.in/ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ. ಅರ್ಜಿ ಭರ್ತಿ ಮಾಡುವ ಸಮಯದಲ್ಲಿ ತಾಂತ್ರಿಕ ತೊಂದರೆ ಉಂಟಾದರೆ 9538791579/7337812816 ನಂಬರ್‌ಗೆ ಕರೆ ಮಾಡಬಹುದಾಗಿದೆ. [ಉಡುಪಿ ಕಂದಾಯ ಇಲಾಖೆಯಲ್ಲಿ ಕೆಲಸ ಖಾಲಿ ಇದೆ]

kpsc

ವಯೋಮಿತಿ : ಅರ್ಜಿಯನ್ನು ಆನ್‌ಲೈನ್‌ನಲ್ಲಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು 18 ವರ್ಷ ಪೂರೈಸಿರತಕ್ಕದ್ದು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗದವರಿಗೆ 30 ವರ್ಷ, ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 33 ವರ್ಷ. ಪ.ಜಾ/ಪ.ಪಂ/ಪ್ರವರ್ಗ -1ರ ಅಭ್ಯರ್ಥಿಗಳಿಗೆ 35 ವರ್ಷ. [ಉತ್ತರ ಕರ್ನಾಟಕದ ಉದ್ಯೋಗ ಮೇಳಕ್ಕೆ ನೋಂದಣಿ ಮಾಡಿಸಿ]

ಅರ್ಜಿ ಶುಲ್ಕ : ಸಾಮಾನ್ಯ ಅರ್ಹತೆ, ಪ್ರವರ್ಗ 2 (ಎ), 2 (ಬಿ), 3 (ಎ), 3 (ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ 300 ರೂ., ಪ.ಜಾ/ಪ.ಪಂ/ಪ್ರವರ್ಗ - 1/ಮಾಜಿ ಸೈನಿಕ ಅಭ್ಯರ್ಥಿಗಳಿಗೆ 25 ರೂ. ಅರ್ಜಿ ಸಲ್ಲಿಸಿದ ಬಳಿಕ ಲಭ್ಯವಾಗುವ ಚಲನ್ ಡೌಲ್‌ಲೋಡ್ ಮಾಡಿಕೊಂಡು ಇ-ಪಾವತಿ ಅಂಚೆ ಕಚೇರಿಗಳಲ್ಲಿ ಶುಲ್ಕವನ್ನು ಪಾವತಿ ಮಾಡಬೇಕು.

ಅರ್ಜಿಯ ಪ್ರತಿಯನ್ನು ಮತ್ತು ಶುಲ್ಕ ಸಂದಾಯ ಮಾಡಿದ ಚಲನ್ ವಿವರಗಳನ್ನು ಅಭ್ಯರ್ಥಿಗಳು ತಮ್ಮೊಂದಿಗೆ ಇಟ್ಟುಕೊಳ್ಳಬೇಕು. ಅಯೋಗವು ಅಪೇಕ್ಷಿಸಿದಾಗ ವಿವರಗಳನ್ನು ಹಾಜರುಪಡಿಸಬೇಕು. [ನೇಮಕಾತಿ ಆದೇಶ ಓದಿ]

ವಿದ್ಯಾರ್ಹತೆ

jobs

ಪರೀಕ್ಷಾ ಕೇಂದ್ರಗಳು : ಬೆಂಗಳೂರು, ಕಲಬುರ್ಗಿ, ಶಿವಮೊಗ್ಗ, ಧಾರವಾಡ, ಮೈಸೂರು, ಬೆಳಗಾವಿ.

ವೇತನ ಶ್ರೇಣಿ : 28,100 ರಿಂದ 50,000

ಇಂಗ್ಲಿಶ್ ನಲ್ಲಿ ಓದಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+