KPSC Recruitment; 30 ಹುದ್ದೆಗಳಿಗೆ ಜುಲೈ 25ರಿಂದ ಅರ್ಜಿ ಹಾಕಿ
ಬೆಂಗಳೂರು, ಜುಲೈ 20; ಕರ್ನಾಟಕ ಲೋಕಸೇವಾ ಆಯೋಗ (KPSC) ಸಹಾಯಕ ವಿದ್ಯುತ್ ಪರಿವೀಕ್ಷರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 23/8/2022 ಕೊನೆಯ ದಿನವಾಗಿದೆ.
ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರ ಅನ್ವಯ ಉಳಿಕೆ ಮೂಲ ವೃಂದದಲ್ಲಿನ ಗ್ರೂಪ್ 'ಬಿ' ವೃಂದದ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.
ಮುಖ್ಯ ವಿದ್ಯುತ್ ಪರಿವೀಕ್ಷಣಾಲಯದಲ್ಲಿ ಸಹಾಯಕ ವಿದ್ಯುತ್ ಪರಿವೀಕ್ಷಕರು (Assistant Electrical Inspector) 30 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ, ಅರ್ಹರು ಆನ್‌ಲೈನ್ ಮೂಲಕ ಜುಲೈ 25ರಿಂದ ಅರ್ಜಿ ಸಲ್ಲಿಕೆ ಮಾಡಬೇಕು. ಶುಲ್ಕ ಪಾವತಿಗೆ 24/8/2022 ಕೊನೆಯ ದಿನವಾಗಿದೆ.
ಅಭ್ಯರ್ಥಿಗಳು ಅಧಿಸೂಚನೆಯನ್ನು ವಿವರವಾಗಿ ಓದಿಕೊಂಡು ತಮಗೆ ಅನ್ವಯವಾಗುವ ವಿವರಗಳನ್ನು ಭರ್ತಿ ಮಾಡಬೇಕು. ಒಮ್ಮೆ ಅರ್ಜಿ ಸಲ್ಲಿಸಿದ ಮೇಲೆ ವಿವರಗಳ ತಿದ್ದುಪಡಿ/ ಸೇರ್ಪಡೆ ಮಾಡುವ ಮನವಿ ಪುರಸ್ಕರಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಸ್ಮರ್ಧಾತ್ಮಕ ಪರೀಕ್ಷೆಗಳ ಮೂಲಕ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಕನ್ನಡ ಭಾಷಾ ಪರೀಕ್ಷೆ/ ಸ್ಮರ್ಧಾತ್ಮಕ ಪರೀಕ್ಷೆಗಳನ್ನು ಆಯೋಗವು ನಿಗದಿಪಡಿಸುವ ಕೇಂದ್ರ ಸ್ಥಳದಲ್ಲಿ ನಡೆಸಲಾಗುತ್ತದೆ. ಕನ್ನಡ ಭಾಷೆಯಲ್ಲಿರುವ ಭಾಷಾಂತರದಲ್ಲಿ ಏನಾದರೂ ಅಸ್ಪಷ್ಟತೆ ಇದ್ದಲ್ಲಿ ಅಭ್ಯರ್ಥಿಗಳು ಆಂಗ್ಲ ಭಾಷೆಯಲ್ಲಿರುವ ಪ್ರಶ್ನೆಗಳನ್ನು ನೋಡಿ ಅರ್ಥೈಸಿಕೊಳ್ಳಬೇಕು.

ಮೂರು ಹಂತಗಳಲ್ಲಿ ಅರ್ಜಿ ಸಲ್ಲಿಸಬೇಕು
ಅರ್ಜಿಗಳನ್ನು ಆನ್‌ಲೈನ್ ಮೂಲಕ ಜುಲೈ 25ರಿಂದ 23/8/2022ರ ತನಕ ಸಲ್ಲಿಕೆ ಮಾಡಬೇಕು. ಶುಲ್ಕ ಪಾವತಿಗೆ 24/8/2022 ಕೊನೆಯ ದಿನವಾಗಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು ಮೂರು ಹಂತಗಳಿವೆ.
ಪ್ರೊಪೈಲ್ ಕ್ರಿಯೇಷನ್/ ಅಪ್ ಡೇಷನ್ ಮೊದಲ ಹಂತವಾಗಿದೆ. ಎರಡನೇ ಹಂತ ಅಪ್ಲಿಕೇಷನ್ ಸಬ್‌ಮಿಷನ್. ಮೂರನೇ ಹಂತದಲ್ಲಿ ಫೀ ಪೇಮೆಂಟ್ ಥ್ರೋ ಮೈ ಅಪ್ಲಿಕೇಷನ್ ಸೆಕ್ಷನ್ ಇದೆ.

ವಯೋಮಿತಿ, ವಿದ್ಯಾರ್ಹತೆ ವಿವರಗಳು
ಅರ್ಜಿಗಳನ್ನು ಸಲ್ಲಿಕೆ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅನುಸೂಚಿಯಲ್ಲಿ ನಮೂದಿಸಿರುವ ವಿದ್ಯಾರ್ಹತೆಯನ್ನು ಹೊಂದಿರಲೇಬೇಕು. ನಿಗದಿತ ವಿದ್ಯಾರ್ಹತೆಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಸಹ ಪರಿಗಣಿಸಲಾಗುವುದಿಲ್ಲ ಎಂದು ನೇಮಕಾತಿ ಅಧಿಸೂಚನೆ ತಿಳಿಸಿದೆ.
ಅರ್ಜಿಗಳನ್ನು ಸಲ್ಲಿಕೆ ಮಾಡಲು ಕನಿಷ್ಠ ವಯೋಮಿತಿ 18 ವರ್ಷಗಳು, ಗರಿಷ್ಠ ವಯೋಮಿತಿ 35 ವರ್ಷಗಳು.
ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ಮತ್ತು ತಿದ್ದುಪಡಿ ನಿಯಮಗಳ ಪ್ರಕಾರ ಸ್ಮರ್ಧಾತ್ಮಕ ಪರೀಕ್ಷೆಯಲ್ಲಿಗಳಿಸಿದ ಅಂಕಗಳ ಶೇಕಡಾವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳ ಅನ್ವಯ ನೇಮಕಾತಿ ನಡೆಯಲಿದೆ.

ಮೀಸಲಾತಿಯ ವಿವರ, ವೇತನ
Assistant Electrical Inspector (ಸಹಾಯಕ ವಿದ್ಯುತ್ ಪರಿವೀಕ್ಷಕರು) 30 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಇವುಗಳಲ್ಲಿ ಪರಿಶಿಷ್ಟ ಜಾತಿ 7, ಪರಿಶಿಷ್ಟ ಪಂಗಡ 1, ಪ್ರವರ್ಗ -1 02, ಪ್ರವರ್ಗ 2ಎ 5, ಪ್ರವರ್ಗ 3ಎ 2, ಪ್ರವರ್ಗ 3ಬಿ 5, ಸಾಮಾನ್ಯ ಅಭ್ಯರ್ಥಿ 8 ಹುದ್ದೆಗಳ ಮೀಸಲಾತಿ ಪ್ರಕಟಿಸಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ 43,100-83,900 ರೂ. ತನಕ ವೇತನ ನಿಗದಿ ಮಾಡಲಾಗಿದೆ. ಹುದ್ದೆಯ ಕುರಿತ ಅಧಿಸೂಚನೆ, ಅರ್ಜಿ ಸಲ್ಲಿಕೆ ಮಾಡಲು ವಿಳಾಸ https://kpsc.kar.nic.in/index.html

ಅರ್ಜಿ ಶುಲ್ಕಗಳ ವಿವರಗಳು
ಅರ್ಜಿಗಳನ್ನು ಸಲ್ಲಿಕೆ ಮಾಡುವ ಸಾಮಾನ್ಯ ಅಭ್ಯರ್ಥಿಗಳು 600 ರೂ., ಪ್ರವರ್ಗ 2(ಎ), 2 (ಬಿ), 3 (ಎ), 3 (ಬಿ) ಅಭ್ಯರ್ಥಿಗಳು 300 ರೂ., ಮಾಜಿ ಸೈನಿಕರಿಗೆ 50 ರೂ. ಶುಲ್ಕ ನಿಗದಿಮಾಡಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳು ಶುಲ್ಕ ಪಾವತಿಸಬೇಕಿಲ್ಲ. ಆದರೆ 35 ರೂ. ಪ್ರಕ್ರಿಯೆ ಶುಲ್ಕವನ್ನು ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ಪಾವತಿ ಮಾಡಬೇಕಿದೆ.
ಅಭ್ಯರ್ಥಿಗಳು ಒಮ್ಮೆ ಪಾವತಿ ಮಾಡಿದ ಶುಲ್ಕವನ್ನು ಯಾವುದೇ ಕಾರಣಕ್ಕೂ ವಾಪಸ್ ನೀಡಲಾಗುವುದಿಲ್ಲ. ಅದನ್ನು ಆಯೋಗವು ನಡೆಸುವ ಇತರ ಪರೀಕ್ಷೆ ಅಥವ ನೇಮಕಾತಿಗೆ ಹೊಂದಿಸಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಅರ್ಜಿ ಶುಲ್ಕ ಪಾವತಿ ಮಾಡದಿದ್ದರೆ ಅರ್ಜಿ ತಿರಸ್ಕಾರವಾಗಲಿದೆ.

ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ
ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರ ನಿಯಮ ಉಪನಿಯಮ 7ರಲ್ಲಿ ನಿರ್ದಿಷ್ಟ ಪಡಿಸಿದಂತೆ ಅಭ್ಯರ್ಥಿ ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆ ಪಡೆಯದ ಹೊರತು ಆಯ್ಕೆಗೆ ಅರ್ಹರಲ್ಲ. ಈ ಪರೀಕ್ಷೆಯು ಗರಿಷ್ಠ 150 ಅಂಕಗಳ ಒಂದು ಪತ್ರಿಕೆಯನ್ನು ಒಳಗೊಂಡಿದೆ. ಅಭ್ಯರ್ಥಿ ಈ ಪತ್ರಿಕೆಯಲ್ಲಿ ಅರ್ಹತೆ ಹೊಂದಲು ಕನಿಷ್ಠ 50 ಅಂಕಗಳನ್ನುಗಳಿಸಬೇಕು. ಎಸ್‌ಎಸ್‌ಎಲ್‌ಸಿ ಹಂತದಲ್ಲಿನ ಪ್ರಥಮ ಭಾಷೆ ಕನ್ನಡವನ್ನು ಮಾನದಂಡವನ್ನಾಗಿ ಇಟ್ಟುಕೊಂಡು ಪತ್ರಿಕೆ ರಚನೆ ಮಾಡಲಾಗುತ್ತದೆ.











Click it and Unblock the Notifications