ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಎಸ್‌ಸಿ ಅಧಿಸೂಚನೆ; ಅರಣ್ಯ ಇಲಾಖೆ ನೇಮಕಾತಿಗೆ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 16 : ಕರ್ನಾಟಕ ಲೋಕಸೇವಾ ಆಯೋಗ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 20/11/2020ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಒಟ್ಟು 16 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟವಾಗಿದ್ದು, ಅಕ್ಟೋಬರ್ 20ರಿಂದ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಆರೋಗ್ಯ ಇಲಾಖೆ; ತಾತ್ಕಾಲಿಕವಾಗಿ ನೇಮಕಾತಿ ಆದವರಿಗೆ ಸಿಹಿ ಸುದ್ದಿ ಆರೋಗ್ಯ ಇಲಾಖೆ; ತಾತ್ಕಾಲಿಕವಾಗಿ ನೇಮಕಾತಿ ಆದವರಿಗೆ ಸಿಹಿ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳನ್ನು ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮ 1977ರ ನಿಯಮ 19ರನ್ವಯ 3 ವರ್ಷದ ಪರೀಕ್ಷಾರ್ಥ ಅವಧಿ ಮೇಲೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ನೇಮಿಸಿಕೊಂಡು ಎರಡು ವರ್ಷದ ಡಿಪ್ಲೋಮಾ ಇನ್ ಫಾರೆಸ್ಟ್ರಿ ತರಬೇತಿಗೆ ನಿಯೋಜಿಸಲಾಗುತ್ತದೆ.

ಅರ್ಮಿ ಪಬ್ಲಿಕ್ ಸ್ಕೂಲ್ ನೇಮಕಾತಿ: 8000 ಶಿಕ್ಷಕ ಹುದ್ದೆಗಳಿವೆ ಅರ್ಮಿ ಪಬ್ಲಿಕ್ ಸ್ಕೂಲ್ ನೇಮಕಾತಿ: 8000 ಶಿಕ್ಷಕ ಹುದ್ದೆಗಳಿವೆ

ಅಭ್ಯರ್ಥಿಗಳು ತರಬೇತಿಯನ್ನು ಯಶಸ್ವಿಯಾಗಿ ಮುಗಿಸಿದ ನಂತರ ಒಂದು ವರ್ಷ ಕಾರ್ಯ ತರಬೇತಿಗೆ ನೇಮಿಸಲಾಗುತ್ತದೆ. ಉಳಿದಂತೆ ಕಾಲ ಕಾಲಕ್ಕೆ ತಿದ್ದುಪಡಿಯಾದ ಕರ್ನಾಟಕ ನಾಗರೀಕ ಸೇವೆಗಳು ಸಾಮಾನ್ಯ ನೇಮಕಾತಿ ನಿಯಮಗಳು 1977ರಂತೆ ಇರುತ್ತದೆ. (ಹೆಚ್ಚಿನ ಮಾಹಿತಿಗಾಗಿ ಕೆಪಿಎಸ್‌ಸಿ ವೆಬ್ ಸೈಟ್‌ ಗೆ ಭೇಟಿ ನೀಡಿ)

SSC ನೇಮಕಾತಿ 2020: ವಿವಿಧ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ SSC ನೇಮಕಾತಿ 2020: ವಿವಿಧ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಒಟ್ಟು 16 ಹುದ್ದೆಗಳು

ಒಟ್ಟು 16 ಹುದ್ದೆಗಳು

ಬಿ. ಎಸ್ಸಿ (ಅರಣ್ಯ ಶಾಸ್ತ್ರ) ಪದವೀಧರರಿಗೆ 8, ಬಿ. ಎಸ್ಸಿ (ಅರಣ್ಯ ಶಾಸ್ತ್ರ) ಪದವಿ ಹೊರತುಪಡಿಸಿ ಇತರೆ ವಿಜ್ಞಾನ/ಇಂಜಿನಿಯರಿಂಗ್ ಪದವೀಧರರಿಗೆ 8 ಸೇರಿ 16 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಸ್ಮರ್ಧಾತ್ಮಕ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅಭ್ಯರ್ಥಿಗಳ ವಿದ್ಯಾರ್ಹತೆ

ಅಭ್ಯರ್ಥಿಗಳ ವಿದ್ಯಾರ್ಹತೆ

ಅರಣ್ಯ ಶಾಸ್ತ್ರ ಪದವೀಧರರಿಗಾಗಿ ಮೀಸಲಿರಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಫಾರೆಸ್ಟ್ರಿ ವಿಷಯದ ಪದವಿಯಲ್ಲಿ ಶೇ. 50 ಕ್ಕಿಂತ ಕಡಿಮೆ ಇಲ್ಲದ ಅಂಕ ಪಡೆದು ತೇರ್ಗಡೆ ಆಗಿರಬೇಕು.

ಅರಣ್ಯ ಶಾಸ್ತ್ರ ಪದವೀಧರರಿಗಾಗಿ ಮೀಸಲಾಗಿಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದ ಕೃಷಿ ಅಥವಾ ತೋಟಗಾರಿಕೆ ಅಥವಾ ಪಶು ವೈದ್ಯ ವಿಜ್ಞಾನ ಪದವಿ ಅಥವಾ ಗಣಿತಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ, ಪ್ರಾಣಿಶಾಸ್ತ್ರ, ಸಸ್ಯಶಾಸ್ತ್ರ, ಬಯೋಕೆಮಿಸ್ಟ್ರಿ, ಮೈಕ್ರೋ-ಬಯೋಲಜಿ, ಬಯೋಟೆಕ್ನಾಲಜಿ ವಿಷಯಗಳಲ್ಲಿ 2 ಮತ್ತು ಅದಕ್ಕಿಂತ ಹೆಚ್ಚು ವಿಷಯಗಳೊಡನೆ ಪಡೆದ ವಿಜ್ಞಾನ ಪದವಿ ಪರೀಕ್ಷೆಯಲ್ಲಿ ಶೇ.50ಕ್ಕಿಂತ ಕಡಿಮೆ ಇಲ್ಲದ ಅಂಕ ಪಡೆದು ತೇರ್ಗಡೆ ಆಗಿರಬೇಕು. ಇಂಜಿನಿಯರಿಂಗ್‍ನ ಯಾವುದೇ ವಿಭಾಗದ ಪದವಿ ಪರೀಕ್ಷೆಯಲ್ಲಿ ಶೇ.50ಕ್ಕಿಂತ ಕಡಿಮೆ ಇಲ್ಲದ ಅಂಕ ಪಡೆದು ತೇರ್ಗಡೆಯಾಗಿರಬೇಕು.

ವಯೋಮಿತಿಯ ವಿವರಗಳು

ವಯೋಮಿತಿಯ ವಿವರಗಳು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ಪೂರೈಸಿರತಕ್ಕದ್ದು ಹಾಗೂ ಗರಿಷ್ಠ ವಯೋಮಿತಿ ಸಾಮಾನ್ಯ ಅರ್ಹತೆ 30 ವರ್ಷ, ಪ್ರವರ್ಗ- 2ಎ, 2ಬಿ, 3ಎ, 3ಬಿ 33 ವರ್ಷ ಮತ್ತು ಪ.ಜಾ/ಪ.ಪಂ/ಪ್ರ.-1 35 ವರ್ಷಗಳಾಗಿವೆ. ಅಭ್ಯರ್ಥಿಯು ಮಾಜಿ ಸೈನಿಕನಾಗಿದ್ದಲ್ಲಿ ಅವನು ಸಶಸ್ತ್ರ ಕೇಂದ್ರ ದಳದಲ್ಲಿ ಸಲ್ಲಿಸಿದ ಸೇವಾವಧಿ ಜೊತೆಗೆ 3 ವರ್ಷಗಳು.

ಪರೀಕ್ಷೆಗಳ ಮಾದರಿ

ಪರೀಕ್ಷೆಗಳ ಮಾದರಿ

ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು ಆಫ್ ಲೈನ್ ಓ. ಎಂ. ಆರ್ ಮಾದರಿ (Offline- OMR type) ಅಥವಾ ಗಣಕಯಂತ್ರದ ಮೂಲಕ ನೇಮಕಾತಿ ಪರೀಕ್ಷೆ (Computer based Recruitment Test-CBRT) ಮುಖಾಂತರ ನಡೆಸಲಾಗುವುದು.

ಗಣಕಯಂತ್ರದ ಮೂಲಕ ನೇಮಕಾತಿ ಪರೀಕ್ಷೆಯನ್ನು ನಡೆಸಲು ಆಯೋಗ ತೀರ್ಮಾನಿಸಿದಲ್ಲಿ ಅಭ್ಯರ್ಥಿಗಳಿಗೆ ಈ ಸಂಬಂಧ ಸೂಚನೆಗಳನ್ನು ಹಾಗೂ ಅಣಕು ಪರೀಕ್ಷೆಯನ್ನು ತೆಗೆದುಕೊಳ್ಳುವ ಬಗ್ಗೆ ಮಾಹಿತಿಯನ್ನು ಆಯೋಗದ ವೆಬ್ ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.

ಅಭ್ಯರ್ಥಿಗಳಿಗೆ ಶುಲ್ಕ

ಅಭ್ಯರ್ಥಿಗಳಿಗೆ ಶುಲ್ಕ

ಅರ್ಜಿಗಳನ್ನು ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600 ರೂ., ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ 300 ರೂ., ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ. ಶುಲ್ಕವನ್ನು ಪಾವತಿಸಿದ ನಂತರ ಅದನ್ನು ಯಾವುದೇ ಸಂದರ್ಭದಲ್ಲಿಯೂ ಹಿಂತಿರುಗಿಸಲಾಗುವುದಿಲ್ಲ. ಶುಲ್ಕ ಸಂದಾಯ ಮಾಡದಿದ್ದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕವಿಲ್ಲ.

English summary
KPSC issued notification for the assistant forest conservator recruitment 2020. Candidates can apply through online till November 20, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X