KPSC Recruitment: 384 ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆ ದಿನಾಂಕ ಬದಲು

ಬೆಂಗಳೂರು, ಆಗಸ್ಟ್ 06: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಒತ್ತಾಯಕ್ಕೆ ಮಣಿದಿದೆ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆ ವೇಳಾಪಟ್ಟಿಯನ್ನು ಬದಲಾವಣೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ಪರೀಕ್ಷೆಯ ದಿನಾಂಕವನ್ನು ಬದಲಾವಣೆ ಮಾಡಿ, ಹೊಸ ವೇಳಾಪಟ್ಟಿಯನ್ನು ಘೋಷಣೆ ಮಾಡಲಾಗಿದೆ.

ಈ ಕುರಿತು ಕೆಪಿಎಸ್‌ಸಿಯ ಕಾರ್ಯದರ್ಶಿ ಡಾ. ರಾಕೇಶ್ ಕುಮಾರ್ ಕೆ. ರಣದೀಪ್ ಡಿ. ಸರ್ಕಾರದ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಇವರಿಗೆ ಬರೆದಿರುವ ಪತ್ರದಲ್ಲಿ ಮಾಹಿತಿ ನೀಡಿದ್ದಾರೆ. 2ನೇ ಬಾರಿಗೆ ಪೂರ್ವಭಾವಿ ಪರೀಕ್ಷೆಯ ದಿನಾಂಕವನ್ನು ಬದಲಾವಣೆ ಮಾಡಲಾಗಿದೆ.

KPSC Change The 384 Gazetted Probationers Preliminary Exam Schedule

ಕೆಪಿಎಸ್‌ಸಿ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ 'ಎ' ಮತ್ತು 'ಬಿ' ವೃಂದದ ಒಟ್ಟು 384 ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಿತ್ತು. ಆಯೋಗದ ಸಭೆಯಲ್ಲಿ ಚರ್ಚಿಸಿ ದಿನಾಂಕ 25/08/2024ರಂದು ಪೂರ್ವಭಾವಿ ಪರೀಕ್ಷೆಯ ದಿನಾಂಕವನ್ನು ನಿಗದಿ ಮಾಡಲಾಗಿತ್ತು. ಆದರೆ ಈಗ 27/8/2024ರಂದು ಪರೀಕ್ಷೆ ನಡೆಸುವುದಾಗಿ ಘೋಷಣೆ ಮಾಡಲಾಗಿದೆ.

ಈಗಾಗಲೇ ಗೆಜೆಟೆಡ್ ಪ್ರೊಬೇಷನರ್ಸ್‌ 384 ಹುದ್ದೆ (ಕೆಎಎಸ್) ನೇಮಕಾತಿ ಪ್ರಕ್ರಿಯೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಕೆಪಿಎಸ್‌ಸಿ ನೀಡಿರುವ ಮಾಹಿತಿಯಂತೆ 384 ಒಟ್ಟು 2,10,910 ಅರ್ಜಿಗಳು ಸಲ್ಲಿಕೆಯಾಗಿವೆ. ಆಗಸ್ಟ್ 27ರಂದು ಪೂರ್ವಭಾವಿ ಪರೀಕ್ಷೆ ನಡೆಯಲಿದೆ.

ಪತ್ರದ ವಿವರ: ಕೆಪಿಎಸ್‌ಸಿಯ ಕಾರ್ಯದರ್ಶಿ ಡಾ. ರಾಕೇಶ್ ಕುಮಾರ್ ಕೆ. ಬರೆದಿರುವ ಪತ್ರವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ ಗ್ರೂಪ್ 'ಎ' ಮತ್ತು ಗ್ರೂಪ್ 'ಬಿ' ವೃಂದದ ಒಟ್ಟು 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ಕುರಿತು ಎಂಬ ವಿಷಯ ಒಳಗೊಂಡಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಲೋಕಸೇವಾ ಆಯೋಗವು 2023-24, ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ 'ಎ' ಮತ್ತು 'ಬಿ' ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ದಿನಾಂಕ 26/12/2021ರಂದು ಅಧಿಸೂಚನೆಯನ್ನು ಹೊರಡಿಸಿ ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ 25/08/2024ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲು ನಿಗದಿಪಡಿಸಲಾಗಿತ್ತು.

114 ಸರ್ಕಾರಿ, 180 ಅನುದಾನಿತ ಮತ್ತು 161 ಬಾಗಿ ಶಾಲಾ/ ಕಾಲೇಜುಗಳು ಸೇರಿದಂತೆ ಒಟ್ಟು 54 ಪರೀಕ್ಷಾ ಉಪಕೇಂದ್ರಗಳಿಂದ ಒಪ್ಪಿಗೆ ಪತ್ರಗಳನ್ನು ಪಡೆದು ಅಭ್ಯರ್ಥಿಗಳನ್ನು ಹಂಚಿಕೆ ಮಾಡಲಾಗಿರುತ್ತದೆ ಹಾಗೂ ಸದರಿ ದಿನದಂದು ಪರೀಕ್ಷೆಯನ್ನು ನಡೆಸುವ ಸಂಬಂಧ ಎಲ್ಲಾ ರೀತಿಯ ಪೂರ್ವಸಿದ್ಧತೆಗಳನ್ನು ಕೈಗೊಳ್ಳಲಾಗಿರುತ್ತದೆ.

ಪ್ರಸ್ತುತ, ಸದರಿ ದಿನಾಂಕದಂದು ಐ. ಬಿ. ಪಿ. ಎಸ್‌ ಪರೀಕ್ಷೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ, ಈ ಕುರಿತಂತೆ ಸುದೀರ್ಘವಾಗಿ ಆಯೋಗದ ಸಭೆಯಲ್ಲಿ ಚರ್ಚಿಸಿ, ಸದರಿ ಪೂರ್ವಭಾವಿ ಪರೀಕ್ಷೆಗೆ ಈಗಾಗಲೇ ಎಲ್ಲಾ ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿರುವ ಕಾರಣದಿಂದ ಹಾಗೂ ಮಾನ್ಯ ಮುಖ್ಯ ಮಂತ್ರಿಯವರವರು ಆಯೋಗದೊಂದಿಗೆ ಸಮಾಲೋಚಿಸಿ ಅಲ್ಪಕಾಲ ಸದರಿ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲಾಗುವುದು ಎಂದು ತಿಳಿಸಿರುವ ಹಿನ್ನೆಲೆಯಲ್ಲಿ 202-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ 27/08/2024ರ ಮಂಗಳವಾರದಂದು ನಡೆಸಲು ಆಯೋಗವು ತೀರ್ಮಾನಿಸಿದೆ.

ದಿನಾಂಕ 27/08/2024 ಕಾರ್ಯ ನಿರ್ವಹಣಾ (Working day) ದಿನವಾಗಿರುವುದರಿಂದ ಈಗಾಗಲೇ ಅಭ್ಯರ್ಥಿಗಳನ್ನು ಹಂಚಿಕೆ 564 ಪರೀಕ್ಷಾ ಉಪಕೇಂದ್ರಗಳಿಗೆ ಒಂದು ದಿವಸದ ವಿಶೇಷ ಸಾರ್ವತ್ರಿಕ ರಜೆಯನ್ನು ಘೋಷಿಸಿ, ಸದರಿ ಪೂರ್ವಭಾವಿ ಪರೀಕ್ಷೆಯನ್ನು ನಡೆಸುವಂತೆ ಅನುವು ಮಾಡಿಕೊಡಲು ಕೋರಿದೆ ಹಾಗೂ ಸದರಿ ಹುದ್ದೆಗೆ ಅರ್ಜಿ ಸಲ್ಲಿಸಿರುವ ರಾಜ್ಯ ಸರ್ಕಾರದ ಸೇವಾನಿರತ ಅಭ್ಯರ್ಥಿಗಳಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸುವಂತೆಯೂ ಕೋರಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ಮೊದಲು ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ಸ್‌ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು 21/07/2024ರಂದು ನಡೆಸುವುದಾಗಿ ತಿಳಿಸಿತ್ತು. ಬಳಿಕ ದಿನಾಂಕ 25/08/2024ರಂದು ಪರೀಕ್ಷೆಯನ್ನು ಮರು ನಿಗದಿಪಡಿಸಿತ್ತು. ಆದರೆ ಆಗಸ್ಟ್ 25ರಂದು ಐ. ಬಿ. ಪಿ. ಎಸ್‌ ಪರೀಕ್ಷೆ ನಿಗದಿಯಾಗಿರುವ ಕಾರಣ ಪರೀಕ್ಷೆ ದಿನಾಂಕ ಬದಲಾವಣೆ ಮಾಡಬೇಕು ಎಂದು ಒತ್ತಾಯಿಸಲಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಪರೀಕ್ಷೆಯ ದಿನಾಂಕ ಬದಲಾವಣೆ ಮಾಡಲು ಕೆಪಿಎಸ್‌ಸಿಗೆ ಸೂಚನೆ ನೀಡಲಾಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು. ಅಭ್ಯರ್ಥಿಗಳು ಐ. ಬಿ. ಪಿ. ಎಸ್. ಪರೀಕ್ಷೆಯನ್ನು ಸಹ ಬರೆಯಲು ಅನುಕೂಲವಾಗುವಂತೆ ಈಗ ದಿನಾಂಕ ಬದಲಾವಣೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+