KPSC: ಜ. 31, ಫೆ. 2ಕ್ಕೆ ಕೆಪಿಎಸ್‌ಸಿ ಪರೀಕ್ಷೆ, ಹೆಚ್ಚುವರಿ ಬಸ್ ಸೌಲಭ್ಯಕ್ಕೆ ಆಗ್ರಹ

ಬೆಂಗಳೂರು, ಜನವರಿ 27: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಜನವರಿ 31 ಮತ್ತು ಫೆಬ್ರವರಿ 2ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತಿದೆ. ಈ ಪರೀಕ್ಷೆಗಳಿಗೆ ಹಾಜರಾಗಲು ಅಭ್ಯರ್ಥಿಗಳು ಪರೀಕ್ಷೆ ಕೇಂದ್ರಕ್ಕೆ ತೆರಳಬೇಕು. ಬೇರೆ ಬೇರೆ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳು ಇರುವ ಕಾರಣ ಅಭ್ಯರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಲಾಗಿದೆ.

ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಯದಲ್ಲಿ ಸರ್ಕಾರದ ಸೂಚನೆಯಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್‌ಟಿಸಿ) ಹೆಚ್ಚುವರಿ ಬಸ್ ವ್ಯವಸ್ಥೆ ಮಾಡುತ್ತದೆ. ಈ ಬಾರಿಯೂ ಬಸ್ ವ್ಯವಸ್ಥೆ ಮಾಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಸರ್ಕಾರವನ್ನು ಒತ್ತಾಯಿಸಲಾಗುತ್ತದೆ.

KPSC Exam On January 31 And February 2 Demand For More KSRTC Bus

ಜನವರಿ 31ರ ಶುಕ್ರವಾರ ಮತ್ತು ಫೆಬ್ರವರಿ 2ರ ಭಾನುವಾರ ಕೆಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಈ ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಸೌಲಭ್ಯ ಒದಗಿಸಬೇಕು ಎಂದು ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಲಾಗಿದೆ.

ಯಾವ-ಯಾವ ಪರೀಕ್ಷೆಗಳು?; ರಮಣ್‌ದೀಪ್ ಚೌಧರಿ, ಕಾರ್ಯದರ್ಶಿ, ಕರ್ನಾಟಕ ಲೋಕ ಸೇವಾ ಆಯೋಗ ಇವರ ಮಾಹಿತಿಯಂತೆ ಆಯೋಗದ ಅಧಿಸೂಚನೆ ದಿನಾಂಕ 13-03-2024 ಮತ್ತು ತಿದ್ದುಪಡಿ ಅಧಿಸೂಚನೆ ದಿನಾಂಕ 20-09-2024ರನ್ವಯ ಉಳಿಕೆ ಮೂಲ ವೃಂದದಲ್ಲಿ ಅಧಿಸೂಚಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್) (ವಿಭಾಗ-1) ಹುದ್ದೆಗಳಿಗೆ ದಿನಾಂಕ 31.01.2025 ರಂದು ಪತ್ರಿಕೆ-2 ನಿರ್ದಿಷ್ಟ ಪತ್ರಿಕೆ ಪರೀಕ್ಷೆಗಳು ನಡೆಯಲಿದೆ.

ದಿನಾಂಕ 02.02.2025ರಂದು ಕೈಗಾರಿಕೆ & ವಾಣಿಜ್ಯ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರು ಹುದ್ದೆಗಳಿಗೆ ಪತ್ರಿಕೆ-2 ನಿರ್ದಿಷ್ಟ ಪತ್ರಿಕೆಗಳ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಸದರಿ ಪರೀಕ್ಷೆಗಳ ಪ್ರವೇಶ ಪತ್ರಗಳನ್ನು ದಿನಾಂಕ 24-01-2025ರಿಂದ ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಆಯೋಗದ ವೆಬ್ ಸೈಟ್ http://kpsc.kar.nic.in ರ ಮೂಲಕ ಡೌನ್ ಮಾಡಿಕೊಳ್ಳಬಹುದು ಎಂದು ಸೂಚಿಸಲಾಗಿದೆ. ಈ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಸಹಾಯಕವಾಗುವಂತೆ ಬಸ್ ಸೌಲಭ್ಯಕ್ಕೆ ಮನವಿ ಸಲ್ಲಿಕೆ ಮಾಡಲಾಗಿದೆ.

ಸ್ಮರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಕೆಪಿಎಸ್‌ಸಿ ಸಹ ಅಗತ್ಯ ತಯಾರಿ ಮಾಡಿಕೊಂಡಿದೆ. ಪರೀಕ್ಷೆಗಳನ್ನು ಸುಗಮ ಹಾಗೂ ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತದೆ.

ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ತಡೆಗಟ್ಟಲು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರ ಅನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ವಿವಿಧ ಷರತ್ತಿಗೆ ಒಳಪಟ್ಟು ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತದೆ.

ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್‌ಟಿಡಿ, ಮೊಬೈಲ್ ಪೇಜರ್, ಝೆರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷೆಯಲ್ಲಿ ಪ್ರವೇಶ ಪತ್ರ ಹೊಂದಿದ ಅಭ್ಯರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನೂಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗುತ್ತದೆ.

ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ಕಾಪಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ. 200 ಮೀಟರ್ ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಲಾಗುತ್ತದೆ. ಈ ಆದೇಶ ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವದಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+