ಕೆಪಿಎಸ್‌ಸಿ ನೇಮಕಾತಿ, ಆನ್‌ಲೈನ್‌ನಲ್ಲಿ ಅರ್ಜಿ ಲಭ್ಯ

ಬೆಂಗಳೂರು, ಜು. 01 : ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿನ ವಿವಿಧ ಇಲಾಖೆಗಳಲ್ಲಿರುವ ಸಹಾಯಕ/ಪ್ರಥಮ ದರ್ಜೆ ಸಹಾಯಕ, ಕಿರಿಯ ಸಹಾಯಕ/ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್‌ಸಿ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 1, 2015.

ಅರ್ಜಿಗಳನ್ನು ಜುಲೈ 3ರ ನಂತರ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ವೆಬ್‌ಸೈಟ್‌ಗೆ ಭೇಟಿ ನೀಡಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 1 ರಾತ್ರಿ 11.45. ಅರ್ಜಿ ಶುಲ್ಕಗಳನ್ನು ಪಾವತಿ ಮಾಡಲು ಕೊನೆಯ ದಿನಾಂಕ ಆಗಸ್ಟ್ 3, 2015. [ನೇಮಕಾತಿ ಆದೇಶ ಓದಿ]

kpsc jobs

ಪರೀಕ್ಷಾ ಶುಲ್ಕ : ಸಹಾಯಕ/ಪ್ರಥಮ ದರ್ಜೆ ಸಹಾಯಕ, ಕಿರಿಯ ಸಹಾಯಕ/ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಪ್ರವೇಶ ಪರೀಕ್ಷೆಗಳು 2015ರ ಅಕ್ಟೋಬರ್‌ನಲ್ಲಿ ನಡೆಯಲಿವೆ. ಸಾಮಾನ್ಯ ವರ್ಗ/ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 300 ರೂ., ಪ.ಜಾ/ಪ.ಪಂ/ಪ್ರವರ್ಗ 1/ಅಂಗವಿಕಲರು/ಮಾಜಿ ಸೈನಿಕರಿಗೆ 25 ರೂ. ಅರ್ಜಿ ಶುಲ್ಕವಿದೆ. [ಅರ್ಜಿ ಸಲ್ಲಿಸಲು ವಿಳಾಸ]

ವಿದ್ಯಾರ್ಹತೆ : ಸಹಾಯಕ/ಪ್ರಥಮ ದರ್ಜೆ ಸಹಾಯಕರ ಹುದ್ದೆಗಳಿಗೆ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಕಿರಿಯ ಸಹಾಯಕ/ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ನಡೆಸುವ ಪದವಿ ಪೂರ್ವ ಪರೀಕ್ಷೆ ಅಥವ ತತ್ಸಮಾನ ವಿದ್ಯಾರ್ಹತೆಗಳಾದ ಐಟಿಐ, ಮೂರು ವರ್ಷದ ಡಿಪ್ಲೋಮಾ ಕೋರ್ಸ್ ಮುಗಿಸಿರಬೇಕು. [ಕಾರಾಗೃಹ ಇಲಾಖೆಯಲ್ಲಿ 320 ಹುದ್ದೆ ಖಾಲಿ ಇದೆ]

ವಯೋಮಿತಿ : ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯೋಮಿತಿ ಪೂರೈಸತಕ್ಕದ್ದು. ಸಾಮಾನ್ಯ ವರ್ಗದವರಿಗೆ 35 ವರ್ಷ, 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷ, ಪ.ಜಾ/ಪ.ಪಂ/ಪ್ರ -1ರ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+