Get Updates
Get notified of breaking news, exclusive insights, and must-see stories!

KAS: ಗೆಜೆಟೆಡ್ ಪ್ರೊಬೇಷನರ್ 384 ಹುದ್ದೆ ನೇಮಕಾತಿ, ಮುಖ್ಯ ಪರೀಕ್ಷೆ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು, ಮಾರ್ಚ್ 01: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಗೆಜೆಟೆಡ್ ಪ್ರೊಬೇಷನರ್ 384 ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ನೇಮಕಾತಿ ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾದವರ ಪಟ್ಟಿ ಬಿಡುಗಡೆ ಮಾಡಿತ್ತು. ಈಗ ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶವನ್ನು ನೀಡಿದೆ. ಅಭ್ಯರ್ಥಿಗಳು ಮಾರ್ಚ್ 13ರ ತನಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. ಹಲವು ಗೊಂದಲದ ಕಾರಣ ಎರಡು ಬಾರಿ ಪೂರ್ವಭಾವಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಯಲ್ಲಿನ ಕನ್ನಡ ಪ್ರಶ್ನೆ ಪತ್ರಿಕೆ ದೋಷವನ್ನು ಪ್ರಶ್ನಿಸಿ ಕೆಎಟಿಗೂ ಸಹ ಅರ್ಜಿ ಸಲ್ಲಿಸಲಾಗಿದೆ.

ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಮಾಡುವ ಕುರಿತು ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ ಆದೇಶವನ್ನು ಹೊರಡಿಸಿದ್ದಾರೆ. ಅಧಿಸೂಚನೆ ಸಂಖ್ಯೆ ದಿನಾಂಕ 26-02-2024, ಮುಖ್ಯ ಪರೀಕ್ಷೆ ಅಧಿಸೂಚನೆ ಸಂಖ್ಯೆ ದಿನಾಂಕ 13-02-2025 ಉಲ್ಲೇಖ ಮಾಡಿದ್ದಾರೆ.

KPSC Gazetted Probationers 384 Post Recruitment Apply For Main Exam Till March 13

ಆದೇಶದ ವಿವರ: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗಳಿಗೆ ಅಧಿಸೂಚನೆಗಳನ್ನು ಕ್ರಮವಾಗಿ 26-02-2024, ಮತ್ತು 13-02-2025ರಂದು ಹೊರಡಿಸಲಾಗಿರುತ್ತದೆ.

ದಿನಾಂಕ 13-02-2025ರ ಮುಖ್ಯಪರೀಕ್ಷೆಯ ಅಧಿಸೂಚನೆಯಲ್ಲಿ ಪೂರ್ವಭಾವಿ ಪರೀಕ್ಷೆಯಿಂದ ಮುಖ್ಯಪರೀಕ್ಷೆಗೆ 1:15 ಅನುಪಾತದಲ್ಲಿ ಅರ್ಹರಾದ ಅಭ್ಯರ್ಥಿಗಳಿಂದ ಅರ್ಜಿ ಸ್ವೀಕರಿಸಲು ದಿನಾಂಕ 17-02-2025 ರಿಂದ 03-03-2025ರವರೆಗೆ ಕಾಲಾವಕಾಶವನ್ನು ನೀಡಲಾಗಿತ್ತು.

ಮಾನ್ಯ ಕರ್ನಾಟಕ ಆಡಳಿತ ಮಂಡಳಿಯ ಅರ್ಜಿ ಸಂಖ್ಯೆ 285/2025ರ ಪ್ರಕರಣದಲ್ಲಿ ಸದರಿ ಹುದ್ದೆಗಳ ಮುಖ್ಯ ಪರೀಕ್ಷೆಯ ಪ್ರಕ್ರಿಯೆಯನ್ನು abeyanceನಲ್ಲಿ ಇಡಲು ಆದೇಶ ನೀಡಿದ ಸದರಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು.

ಪ್ರಸ್ತುತ, ಸದರಿ ಪ್ರಕರಣದಲ್ಲಿ ದಿನಾಂಕ 25-02-2025ರಂದು ಅರ್ಹರಾದ ಅಭ್ಯರ್ಥಿಗಳಿಂದ ಮುಖ್ಯ ಪರೀಕ್ಷೆಗೆ ಅರ್ಜಿ ಸ್ವೀಕರಿಸಬಹುದೆಂದು ಮಾನ್ಯ ನ್ಯಾಯಮಂಡಳಿಯು ಮಾರ್ಪಾಡು/ ಸೃಷ್ಟೀಕರಣ ನೀಡಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ದಿನಾಂಕ 27-02-2025 ರಿಂದ 13-03-2025ರವರೆಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

ಅಭ್ಯರ್ಥಿಗಳು ಕೆಪಿಎಸ್‌ಸಿಯ https://kpsc.kar.nic.in/ ವೆಬ್‌ಸೈಟ್‌ಗೆ ಭೇಟಿ ನೀಡಿ, ಅಧಿಸೂಚನೆಗಳನ್ನು ಕ್ಲಿಕ್ ಮಾಡಿ ಬಳಿಕ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿ ಸಂಬಂಧಿತ ಆದೇಶಗಳನ್ನು ವಿವರವಾಗಿ ಓದಿಕೊಂಡು ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು.

ಡಿಸೆಂಬರ್ 29, 2024ರಂದು ನಡೆದ ಪೂರ್ವಭಾವಿ ಪರೀಕ್ಷೆಯಿಂದ ಮುಖ್ಯ ಪರೀಕ್ಷೆಗೆ 1:15ರ ಅನುಪಾತದಲ್ಲಿ ಅರ್ಹರಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಈಗಾಗಲೇ ಪ್ರಕಟಿಸಿದೆ. ಮುಖ್ಯ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಪ್ರಶ್ನೆ ಪತ್ರಿಕೆಯಲ್ಲಿ ಭಾಷಾಂತರದ ಯಡವಟ್ಟಿನ ಕಾರಣ 2024ರ ಆಗಸ್ಟ್ ಮತ್ತು ಡಿಸೆಂಬರ್‌ನಲ್ಲಿ ಎರಡು ಬಾರಿ ಪೂರ್ವಭಾವಿ ಪರೀಕ್ಷೆ ಮಾಡಲಾಗಿತ್ತು. ಈ ಪರೀಕ್ಷೆ ರಾಜ್ಯದಲ್ಲಿ ಭಾರೀ ಸುದ್ದಿಯಾಗಿತ್ತು. ದಿನಾಂಕ 29-12-2024ರಂದು ನಡೆಸಿದ ಮರು ಪರೀಕ್ಷೆಯಲ್ಲಿಯೂ ಪ್ರಶ್ನೆ ಪತ್ರಿಕೆ ದೋಷವಿತ್ತು. ಆದರೆ ಮತ್ತೆ ಪರೀಕ್ಷೆ ನಡೆಸುವುದಿಲ್ಲ ಎಂದು ಕೆಪಿಎಸ್‌ಸಿ ಹೇಳಿತ್ತು, ಈಗ ಮುಂದಿನ ಪ್ರಕ್ರಿಯೆ ಕೈಗೊಂಡಿದೆ.

ಕೆಲವು ದಿನಗಳ ಹಿಂದೆ ಪ್ರಶ್ನೆ ಪತ್ರಿಕೆ ಕನ್ನಡ ತಪ್ಪಿನ ಹಿನ್ನಲೆಯಲ್ಲಿ ಪೂರ್ವಭಾವಿ ಪರೀಕ್ಷೆಯಿಂದ ಮುಖ್ಯ ಪರೀಕ್ಷೆಗೆ 1:15ರ ಅನುಪಾತದಲ್ಲಿ ಉತ್ತೀರ್ಣದ ಅರ್ಹತೆಯನ್ನು 1:20 ಅಥವ 1:25ಕ್ಕೆ ಏರಿಕೆ ಮಾಡಲಾಗುತ್ತದೆ ಎಂಬ ಸುದ್ದಿಗಳು ಹಬ್ಬಿತ್ತು. ಆದರೆ ಈಗ ಕೆಪಿಎಸ್‌ಸಿ 1:15ರ ಅನುಪಾತದಲ್ಲಿಯೇ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶವನ್ನು ಕಲ್ಪಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+