KAS: ಡಿ. 29ರಂದು ಕೆಪಿಎಸ್‌ಸಿ ಮರು ಪರೀಕ್ಷೆ, ಅಭ್ಯರ್ಥಿಗಳಿಗೆ ಸೂಚನೆಗಳು

ಬೆಂಗಳೂರು, ಡಿಸೆಂಬರ್ 24: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಡಿಸೆಂಬರ್ 29ರಂದು ಗೆಜೆಟೆಡ್ ಪ್ರೊಬೇಷನರ್ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಮರು ಪರೀಕ್ಷೆಗಳನ್ನು ನಡೆಸಲಿದೆ. ಪರೀಕ್ಷೆಗಾಗಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ, ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆ ಸೇರಿದಂತೆ ಸೂಚನೆಗಳನ್ನು ನೀಡಲಾಗಿದೆ. ಆಗಸ್ಟ್​ 27ರಂದು ನಡೆದ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿನ ಕನ್ನಡ ದೋಷದ ಕಾರಣಕ್ಕೆ ಮರು ಪರೀಕ್ಷೆಯನ್ನು ನಡೆಸಲಾಗುತ್ತಿದೆ.

ಕರ್ನಾಟಕ ಲೋಕಸೇವಾ ಆಯೋಗ ಗೆಜೆಟೆಡ್ ಪ್ರೊಬೇಷನರ್ 384 ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಮರುಪರೀಕ್ಷೆಗೆ ತಯಾರಿಯನ್ನು ಪೂರ್ಣಗೊಳಿಸಿದೆ. ವಿವಿಧ ಜಿಲ್ಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚನೆ ನೀಡಲಾಗಿದೆ.

KPSC Gazetted Probationers Re Exam On December 29 Direction For Candidates

ಅಭ್ಯರ್ಥಿಗಳಿಗೆ ಸೂಚನೆಗಳು

* ಅಭ್ಯರ್ಥಿಗಳು ಕೆಪಿಎಸ್‍ಸಿಯಿಂದ ಡೌನ್‍ಲೋಡ್ ಮಾಡಿಕೊಂಡ ಮರು ಪರೀಕ್ಷೆಯ ಪ್ರವೇಶ ಪತ್ರ, ಭಾವಚಿತ್ರವಿರುವ ಮೂಲ ಗುರುತಿನ ಚೀಟಿ (ಚುನಾವಣೆ ಐಡಿ, ಆಧಾರ್ ಕಾರ್ಡ್, ಡ್ರೈವಿಂಗ್ ಲೈಸನ್ಸ್, ಪಾನ್‍ಕಾರ್ಡ್, ಪಾಸ್‍ಪೋರ್ಟ್, ಸರ್ಕಾರಿ ನೌಕರರ ಐಡಿ) ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಹಾಜರುಪಡಿಸಬೇಕು.

* ಅಭ್ಯರ್ಥಿಗಳು ಮೊಬೈಲ್, ಕ್ಯಾಲುಲ್ಕೇಟರ್, ಸ್ಮಾರ್ಟ್‍ವಾಚ್, ಬ್ಲೂಟೂತ್, ವೈಟ್ ಫ್ಲೂಯಿಡ್, ವೈರ್‌ಲೆಸ್ ಸೆಟ್, ಪೇಪರ್, ಬುಕ್ಸ್ ಇತರೆ ಎಲೆಕ್ಟ್ರಾನಿಕ್ ಗ್ಯಾಜೆಟ್‍ಗಳನ್ನು ತರುವಂತಿಲ್ಲ.

* ಅಭ್ಯರ್ಥಿಗಳು ಶೂ, ಸಾಕ್ಸ್, ಸ್ವೆಟರ್ ಮತ್ತು ಜರ್ಕಿನ್, ತುಂಬು ತೋಳಿನ ಷರ್ಟ್ ಮತ್ತು ಫೇಸ್ ಮಾಸ್ಕ್ ಹಾಗೂ ಇತರೆ ವಸ್ತುಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ.

* ಅಭ್ಯರ್ಥಿಗಳು ಸಾಧಾರಣ ಚಪ್ಪಲಿಯನ್ನು ಮಾತ್ರ ಧರಿಸಿ ಪರೀಕ್ಷೆಗೆ ಹಾಜರಾಗಬೇಕು.

ಪೂರ್ವಭಾವಿ ಮರು ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಸಿಬ್ಬಂದಿಗಳಿಗೆ ಸೂಚನೆಗಳನ್ನು ಸಹ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ವ್ಯವಸ್ಥಿವಾಗಿ ಪರೀಕ್ಷಾ ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ಪರೀಕ್ಷೆ ನಿರ್ವಹಣೆ ಕಾರ್ಯ ಅತಿ ಸೂಕ್ಷ್ಮವಾದದ್ದು, ಅಭ್ಯರ್ಥಿಗಳ ಭವಿಷ್ಯ ಇದರಲ್ಲಿ ಅಡಗಿದೆ. ಅಕ್ರಮಗಳಿಗೆ ಅವಕಾಶ ಮಾಡಿಕೊಡದಂತೆ ಎಚ್ಚರಿಕೆಯಿಂದ, ಪರೀಕ್ಷಾ ಕಾರ್ಯ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಲಾಗಿದೆ.

ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗಬಾರದು. ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಹಾಗೂ ಒಎಂಆರ್ ಬಂಡಲ್‍ಗಳನ್ನು ಕೊಂಡೊಯ್ಯಲು ನೇಮಿಸಿರುವ ಮಾರ್ಗಾಧಿಕಾರಿಗಳು ಸರಿಯಾದ ಸಮಯಕ್ಕೆ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಪಡೆದು, ಪರೀಕ್ಷಾ ಕೇಂದ್ರಗಳಿಗೆ ತಲುಪಿಸಬೇಕು.

ಪರೀಕ್ಷೆ ಮುಗಿದ ನಂತರ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಒಎಂಆರ್ ಬಂಡಲ್‍ಗಳನ್ನು ಅಂಚೆ ಮೂಲಕ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಕಳುಹಿಸಿಕೊಡಬೇಕು. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಬಳಿ ಇರುವ ಅಂಚೆ ಕಚೇರಿಗಳು ಒಎಂಆರ್ ಬಂಡಲ್‍ಗಳು ತಲುಪುವವರೆಗೂ ತಪ್ಪದೇ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಲಾಗಿದೆ.

ಮೊಬೈಲ್ ಬ್ಲೂಟೂತ್ ಮತ್ತು ಇತರೆ ಆಧುನಿಕ ಸಂವಹನ ಉಪಕರಣಗಳನ್ನು ಬಳಸಿ ಪರೀಕ್ಷೆಯಲ್ಲಿ ಅಕ್ರಮಗಳನ್ನು ಎಸಗುವುದನ್ನು ತಡೆಯಲು ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಅಳವಡಿಕೆ ಮಾಡಲಾಗುತ್ತಿದೆ. ಪ್ರತಿ ಕೊಠಡಿಯಲ್ಲಿ ಸಿಸಿಟಿವಿ ಇರಲಿದ್ದು, ಇದರೊಂದಿಗೆ ಫೇಸ್ ರೆಕಗ್ನೈಸೇಷನ್ ಹಾಗೂ ಬಯೋಮೆಟ್ರಿಕ್ ಹಾಜರಾತಿಯನ್ನು ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕವಾದ ಸಿಬ್ಬಂದಿ ಕೈಗೊಳ್ಳಲಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ಅಭ್ಯರ್ಥಿಗಳನ್ನು ಪೂರ್ಣ ಪ್ರಮಾಣದಲ್ಲಿ ತಪಾಸಣೆಗೆ ಒಳಪಡಿಸಲಾಗುತ್ತದೆ.

ಡಿಸೆಂಬರ್ 29ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 12ರ ವರೆಗೆ ಪತ್ರಿಕೆ-01 ಹಾಗೂ ಮಧ್ಯಾಹ್ನ 2ರಿಂದ ಸಂಜೆ 4 ರವರೆಗೆ ಪತ್ರಿಕೆ-02ರ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಕೆಪಿಎಸ್‌ಸಿ ವೆಬ್‌ಸೈಟ್ ಮೂಲಕ ಹೊಸದಾಗಿ ಮರು ಪರೀಕ್ಷೆ ಪ್ರವೇಶ ಪತ್ರಗಳನ್ನು ಡೌನ್‍ಲೋಡ್ ಮಾಡಿಕೊಳ್ಳಬೇಕು. ಹೊಸ ಪ್ರವೇಶ ಪತ್ರದಲ್ಲಿ ನಮೂದಿಸಲಾಗಿರುವ ಪರೀಕ್ಷಾ ಕೇಂದ್ರದಲ್ಲಿಯೇ ಪರೀಕ್ಷೆಗೆ ಹಾಜರಾಗಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+