KAS Recruitment: ಹುದ್ದೆಗಳ ಸಂಖ್ಯೆ ಏರಿಕೆ, ಅಭ್ಯರ್ಥಿಗಳಿಗೆ ಸಿಹಿಸುದ್ದಿ

ಬೆಂಗಳೂರು, ಜೂನ್ 26: ಕರ್ನಾಟಕ ಸರ್ಕಾರ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್) ನೇಮಕಾತಿ ನಡೆಸುತ್ತಿದೆ. ಸದ್ಯ ಅಭ್ಯರ್ಥಿಗಳಿಗೆ ಸಿಹಿಸುದ್ದಿ ಒಂದಿದೆ. ಒಟ್ಟು ಹುದ್ದೆಗಳ ಸಂಖ್ಯೆಯನ್ನು ಏರಿಕೆ ಮಾಡಲಾಗುತ್ತದೆ.

ಸದ್ಯ ಕೆಪಿಎಸ್‌ಸಿ ಮೂಲಕ 384 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್) ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಸೀಮಿತಗೊಳಿಸಿ (One time measure) ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಲಾಗಿದೆ.

KPSC Gazetted Probationers Recruitment 120 Post May Added Soon

ಹುದ್ದೆಗಳ ಸಂಖ್ಯೆ ಏರಿಕೆ?: ಸದ್ಯದ ಮಾಹಿತಿ ಪ್ರಕಾರ ಕರ್ನಾಟಕ ಸರ್ಕಾರ ಹೆಚ್ಚುವರಿಯಾಗಿ 120 ಹುದ್ದೆಗಳನ್ನು ಸೇರಿಸಲಿದೆ. ಕೋವಿಡ್ ಸೇರಿದಂತೆ ವಿವಿಧ ಕಾರಣಕ್ಕೆ 6 ವರ್ಷಗಳಿಂದ ಕೆಎಎಸ್ ನೇಮಕಾತಿ ನಡೆದಿರಲಿಲ್ಲ. ಆದ್ದರಿಂದ ಈಗ ಹೆಚ್ಚುವರಿ ಹುದ್ದೆಗಳನ್ನು ಸೇರಿಸಲು ತೀರ್ಮಾನಿಸಲಾಗಿದೆ.

2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಸೀಮಿತಗೊಳಿಸಿ ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಲಾಗಿದೆ. ಇದೇ ಮಾದರಿಯಲ್ಲಿ ಹುದ್ದೆಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂಬ ಬೇಡಿಕೆಯೂ ಇತ್ತು.

ಈ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರ ಹೆಚ್ಚುವರಿಯಾಗಿ 120 ಹುದ್ದೆಗಳನ್ನು ಸೇರಿಸಲು ಮುಂದಾಗಿದೆ. ಈಗಾಗಲೇ 384 ಹುದ್ದೆಗಳಿಗೆ 1.95 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಹೊಸದಾಗಿ 120 ಹುದ್ದೆಗಳನ್ನು ಸೇರಿಸಿದರೆ ಅರ್ಜಿ ಸಲ್ಲಿಕೆ ಮಾಡುವ ಅವಧಿಯನ್ನು ವಿಸ್ತರಣೆ ಮಾಡಿ ಹೊಸದಾಗಿ ಆದೇಶವನ್ನು ಹೊರಡಿಸಲಾಗುತ್ತದೆ.

ಹಿಂದಿನ ಅಧಿಸೂಚನೆ: ಕೆಪಿಎಸ್‌ಸಿ ದಿನಾಂಕ 02/04/2024ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ದಿನಾಂಕ 26/02/2024ರಲ್ಲಿ ಕೆಲವು ಬದಲಾವಣೆ ಇದೆ ಎಂದು ಹೇಳಿತ್ತು.

ಅಧಿಸೂಚನೆಯಲ್ಲಿನ ಗ್ರೂಪ್-ಎ ವೃಂದದ (ಆರ್.ಪಿ.ಸಿ.) ಮತ್ತು ಹೈ.ಕ. ವೃಂದದ ಹುದ್ದೆಗಳ ಒಟ್ಟು ಸಂಖ್ಯೆ 123 (ಆರ್.ಪಿ.ಸಿ.) ಮತ್ತು 36 (ಹೈ.ಕ.) ಎಂದೂ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಒಟ್ಟಾರೆ ಹುದ್ದೆಗಳ ಸಂಖ್ಯೆ 307 (ಆರ್.ಪಿ.ಸಿ.) ಮತ್ತು 77 (ಹೈ.ಕ.) ಎಂದು ನಮೂದಾಗಿದೆ ಎಂದು ತಿಳಿಸಿತ್ತು.

ಅವುಗಳನ್ನು ಒಟ್ಟು ಸಂಖ್ಯೆ 126 (ಆರ್.ಪಿ.ಸಿ.) ಮತ್ತು 33 (ಹೈ.ಕ.) ಎಂದೂ ಹಾಗೂ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಒಟ್ಟಾರೆ ಹುದ್ದೆಗಳ ಸಂಖ್ಯೆ 310 (ಆರ್.ಪಿ.ಸಿ.) ಮತ್ತು 74 (ಹೈ.ಕ.) ಎಂದೂ ಓದಿಕೊಳ್ಳತಕ್ಕದ್ದು ಎಂದು ತಿಳಿಸಲಾಗಿತ್ತು.

ಲೋಕಸಭೆ ಚುನಾವಣೆ ವೇಳಾಪಟ್ಟಿ ಪ್ರಕಟವಾದ ಮೇಲೆ ಚುನಾವಣಾ ಮಾದರಿ ನೀತಿ ಸಂಹಿತೆ ಕಾರಣಕ್ಕೆ ಅರ್ಜಿ ಸಲ್ಲಿಕೆ ಮಾಡುವ ಅವಧಿ ವಿಸ್ತರಣೆ ಮಾಡಲಾಗಿತ್ತು. ಈಗ ಹುದ್ದೆಗಳ ಸಂಖ್ಯೆಯನ್ನು ಹೆಚ್ಚಳ ಮಾಡಿದರೆ ಮತ್ತೆ ಅರ್ಜಿ ಸಲ್ಲಿಕೆ ಮಾಡಲು ಹೆಚ್ಚುವರಿ ಕಾಲಾವಕಾಶ ಸಿಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+