KAS Recruitment: ಅರ್ಜಿ ಸಲ್ಲಿಕೆಗೆ ಹೆಚ್ಚುವರಿ ವಿಶೇಷ ಅವಕಾಶ, ವಿವರ
ಬೆಂಗಳೂರು, ಜೂನ್ 22: ಕರ್ನಾಟಕ ಸರ್ಕಾರ ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್) ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡುವ ಕುರಿತು ಆದೇಶ ಹೊರಡಿಸಿದೆ.
ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ, ಡಿ. ಚಂದ್ರಕಲ ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವೆಗಳು-7) ಆದೇಶ ಹೊರಡಿಸಿದ್ದಾರೆ.

ಆದೇಶ 2023-24ನೇ ಸಾಲಿಗೆ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು KPSC ಹೊರಡಿಸಿರುವ ಅಧಿಸೂಚನೆಯಲ್ಲಿ 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್) ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಸೀಮಿತಗೊಳಿಸಿ (One time measure) ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡುವ ಕುರಿತು ಎಂಬ ವಿಷಯ ಒಳಗೊಂಡಿದೆ.
ಪ್ರಸ್ತಾವನೆ ಮತ್ತು ಸರ್ಕಾರದ ಆದೇಶ: ಕೆಲವು ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆ ಆಕಾಂಕ್ಷಿಗಳು ಸರ್ಕಾರಕ್ಕೆ ಮನವಿಗಳನ್ನು ಸಲ್ಲಿಸಿ, ರಾಜ್ಯ ಸರ್ಕಾರವು 2023-24ನೇ ಸಾಲಿಗೆ ಈಗಾಗಲೇ ಕೆಎಎಸ್ ಪರೀಕ್ಷೆ ಬರೆಯಲು ಒಂದು ಬಾರಿ ಎಂಬಂತೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ನೀಡಿದ್ದು, ಇದರಿಂದ ಕೆಲವು ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ದೊರೆಯಲಿದ್ದು ಉಳಿದ ಅಭ್ಯರ್ಥಿಗಳು ಅವಕಾಶ ವಂಚಿತರಾಗುತ್ತಿದ್ದಾರೆ ಎಂದು ಹೇಳಿತ್ತು.
ಈ ಹಿನ್ನಲೆಯಲ್ಲಿ, 2017-18 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ 2023-24ನೇ ಸಾಲಿನ ಅಧಿಸೂಚನೆಯಲ್ಲಿ ಪರೀಕ್ಷೆ ಬರೆಯಲು ವಯಸ್ಸಿನ ನಿರ್ಬಂಧವಿಲ್ಲದೆ ಹೆಚ್ಚುವರಿ ವಿಶೇಷ ಅವಕಾಶ ನೀಡುವಂತೆ ಕೋರಿದ್ದರು.
ಪ್ರಸ್ತಾಪಿಸಿರುವ ಅಂಶಗಳನ್ನು ಸರ್ಕಾರವು ಪರಿಶೀಲಿಸಿ 2023-24ನೇ ಸಾಲಿಗೆ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 26/02/2024 ರಂದು ಹೊರಡಿಸಿರುವ ಅಧಿಸೂಚನೆಯಲ್ಲಿ 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್) ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಯಸ್ಸಿನ ನಿರ್ಬಂಧವಿಲ್ಲದೆ ಒಂದು ಬಾರಿಗೆ ಸೀಮಿತಗೊಳಿಸಿ (One time measure) ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಲು ತೀರ್ಮಾನಿಸಿ ಆದೇಶಿಸಿದೆ.
ಆದೇಶದ ವಿವರ: ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 44 ಎಸ್‌ಎಸ್ 2024; ಬೆಂಗಳೂರು, ದಿನಾಂಕ 21/06/2024ರ ಪ್ರಕಾರ ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, ಕರ್ನಾಟಕ ಗೆಜೆಟೆಡ್ ಪ್ರೋಬೆಷನರ್ಸ್ (ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ) ನಿಯಮಗಳು, 1997 ರನ್ವಯ 2023-24 ನೇ ಸಾಲಿಗೆ ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ಗೆಜೆಟೆಡ್ ಪ್ರೋಬೆಷನರ್ಸ್ (ಕೆಎಎಸ್) ಹುದ್ದೆಗಳ ರಿಕ್ತ ಸ್ಥಾನಗಳಿಗೆ ದಿನಾಂಕ 26/02/2024 ರಂದು ಹೊರಡಿಸಿರುವ ಅಧಿಸೂಚನೆಯಲ್ಲಿ ಈಗಿರುವ ನಿಯಮಗಳ ಮೇಲೆ 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಯಸ್ಸಿನ ನಿರ್ಬಂಧವಿಲ್ಲದೆ ಒಂದು ಬಾರಿಗೆ ಸೀಮಿತಗೊಳಿಸಿ (one time measure) ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಿದೆ. ಸರ್ಕಾರವು ಆದೇಶಿಸಿದೆ.
ಮುಂದುವರೆದು, 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗವು 15 ದಿನಗಳ ಕಾಲಾವಕಾಶವನ್ನು ನೀಡತಕ್ಕದ್ದು. ಈ ಆದೇಶವನ್ನು ಸಚಿವ ಸಂಪುಟದ ಘಟನೋತ್ತರ ಮಂಜೂರಾತಿ ಪಡೆಯುವ ಷರತ್ತಿಗೊಳಪಟ್ಟು ಹೊರಡಿಸಿದೆ ಎಂದು ತಿಳಿಸಿದೆ.












Click it and Unblock the Notifications