ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಎಸ್‌ಸಿ ನೇಮಕಾತಿ; ಮುಖ್ಯ ಪರೀಕ್ಷೆಯ ಅಂಕಗಳು ಇಳಿಕೆ

|
Google Oneindia Kannada News

ಬೆಂಗಳೂರು, ಜೂನ್ 07 : ಕರ್ನಾಟಕ ಲೋಕಸೇವಾ ಆಯೋಗ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ನಡೆಸುವ ಮುಖ್ಯ ಪರೀಕ್ಷೆ ಅಂಕವನ್ನು ಇಳಿಕೆ ಮಾಡಿದೆ. ಈಗ ಮುಖ್ಯ ಪರೀಕ್ಷೆಯ ಒಟ್ಟು ಅಂಕ 1,250 ಆಗಿದೆ.

ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರಿ (ಗ್ರೂಪ್ 'ಎ' ಮತ್ತು 'ಬಿ') ಹುದ್ದೆಗಳ ನೇಮಕಾತಿಯನ್ನು ನಡೆಸುತ್ತಿದೆ. ಈ ನೇಮಕಾತಿಯ ಮುಖ್ಯ ಪರೀಕ್ಷೆ ಅಂಕಗಳನ್ನು ಇಳಿಕೆ ಮಾಡಿ ಆದೇಶ ಹೊರಡಿಸಲಾಗಿದೆ.

ಕರ್ನಾಟಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; 26 ಹುದ್ದೆಗಳು ಕರ್ನಾಟಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; 26 ಹುದ್ದೆಗಳು

200 ಅಂಕಗಳಿಗೆ ವ್ಯಕ್ತಿತ್ವ ಪರೀಕ್ಷೆ (ಸಂದರ್ಶನ) ನಡೆಯುತ್ತಿತ್ತು. ಇದನ್ನು 50ಕ್ಕೆ ಇಳಿಕೆ ಮಾಡಲಾಗಿದೆ. ಸಂದರ್ಶನದಲ್ಲಿ ಅಭ್ಯರ್ಥಿಗಳಿಸಿದ ಅಂಕ ಶೇ 80 ದಾಟಿದರೆ ಅಥವ ಶೇ 40ಕ್ಕಿಂತ ಕಡಿಮೆಯಾದರೆ ಸಂದರ್ಶನ ಮಂಡಳಿ ಸದಸ್ಯರು ಕಾರಣ ದಾಖಲಿಸಬೇಕಾಗುತ್ತದೆ.

ಪಂಚಾಯತ್ ರಾಜ್ ಇಲಾಖೆ ನೇಮಕಾತಿ; 7000 ಹುದ್ದೆ ಪಂಚಾಯತ್ ರಾಜ್ ಇಲಾಖೆ ನೇಮಕಾತಿ; 7000 ಹುದ್ದೆ

KPSC

ಇದುವರೆಗೆ ಎರಡು ಐಚ್ಛಿಕ ವಿಷಯಗಳು ಸೇರಿದಂತೆ ಏಳು ವಿಷಯಗಳಲ್ಲಿ ಮುಖ್ಯ ಪರೀಕ್ಷೆ ನಡೆಯುತ್ತಿತ್ತು. ಇನ್ನು ಕೇವಲ 5 ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಐಚ್ಛಿಕ ವಿಷಯಗಳ 250 ಅಂಕಗಳ ಎರಡು ಪತ್ರಿಕೆಗಳನ್ನು ಕೈಬಿಡಲಾಗುತ್ತಿದೆ.

LIC ನೇಮಕಾತಿ 2020: 100 ಹುದ್ದೆಗಳಿಗೆ ಅರ್ಜಿ ಆಹ್ವಾನ LIC ನೇಮಕಾತಿ 2020: 100 ಹುದ್ದೆಗಳಿಗೆ ಅರ್ಜಿ ಆಹ್ವಾನ

ಒಟ್ಟು 1,750 ಅಂಕಗಳಿಗೆ ನಡೆಯುತ್ತಿದ್ದ ಮುಖ್ಯ ಪರೀಕ್ಷೆ 500 ಅಂಕಗಳು ಕಡಿತಗೊಳ್ಳಲಿದ್ದು, ಈಗ ಒಟ್ಟು ಅಂಕ 1,250 ಆಗಿರಲಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕೆಪಿಎಸ್‌ಸಿ ವೆಬ್ ಸೈಟ್ ನೋಡಬಹುದಾಗಿದೆ.

English summary
Karnataka public service commission (KPSC) reduced marks of gazetted probationers recruitment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X