KAS Recruitment: ಕೆಎಎಸ್ ನೇಮಕಾತಿ, ಪೂರ್ವಭಾವಿ ಪರೀಕ್ಷೆ ದಿನಾಂಕ ಬದಲು

ಬೆಂಗಳೂರು, ಜೂನ್ 29: ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್) ನೇಮಕಾತಿಯನ್ನು ನಡೆಸಲು ಈಗಾಗಲೇ ಅಧಿಸೂಚನೆ ಪ್ರಕಟಿಸಿದೆ. ಸದ್ಯ ಅಭ್ಯರ್ಥಿಗಳ ಅನುಕೂಲಕ್ಕಾಗಿ ಪೂರ್ವಭಾವಿ ಪರೀಕ್ಷೆಯ ದಿನಾಂಕವನ್ನು ಬದಲಾವಣೆ ಮಾಡಿ ಆದೇಶಿಸಲಾಗಿದೆ.

ಈ ಕುರಿತು ಡಾ. ರಾಕೇಶ್ ಕುಮಾರ್ ಕೆ. ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿ ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ 44 ಎಸ್‌ಎಸ್‌ಸಿ 2024, ದಿನಾಂಕ 21/06/2024ರಲ್ಲಿ 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಯಸ್ಸಿನ ನಿರ್ಬಂಧವಿಲ್ಲದೆ ಒಂದು ಬಾರಿಗೆ ಸೀಮಿತಗೊಳಿಸಿ (one time measure) ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಲಾಗಿತ್ತು.

KPSC Gazetted Probationers Recruitment Preliminary Exam Postponed

2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಕರ್ನಾಟಕ ಲೋಕಸೇವಾ ಆಯೋಗವು 15 ದಿನಗಳ ಕಾಲಾವಕಾಶವನ್ನು ನೀಡುವಂತೆ ಆದೇಶಿಸಿರುತ್ತದೆ ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ 'ಎ' ಮತ್ತು 'ಬಿ' ವೃಂದದ ಒಟ್ಟು 384 ಹುದ್ದೆಗಳಿಗೆ ದಿನಾಂಕ 21/07/2024ರಂದು ನಡೆಸಬೇಕಿದ್ದ ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ 25/08/2024ರಂದು ನಡೆಸಲು ಮರು ನಿಗದಿಪಡಿಸಿರುತ್ತದೆ ಎಂದು ತಿಳಿಸಿದೆ.

ಅರ್ಜಿ ಸಲ್ಲಿಕೆ ಮಾಡಲು ಹೆಚ್ಚುವರಿ ಅವಕಾಶ: ಈಗಾಗಲೇ ಕೆಪಿಎಸ್‌ಸಿ 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್) ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಸೀಮಿತಗೊಳಿಸಿ (One time measure) ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಲಾಗಿದೆ.

2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಸೀಮಿತಗೊಳಿಸಿ ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಲಾಗಿರುವುದರಿಂದ ಪೂರ್ವಭಾವಿ ಪರೀಕ್ಷೆಯ ದಿನಾಂಕವನ್ನು ಸಹ ವಿಸ್ತರಣೆ ಮಾಡಲಾಗಿದೆ.

ಅಭ್ಯರ್ಥಿಗಳು ಮನವಿ ಮಾಡಿದ್ದರು: ಕೆಪಿಎಸ್‌ಸಿ 2023-24ನೇ ಸಾಲಿಗೆ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಿತ್ತು. ಒಟ್ಟು 384 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್) ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಸೀಮಿತಗೊಳಿಸಿ ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ಈಗ ನೀಡಲಾಗಿದೆ.

ಮೊದಲು ಸರ್ಕಾರವು 2023-24ನೇ ಸಾಲಿಗೆ ಈಗಾಗಲೇ ಕೆಎಎಸ್ ಪರೀಕ್ಷೆ ಬರೆಯಲು ಒಂದು ಬಾರಿ ಎಂಬಂತೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ನೀಡಿತ್ತು. ಇದರಿಂದ ಕೆಲವು ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ದೊರೆಯಲಿದ್ದು ಉಳಿದ ಅಭ್ಯರ್ಥಿಗಳು ಅವಕಾಶ ವಂಚಿತರಾಗುತ್ತಿದ್ದಾರೆ. 2017-18 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ 2023-24ನೇ ಸಾಲಿನ ಅಧಿಸೂಚನೆಯಲ್ಲಿ ಪರೀಕ್ಷೆ ಬರೆಯಲು ವಯಸ್ಸಿನ ನಿರ್ಬಂಧವಿಲ್ಲದೆ ಹೆಚ್ಚುವರಿ ವಿಶೇಷ ಅವಕಾಶ ನೀಡುವಂತೆ ಅಭ್ಯರ್ಥಿಗಳು ಮನವಿ ಸಲ್ಲಿಕೆ ಮಾಡಿದ್ದರು.

ಆದ್ದರಿಂದ ಸರ್ಕಾರ ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 26/02/2024 ರಂದು ಹೊರಡಿಸಿರುವ ಅಧಿಸೂಚನೆಯಲ್ಲಿ 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ (ಕೆಎಎಸ್) ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಯಸ್ಸಿನ ನಿರ್ಬಂಧವಿಲ್ಲದೆ ಒಂದು ಬಾರಿಗೆ ಸೀಮಿತಗೊಳಿಸಿ ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಿ ಆದೇಶಿಸಿತ್ತು. ಈ ಅವಕಾಶ 15 ದಿನಗಳಿಗೆ ಮಾತ್ರ ಸೀಮಿತವಾಗಿದೆ. ಅಷ್ಟರಲ್ಲಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+