ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಎಸ್ಸಿಯಲ್ಲಿ 1543 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

|
Google Oneindia Kannada News

ಬೆಂಗಳೂರು, ನವೆಂಬರ್ 27: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಗ್ರೂಪ್ ಸಿ ವೃಂದದ ತಾಂತ್ರಿಕ/ ತಾಂತ್ರಿಕೇತರ ಹುದ್ದೆಗಳ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.

ರಾಜ್ಯದ ಎಲ್ಲಾ ಗ್ರಾ.ಪಂಗಳಲ್ಲಿ ಡೇಟಾ ಎಂಟ್ರಿ ಆಪರೇಟರ್ ನೇಮಕಾತಿರಾಜ್ಯದ ಎಲ್ಲಾ ಗ್ರಾ.ಪಂಗಳಲ್ಲಿ ಡೇಟಾ ಎಂಟ್ರಿ ಆಪರೇಟರ್ ನೇಮಕಾತಿ

ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳು ಸೇರಿ ಒಟ್ಟು 1543 ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 28-12-2017 ರಾತ್ರಿ 11.45ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

10ನೇ ಕ್ಲಾಸ್ ಪಾಸಾದವರು ಕೆಎಸ್ಆರ್‌ಪಿ ನೇಮಕಾತಿಗೆ ಅರ್ಜಿ ಹಾಕಿ10ನೇ ಕ್ಲಾಸ್ ಪಾಸಾದವರು ಕೆಎಸ್ಆರ್‌ಪಿ ನೇಮಕಾತಿಗೆ ಅರ್ಜಿ ಹಾಕಿ

KPSC invites 1543 technical and non techinical posts

ಶೈಕ್ಷಣಿಕ ವಿದ್ಯಾರ್ಹತೆ: ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅನುಸೂಚಿಯಲ್ಲಿ ಆಯಾ ಹುದ್ದೆಗಳ ಮುಂದೆ ಸೂಚಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಹೊಂದಿರಲೇಬೇಕು.

ಪದವಿ ಪೂರ್ವ ವಿದ್ಯಾರ್ಹತೆಯುಳ್ಳ ಹುದ್ದೆಗಳು: ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿನ ಆರ್ಟ್ ಅಂಡ್ ಕ್ರಾಫ್ಟ್ ಶಿಕ್ಷಕರು, ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ಮಾದರಿ ವಸತಿ ಶಾಲೆ (ನವೋದಯ), ಗಳಲ್ಲಿನ ಕಲಾ ಶಿಕ್ಷಕರು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಆಶ್ರಮ ಶಾಲಾ ಶಿಕ್ಷಕರು.

ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯುಳ್ಳ ಹುದ್ದೆಗಳು: ಮೇಲಿನ ಹುದ್ದೆಗಳನ್ನು ಹೊರೆತುಪಡಿಸಿ ಇನ್ನುಳಿದ ಆಯಾ ಹುದ್ದೆಗಳಿಗೆ ಅಭ್ಯರ್ಥಿಗಳು ಸಂಬಂಧಿಸಿದ ಸ್ನಾತಕೋತ್ತರ ಪದವಿ ಪೂರ್ಣಗೊಳಿಸರಬೇಕು.

ಆಯ್ಕೆ ವಿಧಾನ : ಎಲ್ಲಾ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

ತಾಂತ್ರಿಕ ಹುದ್ದೆಯ ಪರೀಕ್ಷಾ ವಿಧಾನ

ತಾಂತ್ರಿಕ ಹುದ್ದೆಯ ಪರೀಕ್ಷಾ ವಿಧಾನ

ತಾಂತ್ರಿಕ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯು ವಸ್ತು ನಿಷ್ಠ ಬಹು ಆಯ್ಕೆ ಮಾದರಿಯಲ್ಲಿದ್ದು, ಋಣಾತ್ಮಕ ಮೌಲ್ಯಮಾಪನವಿರುತ್ತದೆ. ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕಗಳನ್ನು ಕಳೆಯಲಾಗುವುದು.

ತಾಂತ್ರಿಕೇತರ ಹುದ್ದೆಯ ಪರೀಕ್ಷಾ ವಿಧಾನ

ತಾಂತ್ರಿಕೇತರ ಹುದ್ದೆಯ ಪರೀಕ್ಷಾ ವಿಧಾನ

ತಾಂತ್ರಿಕೇತರ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯು ವಸ್ತು ನಿಷ್ಠ ಬಹು ಆಯ್ಕೆ ಮಾದರಿಯಲ್ಲಿದ್ದು, ಋಣಾತ್ಮಕ ಮೌಲ್ಯಮಾಪನವಿರುತ್ತದೆ. ಪ್ರತಿ ತಪ್ಪು ಉತ್ತರಕ್ಕೆ

0.25 ಅಂಕಗಳನ್ನು ಕಳೆಯಲಾಗುವುದು.

ವಯೋಮಿತಿ

ವಯೋಮಿತಿ

ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷಗಳು ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.

ಅರ್ಜಿ ಶುಲ್ಕ

ಅರ್ಜಿ ಶುಲ್ಕ

ಅರ್ಜಿ ಶುಲ್ಕ: ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ 600 ರು. ಪ್ರವರ್ಗ 2(ಎ), 2(ಬಿ), 3(ಎ) ಮತ್ತು 3(ಬಿ) ಅಭ್ಯರ್ಥಿಗಳಿಗೆ 300 ರು. ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50ರು. ನಿಗದಿ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

English summary
Karnataka Public Service Commission invites online applications from eligible candidates for 1543 Group C Technical and Non Technical post.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X