KPSC Recruitment 2024: 400 ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಲೋಕಸೇವಾ ಆಯೋಗ
ಕರ್ನಾಟಕ ಲೋಕಸೇವಾ ಆಯೋಗವು (KPSC) 400 ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ 400 ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ 52,650 ರಿಂದ 97,100 ರೂಪಾಯಿವರೆಗೆ ವೇತನ ನೀಡಲಾಗುತ್ತದೆ. ಮೂಲ ವೃಂದದ 342 ಹುದ್ದೆಗಳು ಹಾಗೂ ಬ್ಯಾಕ್‌ಲಾಗ್‌ನ 48 ಹುದ್ದೆಗಳು ಸೇರಿ ಒಟ್ಟು 400 ಹುದ್ದೆಗಳಿವೆ. ಈ ಹುದ್ದೆಗಳು ಗ್ರೂಪ್ ಎ ಹುದ್ಎಗಳಾಗಿರುತ್ತವೆ.

ಯಾವುದೇ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದಿಂದ ಅಥವಾ ಭಾರತದಲ್ಲಿ ಕಾನೂನು ಮೂಲಕ ಸ್ಥಾಪಿಸಲಾದ ಪಶು ವಿಶ್ವವಿದ್ಯಾಲಯ ಅಥವಾ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಿಂದ ಕನಿಷ್ಠ ಶೇ.50 ಅಂಕಗಳೊಂದಿಗೆ ಬಿ.ವಿ.ಎಸ್.ಸಿ ಅಥವಾ ಬಿ.ವಿ.ಎಸ್.ಸಿ ಮತ್ತು ಎ.ಹೆಚ್ ಪದವಿ ಹೊಂದಿರಬೇಕು. ಅಂಗೀಕೃತ ವಿಶ್ವವಿದ್ಯಾಲಯದಿಂದ ಪಶುವೈದ್ಯಕೀಯ ಪದವಿ ಪಡೆದು ಕರ್ನಾಟಕ ವೆಟೆರಿನರಿ ಕೌನ್ಸಿಲ್‌ನಲ್ಲಿ ನೋಂದಾಯಿಸಲ್ಪಟ್ಟ ಪುರುಷ, ಮಹಿಳೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹ.
ಅರ್ಜಿ ಸಲ್ಲಿಸಲು ವಯಸ್ಸಿನ ಅರ್ಹತೆ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ಕನಿಷ್ಠ 18 ವರ್ಷ ವಯಸ್ಸಾಗಿರಬೇಕು
ಮೀಸಲು ವರ್ಗಗಳಲ್ಲಿ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.

ಅರ್ಜಿ ಶುಲ್ಕ ಹೀಗಿದೆ:-
ಸಾಮಾನ್ಯ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 600 ರೂ.
2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 300 ರೂಪಾಯಿ
ಮಾಜಿ ಸೈನಿಕರಿಗೆ 50 ರೂಪಾಯಿ
ಎಸ್‌ಸಿ ಎಸ್‌ಟಿ, ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:-
ಆಗಸ್ಟ್ 12ರಂದು ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ
ಸೆಪ್ಟೆಂಬರ್ 12ಕ್ಕೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ
ಆಯ್ಕೆ ಪ್ರಕ್ರಿಯೆ
ಕನ್ನಡ ಕಡ್ಡಾಯ ಭಾಷಾ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ. ಹೆಚ್ಚಿನ ಮಾಹಿತಿಗೆ https://kpsc.kar.nic.in/ ಗೆ ಭೇಟಿ ನೀಡಿ.












Click it and Unblock the Notifications