ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ

ಬೆಂಗಳೂರು, ನವೆಂಬರ್ 30 : ಕರ್ನಾಟಕ ಲೋಕಸೇವಾ ಆಯೋಗವು ಹಲವು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 26, 2015.

ವಿವಿಧ ಇಲಾಖೆಗಳಲ್ಲಿನ ಗ್ರೂಪ್ 'ಎ', ಗ್ರೂಪ್ 'ಬಿ' ಮತ್ತು ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದಲ್ಲಿನ ಗ್ರೂಪ್ 'ಬಿ' ಮತ್ತು 'ಸಿ' ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

kpsc

ಖಾಲಿ ಇರುವ ಗ್ರೂಪ್ 'ಎ' ಹುದ್ದೆಗಳ ವಿವರ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಹೈ-ಕರ್ನಾಟಕ ಭಾಗ 7) 7 ಹುದ್ದೆಗಳು. ಪೌರಾಡಳಿತ ನಿರ್ದೇಶನಾಲಯದಲ್ಲಿ ಮಹಾನಗರ ಪಾಲಿಕೆಗಳಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರು (ಸಿವಿಲ್) ಒಟ್ಟು 2 ಹುದ್ದೆ (ಹೈ-ಕರ್ನಾಟಕ 1).

ಪೌರಾಡಳಿತ ನಿರ್ದೇಶನಾಲಯದಲ್ಲಿ ಮಹಾನಗರ ಪಾಲಿಕೆಗಳಲ್ಲಿ ಅಭಿವೃದ್ಧಿ ಅಧಿಕಾರಿ ಒಟ್ಟು 8 ಹುದ್ದೆಗಳು (ಹೈ-ಕರ್ನಾಟಕ 2). ಪೌರಾಡಳಿತ ನಿರ್ದೇಶನಾಲಯದಲ್ಲಿ ಮಹಾನಗರ ಪಾಲಿಕೆಗಳಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರು (ನೀರು ಸರಬರಾಜು ಮತ್ತು ಒಳಚರಂಡಿ) ಒಟ್ಟು ಹುದ್ದೆ 8 (ಹೈ-ಕರ್ನಾಟಕ 2). [ಕನ್ನಡದಲ್ಲಿ ನೇಮಕಾತಿ ಆದೇಶ ಓದಿ]

ಗ್ರೂಪ್ 'ಬಿ' ಹುದ್ದೆಗಳು : ಕೈಗಾರಿಕೆ ಮತ್ತು ವಾಣಿಜ್ಯ ನಿರ್ದೇಶನಾಲಯದಲ್ಲಿ 13, ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯಲ್ಲಿ 9, ಪೌರಾಡಳಿತ ನಿರ್ದೇಶನಾಲಯದಲ್ಲಿ 12, ಭೂ ಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿ 4 ಸೇರಿದಂತೆ ಹಲವು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮದಲ್ಲಿ ಸಹಾಯಕ ವ್ಯವಸ್ಥಾಪಕ 11, ಹಿರಿಯ ಸಹಾಯಕ (ಲೆಕ್ಕಪತ್ರ) 35, ಗುಣಮಟ್ಟ ಪರಿವೀಕ್ಷಕ 30 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ದಿನಾಂಕಗಳು : ಅರ್ಜಿ ಸಲ್ಲಿಸಲು ನವೆಂಬರ್ 24ರಿಂದ ಅವಕಾಶ ನೀಡಲಾಗಿದೆ. 2015ರ ಡಿಸೆಂಬರ್ 26ರ ರಾತ್ರಿ 11.45ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ ಡಿಸೆಂಬರ್ 28.

ಅರ್ಜಿಗಳನ್ನು ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಬಹುದಾಗಿದೆ. ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಕೆ ಮಾಡುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಅರ್ಜಿ ಶುಲ್ಕ, ಅರ್ಜಿ ತುಂಬುವ ವಿಧಾನ ಮುಂತಾದ ಮಾಹಿತಿಗಳಿಗಾಗಿ www.kpsc.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+