KPSC Jobs: 384 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗೆ ಶೀಘ್ರವೇ ಅಧಿಸೂಚನೆ

ಬೆಂಗಳೂರು, ಫೆಬ್ರವರಿ 07: ಕೆಪಿಎಸ್‌ಸಿಯ (ಕರ್ನಾಟಕ ಲೋಕಸೇವಾ ಆಯೋಗ) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಭರ್ತಿಗೆ ತಕ್ಷಣವೇ ಅಧಿಸೂಚನೆ ಹೊರಡಿಸಲು ತೀರ್ಮಾನಿಸಲಾಗಿದೆ.

2023-24ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಮೀಸಲಾತಿ ನಿಯಮಗಳಂತೆ ವರ್ಗೀಕರಿಸಿ ಪ್ರಸ್ತಾವನೆಯನ್ನು ಶುಕ್ರವಾರ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಕಳುಹಿಸಿದೆ.

KPSC Job: Recruitment Process for 384 gazetted probationary post started

ಗ್ರೂಪ್ ಎ ಮತ್ತು ಗ್ರೂಪ್ ಬಿ ಯಲ್ಲಿನ 384 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸುವಂತೆ ತಿಳಿಸಿದೆ. ಹೀಗಾಗಿ 384 ಹುದ್ದೆಗಳ ನೇಮಕಾತಿಯ ಅಧಿಸೂಚನೆ, ಆಯ್ಕೆ ಪ್ರಕ್ರಿಯೆ ಬಗ್ಗೆ ಶೀಘ್ರವೇ ನೋಟಿಫಿಕೇಷನ್ ಬರಲಿದೆ.

ಈ ಹಿನ್ನೆಲೆಯಲ್ಲಿ ಅಧ್ಯಕ್ಷರು ಮತ್ತು ಐವರು ಸದಸ್ಯರ ಅನುಪಸ್ಥಿತಿಯಲ್ಲಿ ಫೆಬ್ರವರಿ 6 ಕೆಪಿಎಸ್‌ಸಿ ಸಭೆ ನಡೆದಿದೆ. ಈ ಸಭೆಯಲ್ಲಿ ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ತಕ್ಷಣವೇ ಅಧಿಸೂಚನೆ ಹೊರಡಿಸಲು ನಿರ್ಧರಿಸಲಾಗಿದೆ.

KPSC Job: Recruitment Process for 384 gazetted probationary post started

ಗ್ರೂಪ್ "ಎ'ನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ವಾಣಿಜ್ಯ ತೆರಿಗೆ, ಖಜಾನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆ, ಒಳಾಡಳಿತ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಒಟ್ಟು 159 ಹು್ದೆಗಳ ಭರ್ತಿಗೆ ಕ್ರಮಗ ಕೈಗೊಳ್ಳುವಂತೆ ತಿಳಿಸಲಾಗಿದೆ.

ಇನ್ನು, ಗ್ರೂಪ್ 'ಬಿ'ನಲ್ಲಿ ಕಂದಾಯ ಇಲಾಖೆ, ಕಾರ್ಮಿಕ ಇಲಾಖೆ, ಸಹಕಾರ ಇಲಾಖೆ, ಆರ್ಥಿಕ ಇಲಾಖೆ, ಲೆಕ್ಕ ಪರಿಶೋಧನಾ ಇಲಾಖೆ, ಕೌಶಲಾಭಿವೃದ್ಧಿ ಇಲಾಖೆ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಆರ್ಥಿಕ ಇಲಖೆ (ಖಜಾನೆ), ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ಸರ್ಕಾರದ ಸಚಿವಾಲಯ ಮತ್ತು ಸಮಾಜ ಕಲ್ಯಾಣ ಇಲಾಖೆಯಲ್ಲಿ ಒಟ್ಟು 225 ಹುದ್ದೆಗಳಿದ್ದು, ಇವುಗಳ ನೇಮಕಾತಿಗೂ ಕ್ರಯ ಕೈಗೊಳ್ಳುವಂತೆ ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+