ವಾಣಿಜ್ಯ ತೆರಿಗೆ ಇಲಾಖೆ ನೇಮಕಾತಿ; 230 ಹುದ್ದೆಗೆ 1.60 ಲಕ್ಷ ಅರ್ಜಿಗಳು!

ಬೆಂಗಳೂರು, ಜನವರಿ 19: ಕರ್ನಾಟಕ ಲೋಕಾಸೇವಾ ಆಯೋಗ (ಕೆಪಿಎಸ್‌ಸಿ) ವಾಣಿಜ್ಯ ತೆರಿಗೆ ಇಲಾಖೆಯಲ್ಲಿನ ವಾಣಿಜ್ಯ ತೆರಿಗೆ ಪರಿವೀಕ್ಷಕರ 230 ಹುದ್ದೆಗಳಿಗೆ ಜನವರಿ 21ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಿದೆ. ಈ ಹುದ್ದೆಗಳಿಗೆ ಒಟ್ಟು ಸಲ್ಲಿಕೆಯಾದ ಅರ್ಜಿಗಳು 1,60,501.

ವಾಣಿಜ್ಯ ತೆರಿಗೆ ಇಲಾಖೆಯಲ್ಲಿನ ವಾಣಿಜ್ಯ ತೆರಿಗೆ ಪರಿವೀಕ್ಷಕರ 230 ಹುದ್ದೆಗಳ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ರಾಜ್ಯದ 29 ಜಿಲ್ಲೆಗಳ 413 ಉಪ ಕೇಂದ್ರಗಳಲ್ಲಿ ನಡೆಯಲಿದೆ.

KPSC Jobs One Lakh Applications For 230 Posts

ಬೆಳಗ್ಗೆ 10ರಿಂದ 11.30ರ ತನಕ ಸಾಮಾನ್ಯ ಜ್ಞಾನ ಪತ್ರಿಕೆ-1 ಮತ್ತು ಮಧ್ಯಾಹ್ನ 2 ರ ರಿಂದ 4ರ ತನಕ ಸಾಮಾನ್ಯ ಕನ್ನಡ ಮತ್ತು ಸಾಮಾನ್ಯ ಇಂಗ್ಲಿಶ್, ಕಂಪ್ಯೂಟರ್ ಜ್ಞಾನದ ಪತ್ರಿಕೆ-2 ಪರೀಕ್ಷೆ ನಿಗದಿಯಾಗಿದೆ. ಜನವರಿ 20ರಂದು ಕಡ್ಡಾಯ ಕನ್ನಡ ಪರೀಕ್ಷೆ ನಡೆಯಲಿದೆ.

ಒಟ್ಟು ಅರ್ಜಿಗಳು; ಖಾಲಿ ಇರುವ 230 ಹುದ್ದೆಗಳಿಗೆ ಒಟ್ಟು ಅರ್ಜಿ ಸಲ್ಲಿಕೆ ಮಾಡಿರುವವರು 1,60,501 ಅಭ್ಯರ್ಥಿಗಳು. ಇವರಲ್ಲಿ ಪುರುಷರು 1,00,320 ಮತ್ತು ಮಹಿಳೆಯರು 60,330. ವಿಶೇಷ ಚೇತನರು 2,130 ಮತ್ತು ತೃತೀಯ ಲಿಂಗಿಗಳು 31.

ಕೆಪಿಎಸ್‌ಸಿ 2023ರ ಸೆಪ್ಟೆಂಬರ್‌ನಲ್ಲಿ ವಾಣಿಜ್ಯ ತೆರಿಗೆ ಪರಿವೀಕ್ಷಕ 230 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಿತ್ತು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 33,450-62,600 ರೂ. ವೇತನವನ್ನು ನಿಗದಿ ಮಾಡಲಾಗಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವವರಿಗೆ ಅರ್ಥಶಾಸ್ತ್ರ/ ಗಣಿತ ವಿಷಯ ಇರುವ ಪದವಿ ಅಥವ ಕಾಮರ್ಸ್ ಪದವಿ ವಿದ್ಯಾರ್ಹತೆ ನಿಗದಿ ಮಾಡಲಾಗಿತ್ತು. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಕೆ ಮಾಡಲು ಅವಕಾಶ ನೀಡಲಾಗಿತ್ತು.

ಕರ್ನಾಟಕ ಲೋಕಾಸೇವಾ ಆಯೋಗ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಆವರಣವನ್ನು ಐಪಿಸಿ 1973ರ ಕಲಂ 144ರಲ್ಲಿನ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿರ್ಬಂಧಿತ ಪ್ರದೇಶವೆಂದು ಜಿಲ್ಲಾಧಿಕಾರಿಗಳು ಘೋಷಣೆ ಮಾಡಿದ್ದಾರೆ.

ಜನವರಿ 20ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು ಜನವರಿ 21ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 11.30ರ ತನಕ, ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದೆ.

ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‌ನೆಟ್‌ ಸೆಂಟರ್‌ಗಳನ್ನು ಕಾರ್ಯನಿರ್ವಹಿಸದಂತೆ ಆದೇಶಿಸಲಾಗಿದೆ. ಸದರಿ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+