KPSC recruitment: 264 ಭೂಮಾಪಕ ಹುದ್ದೆ, ವೇತನ, ವಿದ್ಯಾರ್ಹತೆ
ಬೆಂಗಳೂರು, ಮಾರ್ಚ್ 01: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆ ಇಲಾಖೆಯಲ್ಲಿನ 264 ಭೂಮಾಪಕರು ಸಮೂಹ-ಸಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 10/4/2024.
ಉಳಿಕೆ ಮೂಲ ವೃಂದ 264 ಗ್ರೂಪ್-ಸಿ ಭೂಮಾಪಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 23,500-47,650 ರೂ.ಗಳು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು 21/7/2024 ಮತ್ತು ಕನ್ನಡ ಪರೀಕ್ಷೆಯನ್ನು 20/7/2024ರಂದು ನಡೆಸಲಾಗುತ್ತದೆ ತಾತ್ಕಾಲಿಕ ದಿನಾಂಕ ನಿಗದಿ ಮಾಡಲಾಗಿದೆ.

ವಿದ್ಯಾರ್ಹತೆ ಮಾಹಿತಿ: ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಯಾವುದೇ ವಿಶ್ವವಿದ್ಯಾಲಯದಲ್ಲಿ ಬಿ.ಇ.(ಸಿವಿಲ್) ಅಥವಾ ಬಿ.ಟೆಕ್ (ಸಿವಿಲ್) ಅಥವಾ ಸಿವಿಲ್ ಇಂಜಿನಿಯರಿಂಗ್ ಡಿಪ್ಲೋಮಾದಲಿ ಉತ್ತೀರ್ಣರಾಗಿರಬೇಕು.
ಅಥವಾ ಪದವಿ ಪೂರ್ವ ಶಿಕ್ಷಣ (ಪಿ.ಯು.ಸಿ) ಅಥವಾ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ಜರುಗಿಸುವ 12ನೇ ತರಗತಿ (ಸಿ.ಬಿ.ಎಸ್.ಇ. ಅಥವಾ ಐ.ಸಿ.ಎಸ್.ಇ) ಇವುಗಳಲ್ಲಿ, ವಿಜ್ಞಾನ ವಿಷಯವನ್ನು ಪಡೆದು ಗಣಿತ ವಿಷಯದಲ್ಲಿ ಶೇ 60ಕ್ಕಿಂತ ಕಡಿಮೆ ಇಲ್ಲದಂತೆ ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು.
ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ ಲ್ಯಾಂಡ್ ಅಂಡ್ ಸಿಟಿ ಸರ್ವೆಯ ಪದವಿ ಪೂರ್ವ ಡಿಪ್ಲೋಮಾದಲಿ ಉತ್ತೀರ್ಣರಾಗಿರುವವರು ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರದ ಉದ್ಯೋಗ ಹಾಗೂ ತರಬೇತಿ ಇಲಾಖೆ ನಡೆಸುವ ಐ.ಟಿ.ಐ, ಇನ್ ಸರ್ವೆ ಟ್ರೇಡ್‌ನಲ್ಲಿ ಉತ್ತೀರ್ಣರಾಗಿವವರು ಅರ್ಜಿ ಸಲ್ಲಿಕೆಗೆ ಅರ್ಹರು.
ವಯೋಮಿತಿ: ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮ 1977ರಲ್ಲಿ ನಿರ್ದಿಷ್ಟಪಡಿಸಿರುವಂತೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಆಯಾ ಮೀಸಲಾತಿ ಮುಂದೆ ನಮೂದಿಸಿರುವ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ ಮೀರಬಾರದು.
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ ಸಾಮಾನ್ಯ ಅರ್ಹತೆ 35 ವರ್ಷ. ಪ್ರವರ್ಗ 2 (ಎ), 2 (ಬಿ), 3 (ಎ), 3 (ಬಿ) 38 ವರ್ಷಗಳು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 40 ವರ್ಷಗಳು.
ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಸಾಮಾನ್ಯ ವರ್ಗಕ್ಕೆ 600 ರೂ., ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಅಭ್ಯರ್ಥಿಗಳಿಗೆ 300 ರೂ., ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ., ಎಸ್‌ಸಿ/ ಎಸ್‌ಟಿ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ.
ಅಭ್ಯರ್ಥಿಗಳು ಒಮ್ಮೆ ಪಾವತಿ ಮಾಡಿದ ಶುಲ್ಕವನ್ನು ವಾಪಸ್ ನೀಡಲಾಗುವುದಿಲ್ಲ. ಕೆಪಿಎಸ್‌ಸಿ ನಡೆಸುವ ಇತರ ಪರೀಕ್ಷೆಗಳಿಗೆ ಹೊಂದಿಕೆ ಮಾಡಿಕೊಳ್ಳಲಾಗುವುದಿಲ್ಲ. ಶುಲ್ಕವನ್ನು ಪಾವತಿ ಮಾಡದಿದ್ದರೆ ಅಂತಹ ಅರ್ಜಿಯನ್ನು ತಿರಸ್ಕಾರ ಮಾಡಲಾಗುತ್ತದೆ. ನೆಟ್ ಬ್ಯಾಂಕ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಯುಪಿಐ ಪಾವತಿ ಮೂಲಕ ಶುಲ್ಕ ಕಟ್ಟಬಹುದು.
ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಬೇಕು. ಅರ್ಜಿ ಸಲ್ಲಿಸುವಾಗ ಎಲ್ಲಾ ಮಾಹಿತಿಗಳನ್ನು ತಪ್ಪದೇ ಓದಿ ಸರಿಯಾದ ವಿವರಗಳನ್ನು ಭರ್ತಿ ಮಾಡಬೇಕು. ಒಮ್ಮೆ ಅರ್ಜಿ ಸಲ್ಲಿಸಿದ ಬಳಿಕ ನಂತರ ಅರ್ಜಿಯಲ್ಲಿನ ವಿವರ ತಿದ್ದುಪಡಿ/ ಸೇರ್ಪಡೆ ಮಾಡುವಂತೆ ಮನವಿಗಳು ಬಂದರೆ ತಿಸ್ಕರಿಸಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.
ಅಭ್ಯರ್ಥಿಗಳು ತಮ್ಮ ಮಾಹಿತಿಗಾಗಿ ಭರ್ತಿ ಮಾಡಿ ಸಲ್ಲಿಸಿದ ಅರ್ಜಿಯ ಒಂದು ಫೋಟೋ ಕಡ್ಡಾಯವಾಗಿ ತಮ್ಮೊಂದಿಗೆ ಇಟ್ಟುಕೊಳ್ಳಲು ಸೂಚಿಸಿದೆ. ಆಯೋಗದಿಂದ ಯಾವುದೇ ಕಾರಣಕ್ಕೂ ಅರ್ಜಿಯ ಪ್ರತಿಯನ್ನು ಒದಗಿಸಲಾಗುವುದಿಲ್ಲ. ಹುದ್ದೆಗಳಿಗೆ ನಿಗದಿಪಡಿಸಿರುವ ವಯೋಮಿತಿ, ವಿದ್ಯಾರ್ಹತೆ, ಮೀಸಲಾತಿ, ಇತ್ಯಾದಿಗಳಿಗನುಗುಣವಾಗಿ ಅರ್ಜಿಯಲ್ಲಿ, ಸರಿಯಾದ ಮಾಹಿತಿ ನೀಡುವುದು ಅಭ್ಯರ್ಥಿಗಳ ಜವಾಬ್ದಾರಿಯಾಗಿರುತ್ತದೆ. ತಪ್ಪು ಮಾಹಿತಿ ನೀಡಿದಲ್ಲಿ ಅಂತಹ ಅಭ್ಯರ್ಥಿಗಳನ್ನು ಆಯೋಗವು ನಡೆಸುವ ಯಾವುದೇ ನೇಮಕಾತಿ/ ಪರೀಕ್ಷೆಗಳಿಂದ 3 ವರ್ಷಕ್ಕೆ ಡಿಬಾರ್ ಮಾಡಲಾಗುವುದು.
ಈ ಅಧಿಸೂಚನೆಯು ಜಾರಿಯಾದ ಮೇಲೆ ಈ ಅಧಿಸೂಚನೆಯಲ್ಲಿ ನಮೂದಿಸಿರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸರ್ಕಾರವು ಯಾವುದೇ ನಿಯಮಗಳು ಮತ್ತು ನಿರ್ದೇಶನಗಳನ್ನು ಜಾರಿ ಮಾಡಿದಲ್ಲಿ ತಿದ್ದುಪಡಿ ಮಾಡಿದಲ್ಲಿ/ ಪರಿಷ್ಕರಿಸಿದಲ್ಲಿ ಅವುಗಳನ್ನು ನೇಮಕಾತಿ ಪ್ರಕ್ರಿಯೆಯ ಸಮುಚಿತ ಹಂತದಲ್ಲಿ ಸೇರಿಸಿಕೊಳ್ಳಲಾಗುವುದು. ಆಯೋಗವು ಅಭ್ಯರ್ಥಿಗಳೊಂದಿಗೆ ಯಾವುದೇ ಪತ್ರ ವ್ಯವಹಾರವನ್ನು ನಡೆಸುವುದಿಲ್ಲ. ವಿಳಾಸ ಬದಲಾವಣೆ ಇದ್ದಲ್ಲಿ ಅಭ್ಯರ್ಥಿಗಳು ಲಿಖಿತ ಮನವಿಯ ಮೂಲಕ ಆಯೋಗದ ಗಮನಕ್ಕೆ ಸಲ್ಲಿಸಬೇಕು. ಈ ವಿಳಾಸ ಬದಲಾವಣೆಯನ್ನು ಪರಿಗಣಿಸಲು ಆಯೋಗವು ಪ್ರಯತ್ನಿಸುವುದು. ಈ ಬಗ್ಗೆ ಅಭ್ಯರ್ಥಿಗಳು ಎಚ್ಚರವಹಿಸತಕ್ಕದ್ದು.
ವಿವರವಾದ ಅಧಿಸೂಚನೆಗಾಗಿ ವೆಬ್‌ಸೈಟ್ ವಿಳಾಸ https://kpsc.kar.nic.in/.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು. ಕೇಂದ್ರ ಕಛೇರಿಯ ಮಾಹಿತಿ ಕೇಂದ್ರ 080-30574957/ 30574901, ಪ್ರಾಂತೀಯ ಕಛೇರಿ ಮೈಸೂರು 0821-2545956, ಪ್ರಾಂತೀಯ ಕಛೇರಿ ಬೆಳಗಾವಿ 0831-2475345, ಪ್ರಾಂತೀಯ ಕಛೇರಿ ಕಲಬುರ್ಗಿ 08472-227944, ಪ್ರಾಂತೀಯ ಕಛೇರಿ ಶಿವಮೊಗ್ಗ 08182-228099












Click it and Unblock the Notifications