KPSC Recruitment; ಹೈದರಾಬಾದ್-ಕರ್ನಾಟಕ, 100 ಹುದ್ದೆಗಳು
ಬೆಂಗಳೂರು, ಮಾರ್ಚ್ 11: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆ ಇಲಾಖೆಯಲ್ಲಿನ ಭೂಮಾಪಕರು ಸಮೂಹ-ಸಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಹೈದರಾಬಾದ್-ಕರ್ನಾಟಕ ವೃಂದದಲ್ಲಿ 100 ಹುದ್ದೆಗಳಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು 10/4/2024 ಕೊನೆಯ ದಿನವಾಗಿದೆ.
ಗ್ರೂಪ್-ಸಿ ಹೈದರಾಬಾದ್- ಕರ್ನಾಟಕ ಸ್ಥಳೀಯ ವೃಂದದ ಹುದ್ದೆಗಳು ಇದಾಗಿವೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 23,500-47,650 ರೂ.ಗಳ ವೇತನ ಶ್ರೇಣಿ ನಿಗದಿ ಮಾಡಲಾಗಿದೆ. ಈ ಹುದ್ದೆಗಳ ಕನ್ನಡ ಭಾಷಾ ಪರೀಕ್ಷೆ 6/7/2024. ಸ್ಪರ್ಧಾತ್ಮಕ ಪರೀಕ್ಷೆ 7/7/2024ರಂದು ನಡೆಸಲಾಗುತ್ತದೆ (ತಾತ್ಕಾಲಿಕ ದಿನಾಂಕ).

ವಿದ್ಯಾರ್ಹತೆ, ವಯೋಮಿತಿ: ಭೂಮಾಪಕರು ಹುದ್ದೆಗೆ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಭಾರತದಲ್ಲಿ ಕಾನೂನು ರೀತ್ಯಾ ಸ್ಥಾಪಿತವಾದ ಯಾವುದೇ ವಿಶ್ವವಿದ್ಯಾಲಯದಲ್ಲಿ ಬಿ.ಇ.(ಸಿವಿಲ್) ಅಥವಾ ಬಿ.ಟೆಕ್ (ಸಿವಿಲ್) ಅಥವಾ ಸಿವಿಲ್ ಇಂಜಿನಿಯರಿಂಗ್ ಡಿಪ್ಲೋಮಾದಲಿ ಉತ್ತೀರ್ಣರಾಗಿರಬೇಕು.
ಪದವಿ ಪೂರ್ವ ಶಿಕ್ಷಣ (ಪಿ.ಯು.ಸಿ) ಅಥವಾ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ಜರುಗಿಸುವ 12ನೇ ತರಗತಿ (ಸಿ.ಬಿ.ಎಸ್.ಇ. ಅಥವಾ ಐ.ಸಿ.ಎಸ್.ಇ) ಇವುಗಳಲ್ಲಿ, ವಿಜ್ಞಾನ ವಿಷಯವನ್ನು ಪಡೆದು ಗಣಿತ ವಿಷಯದಲ್ಲಿ ಶೇ 60ಕ್ಕಿಂತ ಕಡಿಮೆ ಇಲ್ಲದಂತೆ ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು.
ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಸರ್ಕಾರದ ವೃತ್ತಿ ಶಿಕ್ಷಣ ಇಲಾಖೆ ನಡೆಸುವ ಲ್ಯಾಂಡ್ ಅಂಡ್ ಸಿಟಿ ಸರ್ವೆಯ ಪದವಿ ಪೂರ್ವ ಡಿಪ್ಲೋಮಾದಲಿ ಉತ್ತೀರ್ಣರಾಗಿದ್ದಲ್ಲಿ ಅಥವ ಕರ್ನಾಟಕ ಸರ್ಕಾರದ ಉದ್ಯೋಗ ಹಾಗೂ ತರಬೇತಿ ಇಲಾಖೆ ನಡೆಸುವ ಐ.ಟಿ.ಐ, ಇನ್ ಸರ್ವೆ ಟ್ರೇಡ್‌ನಲ್ಲಿ ಉತ್ತೀರ್ಣರಾಗಿವವರು ಅರ್ಜಿ ಹಾಕಬಹುದು.
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಠ ವಯೋಮಿತಿ ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35. ಪ್ರವರ್ಗ 2 (ಎ), 2 (ಬಿ), 3 (ಎ), 3 (ಬಿ) 38 ವರ್ಷ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 40 ವರ್ಷಗಳು. ನಿಯಮಗಳ ಅನ್ವಯ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಜಿ ಶುಲ್ಕ ಪಾವತಿ ಮಾಡಬೇಕು. ಒಮ್ಮೆ ಕಟ್ಟಿದ ಶುಲ್ಕವನ್ನು ಯಾವುದೇ ಕಾರಣಕ್ಕೂ ವಾಪಸ್ ನೀಡುವುದಿಲ್ಲ. ಕೆಪಿಎಸ್‌ಸಿ ನಡೆಸುವ ಇತರ ಪರೀಕ್ಷೆಗಳಿಗೆ ಹೊಂದಾಣಿಕೆ ಮಾಡಿಕೊಳ್ಳಲ್ಲ. ಶುಲ್ಕವನ್ನು ಪಾವತಿಸದ ಅರ್ಜಿ ತಿರಸ್ಕಾರ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 600 ರೂ., ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಅಭ್ಯರ್ಥಿಗಳಿಗೆ 300 ರೂ., ಮಾಜಿ ಸೈನಿಕರು 50 ರೂ. ಶುಲ್ಕ ಪಾವತಿ ಮಾಡಬೇಕು. ಎಸ್‌ಸಿ/ ಎಸ್‌ಟಿ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇದೆ.
ವಿವರವಾದ ಅಧಿಸೂಚನೆಗಾಗಿ ವೆಬ್‌ಸೈಟ್ ವಿಳಾಸ https://kpsc.kar.nic.in/.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು. ಕೇಂದ್ರ ಕಛೇರಿಯ ಮಾಹಿತಿ ಕೇಂದ್ರ 080-30574957/ 30574901, ಪ್ರಾಂತೀಯ ಕಛೇರಿ ಬೆಳಗಾವಿ 0831-2475345, ಪ್ರಾಂತೀಯ ಕಛೇರಿ ಕಲಬುರ್ಗಿ 08472-227944.












Click it and Unblock the Notifications